IND vs PAK: ದುಬೈ ಮೈದಾನದಲ್ಲಿ ಭಾರತ- ಪಾಕಿಸ್ತಾನ ನಡುವಿನ ದಾಖಲೆ ಹೇಗಿದೆ?: ಟೀಮ್ ಇಂಡಿಯಾ ಹಲವು ಬಾರಿ ಸೋತಿದೆ
India vs Pakistan Asia Cup 2025: 2025 ರ T20 ಏಷ್ಯಾ ಕಪ್‌ನ ಹೈ-ವೋಲ್ಟೇಜ್ ಪಂದ್ಯ ಭಾರತ ಮತ್ತು ಪಾಕಿಸ್ತಾನ ನಡುವೆ ಸೆಪ್ಟೆಂಬರ್ 14 ರಂದು ನಡೆಯಲಿದ್ದು, ಪ್ರಪಂಚದಾದ್ಯಂತದ ಅಭಿಮಾನಿಗಳ ಕಣ್ಣುಗಳು ಈ ಪಂದ್ಯದ ಮೇಲೆ ನೆಟ್ಟಿವೆ. ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ರಣರೋಚಕ ಪಂದ್ಯ ನಡೆಯಲಿದೆ.

ಬೆಂಗಳೂರು (ಸೆ. 12): ಟಿ20 ಏಷ್ಯಾ ಕಪ್ 2025 ರ ಟೂರ್ನಿ ಸಾಕಷ್ಟು ರೋಚಕತೆ ಸೃಷ್ಟಿಸುತ್ತಿದೆ. ಅಭಿಮಾನಿಗಳು ಪ್ರತಿದಿನ ರೋಮಾಂಚಕಾರಿ ಪಂದ್ಯಗಳನ್ನು ವೀಕ್ಷಿಸುತ್ತಿದ್ದಾರೆ. ಈಗ ಏಷ್ಯಾ ಕಪ್ 2025 ರಲ್ಲಿ ಭಾರತ (Indian Cricket Team) ಮತ್ತು ಪಾಕಿಸ್ತಾನ ನಡುವಿನ ರಣರೋಚಕ ಪಂದ್ಯವು ಸೆಪ್ಟೆಂಬರ್ 14 ರಂದು ದುಬೈ ಮೈದಾನದಲ್ಲಿ ನಡೆಯಲಿದೆ. ಎರಡೂ ತಂಡಗಳು ಟಿ20 ಕ್ರಿಕೆಟ್‌ನ ಶ್ರೇಷ್ಠ ಆಟಗಾರರನ್ನು ಹೊಂದಿವೆ. ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಅಘಾ, ಎರಡೂ ತಂಡ ಯುವ ಆಟಗಾರರಿಂದ ಕೂಡಿದೆ.
ದುಬೈನಲ್ಲಿ ಭಾರತ ವಿರುದ್ಧ ಪಾಕಿಸ್ತಾನ 2 ಟಿ20 ಪಂದ್ಯಗಳನ್ನು ಗೆದ್ದಿದೆ
ದುಬೈ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದುವರೆಗೆ ಒಟ್ಟು ಮೂರು ಪಂದ್ಯಗಳು ನಡೆದಿದ್ದು, ಅವುಗಳಲ್ಲಿ ಪಾಕಿಸ್ತಾನ ಎರಡರಲ್ಲಿ ಗೆದ್ದಿದೆ ಮತ್ತು ಭಾರತ ತಂಡ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಎರಡೂ ತಂಡಗಳು ಕೊನೆಯ ಬಾರಿಗೆ ಇಲ್ಲಿ ಪಂದ್ಯವನ್ನು ಆಡಿದ್ದು 2022 ರಲ್ಲಿ.
ಈ ಪಂದ್ಯವನ್ನು ಮೊದಲ ಬಾರಿಗೆ ದುಬೈನಲ್ಲಿ 2021 ರಲ್ಲಿ ನಡೆಸಲಾಯಿತು
2021 ರ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ದುಬೈ ಮೈದಾನದಲ್ಲಿ ಪಂದ್ಯವನ್ನು ಆಡಿದ್ದವು, ಇದರಲ್ಲಿ ಭಾರತ ತಂಡವು ಮೊದಲು ಬ್ಯಾಟ್ ಮಾಡಿ 151 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ, ಪಾಕಿಸ್ತಾನವು ಗುರಿಯನ್ನು ತಲುಪಿತು ಮತ್ತು ಮೊಹಮ್ಮದ್ ರಿಜ್ವಾನ್ ಮತ್ತು ಬಾಬರ್ ಅಜಮ್ ಅವರ ಅರ್ಧಶತಕದ ಇನ್ನಿಂಗ್ಸ್ ನೆರವಿನಿಂದ 10 ವಿಕೆಟ್‌ಗಳಿಂದ ಗೆದ್ದಿತು.
ಇದಾದ ನಂತರ, 2022 ರಲ್ಲಿ, ದುಬೈ ಮೈದಾನದಲ್ಲಿ ನಡೆದ T20I ಪಂದ್ಯದಲ್ಲಿ, ಭಾರತ ತಂಡವು ಪಾಕಿಸ್ತಾನದ ವಿರುದ್ಧ ಐದು ವಿಕೆಟ್‌ಗಳಿಂದ ಜಯಗಳಿಸಿತು. ನಂತರ ಈ ವರ್ಷ ಮತ್ತೊಂದು T20I ಪಂದ್ಯ ನಡೆಯಿತು, ಇದರಲ್ಲಿ ಪಾಕಿಸ್ತಾನ 5 ವಿಕೆಟ್‌ಗಳಿಂದ ಗೆದ್ದಿತು.
Pak vs Oman: ಸೊನ್ನೆಗೆ ಪಾಕ್ ಆರಂಭಿಕನ ವಿಕೆಟ್ ಉರುಳಿಸಿದ ಒಮಾನ್ ವೇಗಿ; ವಿಡಿಯೋ ನೋಡಿ
ಪಾಕಿಸ್ತಾನ ತಂಡ ಭಾರತದ ವಿರುದ್ಧ ಕೇವಲ 3 ಟಿ20 ಪಂದ್ಯಗಳನ್ನು ಮಾತ್ರ ಗೆದ್ದಿದೆ
ಭಾರತ ಮತ್ತು ಪಾಕಿಸ್ತಾನ ನಡುವೆ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದುವರೆಗೆ ಒಟ್ಟು 13 ಪಂದ್ಯಗಳು ನಡೆದಿದ್ದು, ಅವುಗಳಲ್ಲಿ ಭಾರತ 10 ಪಂದ್ಯಗಳಲ್ಲಿ ಗೆದ್ದಿದೆ ಮತ್ತು ಪಾಕಿಸ್ತಾನ ಮೂರು ಬಾರಿ ಮಾತ್ರ ಗೆಲುವು ಸಾಧಿಸಿದೆ. ಇಂತಹ ಪರಿಸ್ಥಿತಿಯಲ್ಲಿ, ಟಿ20ಐ ಕ್ರಿಕೆಟ್‌ನಲ್ಲಿ ಗೆಲ್ಲುವ ಪಂದ್ಯಗಳಲ್ಲಿ ಭಾರತ ತಂಡ ಪಾಕಿಸ್ತಾನಕ್ಕಿಂತ ಬಹಳ ಮುಂದಿದೆ. ಆದರೆ, ದುಬೈ ಮೈದಾನದಲ್ಲಿ ಟೀಮ್ ಇಂಡಿಯಾ ಯಾವರೀತಿಯ ಪ್ರದರ್ಶನ ನೀಡುತ್ತೆ ನೋಡಬೇಕಿದೆ.
ಭಾರತದ ಮುಂದಿನ ಪಂದ್ಯ ಯಾವಾಗ?
ಏಷ್ಯಾಕಪ್‌ನಲ್ಲಿ ಭಾರತ ತಂಡ ತನ್ನ ಮುಂದಿನ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಲಿದೆ. ಎರಡೂ ತಂಡಗಳು ಸೆಪ್ಟೆಂಬರ್ 14 ರಂದು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಭಾರತ vs ಪಾಕಿಸ್ತಾನ ಪಂದ್ಯವನ್ನು ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಸೋನಿ ಲಿವ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ಆನಂದಿಸಬಹುದು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




