
ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಭಾರತ ತಂಡವು ಕೇವಲ 46 ರನ್‌ಗಳಿಗೆ ಆಲೌಟ್ ಆಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿತು. ಆದರೆ ಈ ನಿರ್ಧಾರ ತಪ್ಪು ಎಂಬುದನ್ನು ನ್ಯೂಝಿಲೆಂಡ್ ವೇಗಿಗಳು ಕೇವಲ 31.2 ಓವರ್ಗಳಲ್ಲಿ ನಿರೂಪಿಸಿದ್ದರು. ಅಂದರೆ 188 ಎಸೆತಗಳಲ್ಲಿ ಭಾರತ ತಂಡವು ಕೇವಲ 46 ರನ್ ಗಳಿಸಿ ಆಲೌಟ್ ಆಯಿತು. ಈ ಅತ್ಯಲ್ಪ ಮೊತ್ತದೊಂದಿಗೆ ಟೀಮ್ ಇಂಡಿಯಾ 5 ಅವಮಾನಕರ ದಾಖಲೆಗಳನ್ನು ಮೈಮೇಲೆ ಎಳೆದುಕೊಂಡಿದೆ. ಆ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…
ಇದನ್ನೂ ಓದಿ: IPL 2025: ಮೂವರು ಆಟಗಾರರಿಗೆ 55 ಕೋಟಿ ರೂ. ನೀಡಿದ SRH