Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಕಿಚಾಯಿಸಿದ ಪಾಕ್ ಅಭಿಮಾನಿಗೆ ಸಖತ್ ಕೌಂಟರ್ ಕೊಟ್ಟ ಗೂಗಲ್ ಸಿಇಒ ಸುಂದರ್ ಪಿಚೈ

India vs Pakistan: ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ 113 ರನ್​ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

IND vs PAK: ಕಿಚಾಯಿಸಿದ ಪಾಕ್ ಅಭಿಮಾನಿಗೆ ಸಖತ್ ಕೌಂಟರ್ ಕೊಟ್ಟ ಗೂಗಲ್ ಸಿಇಒ ಸುಂದರ್ ಪಿಚೈ
Google CEO Sundar Pichai
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 24, 2022 | 3:55 PM

T20 World Cup 2022: ಮೆಲ್ಬೋರ್ನ್​ ಕ್ರಿಕೆಟ್​ ಮೈದಾನದಲ್ಲಿ ಭಾನುವಾರ ನಡೆದ ಪಾಕಿಸ್ತಾನ್ (India vs Pakistan) ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿತ್ತು. ಪಾಕ್ ವಿರುದ್ಧದ ಈ ಗೆಲುವು ದೀಪಾವಳಿ ಹಬ್ಬದ ಖುಷಿಯಲ್ಲಿದ್ದ ಭಾರತೀಯರ ಸಂಭ್ರಮವನ್ನು ಹೆಚ್ಚಿಸಿತ್ತು. ಅತ್ತ ಇದೇ ಖುಷಿಯಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ (Google CEO Sundar Pichai)  ಕೂಡ ಟ್ವೀಟ್ ಮಾಡಿದ್ದರು. ಆದರೆ ಈ ಟ್ವೀಟ್ ಪಾಕ್ ಕ್ರಿಕೆಟ್​ ಪ್ರೇಮಿಗಳ ಕಣ್ಣು ಕೆಂಪಾಗಿಸಿದೆ.

ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಗೆಲ್ಲುತ್ತಿದ್ದಂತೆ ಟ್ವೀಟ್ ಮಾಡಿದ ಸುಂದರ್​ ಪಿಚೈ, “ದೀಪಾವಳಿಯ ಶುಭಾಶಯಗಳು! ಪ್ರತಿಯೊಬ್ಬರೂ ನಿಮ್ಮ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಅದ್ಭುತ ಸಮಯ ಕಳೆಯುತ್ತಿದ್ದೀರಿ ಎಂದು ಭಾವಿಸುತ್ತೇವೆ. ನಾನು ಕೊನೆಯ ಮೂರು ಓವರ್‌ಗಳನ್ನು ಮತ್ತೆ ನೋಡುವ ಮೂಲಕ ದೀಪಾವಳಿ ಆಚರಿಸಿದೆ. ಎಂತಹ ಆಟ ಮತ್ತು ಪ್ರದರ್ಶನ…ಎಂದು ಗೂಗಲ್ ಸಿಇಒ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಈ ಟ್ವೀಟ್​ಗೆ ಪಾಕ್ ಕ್ರಿಕೆಟ್ ಪ್ರೇಮಿಯೊಬ್ಬರು ಪ್ರತಿಕ್ರಿಯೆ ನೀಡಿದ್ದರು. ಅದೂ ಕೂಡ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳನ್ನು ಕಿಚಾಯಿಸುವ ಮೂಲಕ ಎಂಬುದು ವಿಶೇಷ. ಅಂದರೆ ಸುಂದರ್​ ಪಿಚೈ ಟ್ವೀಟ್​ಗೆ ಪ್ರತಿಕ್ರಿಯಿಸಿದ ಮೊಹಮ್ಮದ್ ಶಹ್​ಝೈಬ್ ಎನ್ನುವ ವ್ಯಕ್ತಿಯೊಬ್ಬರು, ಮೊದಲ ಮೂರು ಓವರ್​ಗಳನ್ನು ಸಹ ವೀಕ್ಷಿಸುವಂತೆ ಕಿಚಾಯಿಸಿದ್ದರು.

ಅಂದರೆ ಪಾಕಿಸ್ತಾನದ ಮೊದಲ 3 ಓವರ್​ಗಳಲ್ಲಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಔಟಾಗಿದ್ದರು. ಇದನ್ನೇ ಪ್ರಸ್ತಾಪಿಸಿ ಪಾಕ್ ಅಭಿಮಾನಿ ಸುಂದರ್​ ಪಿಚೈ ಅವರನ್ನು ಕಿಚಾಯಿಸಿ ಪ್ರತಿಕ್ರಿಯಿಸಿದ್ದರು. ಆದರೆ ಈ ಪ್ರತಿಕ್ರಿಯೆಗೆ ಕೌಂಟರ್ ಕೊಡುವ ಮೂಲಕ ಗೂಗಲ್ ಸಿಇಒ ಎಲ್ಲರ ಗಮನ ಸೆಳೆದಿದ್ದಾರೆ.

ಅದನ್ನೂ ಕೂಡ ನೋಡಿದ್ದೇನೆ..ಭುವನೇಶ್ವರ್ ಕುಮಾರ್ ಹಾಗೂ ಅರ್ಷದೀಪ್ ಸಿಂಗ್ ಅದ್ಭುತವಾಗಿ ಬೌಲಿಂಗ್ ಮಾಡಿದ್ದರು ಎಂದು ಸುಂದರ್​ ಪಿಚೈ ಕೌಂಟರ್ ರಿಪ್ಲೈ ನೀಡಿದ್ದಾರೆ. ಅಂದರೆ ಮೊದಲ 3 ಓವರ್​ಗಳಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ್ದ ಭುವಿ ಹಾಗೂ ಅರ್ಷದೀಪ್ 2 ವಿಕೆಟ್ ಕಬಳಿಸಿದ್ದರು. ಅತ್ತ ಪಾಕ್ ಅಭಿಮಾನಿ ಪಾಕಿಸ್ತಾನದ ಬೌಲಿಂಗ್​ನ್ನು ಪರೋಕ್ಷವಾಗಿ ಹೊಗಳಿದರೆ, ಇತ್ತ ಸುಂದರ್ ಪಿಚೈ ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ನೀಡಿ ಟೀಮ್ ಇಂಡಿಯಾ ಬೌಲರ್​ಗಳನ್ನು ಹೊಗಳಿದರು.

ಇದೀಗ ಭಾರತೀಯ ಮೂಲದ ಗೂಗಲ್ ಸಿಇಒ ಸುಂದರ್ ಪಿಚೈ ಮಾಡಿರುವ ಟ್ವೀಟ್​ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಭಾರತೀಯರು ಯಾವುದೇ ಹುದ್ದೆಯಲ್ಲಿದ್ದರೂ ಕ್ರಿಕೆಟ್ ವಿಷಯದಲ್ಲಿ ಮಾತ್ರ ಬಿಟ್ಟುಕೊಡಲ್ಲ ಎಂದು ಅನೇಕರು ಈ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದಾರೆ.

ಟೀಮ್ ಇಂಡಿಯಾಗೆ ರೋಚಕ ಜಯ:

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ 160 ರನ್​ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 31 ರನ್​ಗಳಿಗೆ ಕೆಎಲ್ ರಾಹುಲ್, ರೋಹಿತ್ ಶರ್ಮಾ, ಅಕ್ಷರ್ ಪಟೇಲ್ ಹಾಗೂ ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ 113 ರನ್​ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಅದರಂತೆ ಅಂತಿಮ 3 ಓವರ್​ಗಳ ವೇಳೆ ಪಂದ್ಯವು ರೋಚಕಘಟ್ಟದತ್ತ ಸಾಗಿತ್ತು. ಅದರಂತೆ ಕೊನೆಯ 18 ಎಸೆತಗಳಲ್ಲಿ ಟೀಮ್ ಇಂಡಿಯಾಗೆ 48 ರನ್​ಗಳ ಅವಶ್ಯಕತೆಯಿತ್ತು. ಶಾಹೀನ್ ಅಫ್ರಿದಿ ಎಸೆದ 18ನೇ ಓವರ್​ನಲ್ಲಿ ಕೊಹ್ಲಿ ಮೂರು ಭರ್ಜರಿ ಬೌಂಡರಿ ಬಾರಿಸಿದರು. ಅಲ್ಲದೆ ಆ ಓವರ್​ನಲ್ಲಿ 17 ರನ್ ಕಲೆಹಾಕಿದರು. ಅಂತಿಮ 12 ಎಸೆತಗಳಲ್ಲಿ 31 ರನ್ ಗಳಿಸಬೇಕಿತ್ತು.

ಇದನ್ನೂ ಓದಿ: T20 World Cup 2022: ಟಿ20 ವಿಶ್ವಕಪ್​ನ ಟೀಮ್ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ

ಹ್ಯಾರಿಸ್ ರೌಫ್ ಎಸೆದ 19ನೇ ಓವರ್​ನಲ್ಲಿ ಭರ್ಜರಿ 2 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಗೆಲ್ಲಿಸಿಕೊಡುವ ಭರವಸೆ ಮೂಡಿಸಿದರು. ಹಾಗೆಯೇ ಓವರ್​ನಲ್ಲಿ 16 ರನ್​ಗಳ ಗುರಿಯೊಂದಿಗೆ ಬ್ಯಾಟ್ ಬೀಸಿದ ಕೊಹ್ಲಿ ಬೌಲರ್​ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಅದರಲ್ಲೂ ಮೊಹಮ್ಮದ್ ನವಾಜ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ಗೆಲುವನ್ನು ಖಚಿತಪಡಿಸಿದರು. ಅಂತಿಮವಾಗಿ ಕೊನೆಯ ಎಸೆತದಲ್ಲಿ ಅಶ್ವಿನ್ 1 ರನ್ ಕಲೆಹಾಕುವ ಮೂಲಕ ಟೀಮ್ ಇಂಡಿಯಾ 4 ವಿಕೆಟ್​ಗಳ ಜಯ ಸಾಧಿಸಿತು. ಈ ಮೂಲಕ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿ 2021 ರ ಟಿ20 ವಿಶ್ವಕಪ್ ಸೋಲಿನ ಸೇಡನ್ನು ಟೀಮ್ ಇಂಡಿಯಾ ತೀರಿಸಿಕೊಂಡಿದೆ.

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ