India vs New Zealand: ಟೀಮ್ ಇಂಡಿಯಾ ಆಟಗಾರರ ಮುಂದಿದೆ 5 ದಾಖಲೆಗಳು

India vs New zealand: ಟಿ20 ಕ್ರಿಕೆಟ್​ನಲ್ಲಿ 150 ಸಿಕ್ಸ್​ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆ ಬರೆಯಲು ರೋಹಿತ್ ಶರ್ಮಾ ಇನ್ನು ಕೇವಲ 3 ಸಿಕ್ಸ್​ಗಳ ಅಗತ್ಯವಿದೆ. ಅಷ್ಟೇ ಅಲ್ಲದೆ 3 ಸಿಕ್ಸ್​ ಬಾರಿಸಿದರೆ ಈ ಸಾಧನೆ ಮಾಡಿದ 2ನೇ ಆಟಗಾರ ಎಂಬ ದಾಖಲೆಯನ್ನೂ ಕೂಡ ಬರೆಯಲಿದ್ದಾರೆ. ಸದ್ಯ ಈ ಪಟ್ಟಿಯಲ್ಲಿ ಮಾರ್ಟಿನ್ ಗಪ್ಟಿಲ್ (161) ಅಗ್ರಸ್ಥಾನದಲ್ಲಿದ್ದಾರೆ.

India vs New Zealand: ಟೀಮ್ ಇಂಡಿಯಾ ಆಟಗಾರರ ಮುಂದಿದೆ 5 ದಾಖಲೆಗಳು
team india
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 21, 2021 | 5:21 PM

ಕೋಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ಇಂದು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ T20 ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ (IND vs NZ Kolkata T20) ನಡೆಯಲಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಈಗಾಗಲೇ ಜೈಪುರ ಮತ್ತು ರಾಂಚಿಯಲ್ಲಿ ನಡೆದ ಮೊದಲ ಎರಡು ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಹೀಗಾಗಿ ಟೀಮ್ ಇಂಡಿಯಾ ಪಾಲಿಗೆ ಇದೊಂದು ಔಪಚಾರಿಕ ಪಂದ್ಯ. ಇದಾಗ್ಯೂ ಕೊನೆಯ ಟಿ20 ಪಂದ್ಯದಲ್ಲಿ ಭಾರತದ ಆಟಗಾರರು ಹಲವು ದಾಖಲೆಗಳನ್ನು ಮಾಡಬಲ್ಲರು. ಯಾವೆಲ್ಲಾ ದಾಖಲೆಗಳು ಟೀಮ್ ಇಂಡಿಯಾ ಆಟಗಾರರ ಮುಂದಿದೆ ನೋಡೋಣ.

ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 50+ ರನ್​ಗಳಿಸಿದ ಬ್ಯಾಟರ್ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕೊಹ್ಲಿ 29 ಅರ್ಧಶತಕದೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಇದೀಗ ರೋಹಿತ್ ಶರ್ಮಾ 4 ಶತಕ ಹಾಗೂ 25 ಅರ್ಧಶತಕದೊಂದಿಗೆ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಹೀಗಾಗಿ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ಹಿಟ್​ಮ್ಯಾನ್ ಬ್ಯಾಟ್​ನಿಂದ ಅರ್ಧಶತಕ ಮೂಡಿಬಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ ಅರ್ಧಶತಕಕ್ಕಿಂತ ಅಧಿಕ ರನ್​ ಬಾರಿಸಿದ ವಿಶ್ವ ದಾಖಲೆ ರೋಹಿತ್ ಶರ್ಮಾ ಪಾಲಾಗಲಿದೆ.

ಇನ್ನು ಟಿ20 ಕ್ರಿಕೆಟ್​ನಲ್ಲಿ 150 ಸಿಕ್ಸ್​ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆ ಬರೆಯಲು ರೋಹಿತ್ ಶರ್ಮಾ ಇನ್ನು ಕೇವಲ 3 ಸಿಕ್ಸ್​ಗಳ ಅಗತ್ಯವಿದೆ. ಅಷ್ಟೇ ಅಲ್ಲದೆ 3 ಸಿಕ್ಸ್​ ಬಾರಿಸಿದರೆ ಈ ಸಾಧನೆ ಮಾಡಿದ 2ನೇ ಆಟಗಾರ ಎಂಬ ದಾಖಲೆಯನ್ನೂ ಕೂಡ ಬರೆಯಲಿದ್ದಾರೆ. ಸದ್ಯ ಈ ಪಟ್ಟಿಯಲ್ಲಿ ಮಾರ್ಟಿನ್ ಗಪ್ಟಿಲ್ (161) ಅಗ್ರಸ್ಥಾನದಲ್ಲಿದ್ದಾರೆ.

ಕೆಎಲ್ ರಾಹುಲ್ ಕೂಡ ಶೇಷ್ಠ ದಾಖಲೆಯ ಹೊಸ್ತಿಲಲ್ಲಿದ್ದಾರೆ. ಟಿ20 ಮಾದರಿಯಲ್ಲಿ 500 ಬೌಂಡರಿಗಳನ್ನು ಪೂರೈಸಲು ಅವರಿಗೆ ಕೇವಲ 2 ಬೌಂಡರಿಗಳ ಅಗತ್ಯವಿದೆ.

ನ್ಯೂಜಿಲೆಂಡ್ ವಿರುದ್ಧದ ಮೊದಲ 2 ಟಿ20 ಪಂದ್ಯಗಳಿಂದ ಹೊರಗುಳಿದಿದ್ದ ಯುಜ್ವೇಂದ್ರ ಚಹಾಲ್‌ ಕೋಲ್ಕತ್ತಾದಲ್ಲಿ ಕಣಕ್ಕಿಳಿದರೆ ಟೀಮ್ ಇಂಡಿಯಾ ಪರ 50 ಟಿ20 ಪಂದ್ಯವಾಡಿದ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆಯಲಿದ್ದಾರೆ.

ಇನ್ನು ರಿಷಭ್ ಪಂತ್ ನ್ಯೂಜಿಲೆಂಡ್ ವಿರುದ್ಧದ ಮೂರನೇ ಮತ್ತು ಕೊನೆಯ T20 ನಲ್ಲಿ ಐವತ್ತು ಬೌಂಡರಿಗಳನ್ನು ಪೂರ್ಣಗೊಳಿಸಬಹುದು. ಪಂತ್ ಟೀಮ್ ಇಂಡಿಯಾ ಪರ ಇದುವರೆಗೆ ಒಟ್ಟು 44 ಬೌಂಡರಿಗಳನ್ನು ಬಾರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಅವರು 6 ಬೌಂಡರಿಗಳನ್ನು ಬಾರಿಸಿದರೆ, ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 50 ಫೋರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆಯಲಿದ್ದಾರೆ.

ಇದನ್ನೂ ಓದಿ: Syed Mushtaq Ali Trophy 2021: ರೋಚಕ ಜಯದೊಂದಿಗೆ ಫೈನಲ್​ಗೆ ಲಗ್ಗೆಯಿಟ್ಟ ಕರ್ನಾಟಕ

ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ