IND vs PAK: ಭಾರತ-ಪಾಕಿಸ್ತಾನ ಪಂದ್ಯಕ್ಕೆ ಮಳೆಯ ಕಾಟ?: ಇಲ್ಲಿದೆ ಹವಾಮಾನ ವರದಿ, ಪಿಚ್ ರಿಪೋರ್ಟ್
Asia Cup 2022: ಏಷ್ಯಾಕಪ್ ಟೂರ್ನಿ ಸೂಪರ್ 4 ಹಂತಕ್ಕೆ ತಲುಪಿದ್ದು ಇಂದು ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿ ಆಗಲಿದೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜನೆಯಾಗಿದ್ದು ಹೈವೋಲ್ಟೇಜ್ ಪಂದ್ಯ ಆಗುವುದು ಖಚಿತ
ಹದಿನೈದನೇ ಆವೃತ್ತಿಯ ಏಷ್ಯಾಕಪ್ ಟೂರ್ನಿ (Asia Cup 2022) ಸೂಪರ್ 4 ಹಂತಕ್ಕೆ ತಲುಪಿದ್ದು ಇಂದು ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿ ಆಗಲಿದೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜನೆಯಾಗಿದ್ದು ಹೈವೋಲ್ಟೇಜ್ ಪಂದ್ಯ ಆಗುವುದು ಖಚಿತ. ಲೀಗ್ ಹಂತದ ಮೊದಲ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿ ಆಗಿದ್ದವು. ಇದರಲ್ಲಿ ಟೀಮ್ ಇಂಡಿಯಾ (Team India) 5 ವಿಕೆಟ್ಗಳ ಭರ್ಜರಿ ಜಯ ಸಾಧಿಸುತ್ತು. ಈ ಮೂಲಕ ಕಳೆದ ವರ್ಷ ಟಿ20 ವಿಶ್ವಕಪ್ನಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಂಡಿತ್ತು. ಇದೀಗ ಈ ಬಾರಿಯ ಏಷ್ಯಾಕಪ್ನಲ್ಲಿ ಒಂದೂ ಸೋಲು ಕಾಣದ ರೋಹಿತ್ ಪಡೆ ಗೆಲುವಿನ ಓಟವನ್ನು ಮುಂದುವರೆಸುವ ತವಕದಲ್ಲಿದ್ದರೆ ಇತ್ತ ಪಾಕಿಸ್ತಾನ ಗೆಲುವಿನಗೆ ರಣತಂತ್ರ ರೂಪಿಸುತ್ತಿದೆ.
ಪಿಚ್ ರಿಪೋರ್ಟ್:
ಭಾರತ ಹಾಗೂ ಪಾಕಿಸ್ತಾನ ಪಂದ್ಯ ನಡೆಯಲಿರುವ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಪಿಚ್‌ನಲ್ಲಿ ಉಭಯ ತಂಡಗಳ ಆಟಗಾರರು ಸಾಕಷ್ಟು ಪಂದ್ಯಗಳನ್ನು ಆಡಿದ್ದಾರೆ. ಪಾಕಿಸ್ತಾನಕ್ಕೆ ಇದು ಎರಡನೇ ತವರಿದ್ದಂತೆ. ಭಾರತದ ಆಟಗಾರರು ಇಲ್ಲಿ ಅನೇಕ ಐಪಿಎಲ್ ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ. ಇಲ್ಲಿನ ಪಿಚ್ ಸಮಯೋಜಿತವಾಗಿದೆ. ಹೊಸ ಚೆಂಡಿನಲ್ಲಿ ವೇಗಿಗಳು ಲಾಭ ಪಡೆದುಕೊಳ್ಳಬಹುದಾಗಿದೆ. ಆದರೆ, ಈ ಪಿಚ್‌ನಲ್ಲಿ ವಿಕೆಟ್‌ಗಳನ್ನು ಉಳಿಸಿಕೊಳ್ಳುವುದು ಬಹುಮುಖ್ಯ ಸಂಗತಿಯಾಗಿದೆ. ಪಂದ್ಯ ಸಾಗುತ್ತಿದ್ದಂತೆ ಬ್ಯಾಟಿಂಗ್ ಸ್ವಲ್ಪ ಸುಲಭವಾಗುತ್ತದೆ.
ಇನ್ನು ಈ ಪಿಚ್‌ನಲ್ಲಿ ನಿಧಾನಗತಿಯ ಬೌಲರ್‌ಗಳು ಹೆಚ್ಚಿನ ಯಶಸ್ಸು ಸಾಧಿಸಿದ ಇತಿಹಾಸವಿದೆ. ಅಂತೆಯೆ ಸ್ಪಿನ್ನರ್‌ಗಳ ದಾಳಿಯ ಮುಂದೆ ಬ್ಯಾಟರ್‌ಗಳು ಪರದಾಡುವುದು ಖಚಿತ. ಭಾರತ ಈ ಪಿಚ್‌ನಲ್ಲಿ ನಮೀಬಿಯ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಸ್ಕಾಟ್ಲೆಂಡ್ ತಂಡದ ವಿರುದ್ಧ ಆಡಿದೆ. ಇದರಲ್ಲಿ ಪಾಕಿಸ್ತಾನ, ನಮೀಬಿಯ ಮತ್ತು ಸ್ಕಾಟ್ಲೆಂಡ್ ವಿರುದ್ಧ ಜಯ ಸಾಧಿಸಿದೆ.
ಹವಾಮಾನ ವರದಿ:
ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿಲ್ಲ. ಹೀಗಾಗಿ ಪಂದ್ಯ ನಿರಾತಂಕವಾಗಿ ಸಾಗಲಿದೆ. ದಿನವಿಡೀ ಶುಭ್ರ ವಾತಾವರಣದಿಂದ ಕೂಡಿರಲಿದೆ. ಪಂದ್ಯದ ದಿನದಂದು ಗಾಳಿ ಕೊಂಚ ಇರಬಹುದು ಎಂದು ಹೇಳಲಾಗಿದ್ದು ಹಗಲು ತಾಪಮಾನವು ಸುಮಾರು 39 ಡಿಗ್ರಿ ಸೆಲ್ಸಿಯಸ್ ಮತ್ತು ರಾತ್ರಿ 30 ಡಿಗ್ರಿ ಸೆಲ್ಸಿಯಸ್ ಇರಲಿದೆಯಂತೆ. ಹೀಗಾಗಿ ಯಾವುದೇ ಅಡೆತಡೆ ಇಲ್ಲದೆ ಈ ರೋಚಕ ಪಂದ್ಯ ನಡೆಯಲಿದೆ. ಮಳೆ ಆಗುವ ಪ್ರಮಾರ ಶೇ. 4 ರಷ್ಟು ಮಾತ್ರ ಇದೆ.
ಟಾಸ್ ಕೂಡ ಈ ಪಂದ್ಯದಲ್ಲಿ ಬಹುಮುಖ್ಯ ಪಾತ್ರವಹಿಸಲಿದ್ದು, ಟಾಸ್ ಗೆದ್ದ ತಂಡ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಯಾಕೆಂದರೆ ಇಲ್ಲಿ ಚೇಸಿಂಗ್ ಮಾಡಿದ ತಂಡ ಹೆಚ್ಚು ಗೆದ್ದ ಇತಿಹಾಸವಿದೆ. ಮೊದಲ ಇನ್ನಿಂಗ್ಸ್ ಸರಾಸರಿ 142 ರನ್ ಆದರೆ, ಎರಡನೇ ಇನ್ನಿಂಗ್ಸ್ ಸರಾಸರಿ 124 ಆಗಿದೆ. 211 ರನ್ ಗಳಿಸಿರುವುದು ಈ ಗ್ರೌಂಡ್ನ ಗರಿಷ್ಠ ಸ್ಕೋರ್ ಆಗಿದೆ.
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI:
ಭಾರತ: ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್‌ಕೀಪರ್), ದಿನೇಶ್ ಕಾರ್ತಿಕ್ ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್/ಆರ್. ಅಶ್ವಿನ್, ಯುಜ್ವೇಂದ್ರ ಚಹಲ್.
ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಝಾಮಾನ್, ಇಫ್ತಿಕರ್ ಅಹ್ಮದ್, ಕುಶ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಹಾರಿಸ್ ರೌಫ್, ಮೊಹಮ್ಮದ್ ನವಾಜ್, ನಸೀಮ್ ಶಾ, ಹಸನ್ ಅಲಿ.
Published On - 10:04 am, Sun, 4 September 22