Asia Cup 2022: ಪಾಕ್ ವಿರುದ್ಧ ಭಾರತ ಇದುವರೆಗೆ ಎಷ್ಟು ಪಂದ್ಯ ಆಡಿದೆ?: ಯಾರು ಹೆಚ್ಚು ಗೆಲುವು ಸಾಧಿಸಿದ್ದು?

India vs Pakistan Head to Head: ಭಾರತ ಹಾಗೂ ಪಾಕಿಸ್ತಾನ ತಂಡಗಳು ಇದುವರೆಗೆ ಏಷ್ಯಾಕಪ್​ನಲ್ಲಿ ಎಷ್ಟು ಬಾರಿ ಮುಖಾಮುಖಿ ಆಗಿದೆ?, ಯಾರು ಹೆಚ್ಚು ಗೆಲುವು ಸಾಧಿಸಿದ್ದಾರೆ ಎಂಬುದನ್ನು ನೋಡೋಣ.

Asia Cup 2022: ಪಾಕ್ ವಿರುದ್ಧ ಭಾರತ ಇದುವರೆಗೆ ಎಷ್ಟು ಪಂದ್ಯ ಆಡಿದೆ?: ಯಾರು ಹೆಚ್ಚು ಗೆಲುವು ಸಾಧಿಸಿದ್ದು?
Rohit Sharma and Babar Azam
Follow us
TV9 Web
| Updated By: Vinay Bhat

Updated on: Aug 28, 2022 | 12:08 PM

ಏಷ್ಯಾಕಪ್​ 2022ರ (Asia Cup 2022) ಎರಡನೇ ಪಂದ್ಯದಲ್ಲಿಂದು ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡ ಮುಖಾಮುಖಿ ಆಗುತ್ತಿದೆ. ರೋಹಿತ್ಬಾಬರ್ (Rohit-Babar) ಪಡೆಯ ಕಾದಾಟ ವೀಕ್ಷಿಸಲು ಇಡೀ ವಿಶ್ವವೇ ಕಾದುಕುಳಿತಿದ್ದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಈ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿದೆ. ಏಷ್ಯಾಕಪ್​ ಇತಿಹಾಸದಲ್ಲಿ ಈವರೆಗೆ ಅತಿ ಹೆಚ್ಚು ಬಾರಿ ಟೂರ್ನಿಯನ್ನು ಗೆದ್ದಿರುವುದು ಭಾರತ. ಒಟ್ಟು ಏಳು ಬಾರಿ ಏಷ್ಯಾಕಪ್ ಕಿರೀಟವನ್ನು ಭಾರತ ತೊಟ್ಟಿದ್ದರೆ, ಪಾಕಿಸ್ತಾನ ಎರಡು ಬಾರಿ ಮಾತ್ರ ಪ್ರಶಸ್ತಿ ಗೆದ್ದಿದೆ. ಹಾಗಾದರೆ ಉಭಯ ತಂಡಗಳು ಇದುವರೆಗೆ ಏಷ್ಯಾಕಪ್​ನಲ್ಲಿ ಎಷ್ಟು ಬಾರಿ ಮುಖಾಮುಖಿ ಆಗಿದೆ?, ಯಾರು ಹೆಚ್ಚು ಗೆಲುವು ಸಾಧಿಸಿದ್ದಾರೆ ಎಂಬುದನ್ನು ನೋಡೋಣ.

ಟಿ20 ಯಲ್ಲಿ ಭಾರತಪಾಕ್ ಇದುವರೆಗೆ ಒಟ್ಟು ಒಂಬತ್ತು ಪಂದ್ಯಗಳಲ್ಲಿ ಎದುರಾಗಿದೆ. ಇದರಲ್ಲಿ ಭಾರತ ಏಳು ಪಂದ್ಯಗಳನ್ನು ಗೆದ್ದರೆ ಪಾಕಿಸ್ತಾನ ಎರಡು ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದೆ. ಅಂತೆಯೆ ಏಷ್ಯಾಕಪ್​ನಲ್ಲಿ ಉಭಯ ತಂಡಗಳು ಈವರೆಗೆ 14 ಬಾರಿ ಮುಖಾಮುಖಿ ಆಗಿದೆ. ಇದರಲ್ಲಿ ಭಾರತ ಎಂಟು ಹಾಗೂ ಪಾಕಿಸ್ತಾನ 5 ಪಂದ್ಯ ಗೆದ್ದರೆ ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಕಂಡಿದೆ.

ಭಾರತ – ಪಾಕಿಸ್ತಾನ ಕೊನೆಯ ಬಾರಿ ಮುಖಾಮುಖಿ ಆಗಿದ್ದು 2021ರ ಐಸಿಸಿ ಟಿ20 ವಿಶ್ವಕಪ್​ನಲ್ಲಿ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಅವರ ಕೊಡುಗೆಯ ನೆರವಿನಿಂದ 151 ರನ್ ಗಳಿಸಿತು. ಆದರೆ, ಪಾಕ್ ಈ ಪಂದ್ಯದಲ್ಲಿ ಬಾಬರ್ ಅಜಮ್ ಹಾಗೂ ಮೊಹಮ್ಮದ್ ರಿಜ್ವಾನ್ ಅವರ ಬೊಂಬಾಟ್ ಬ್ಯಾಟಿಂಗ್ ಪ್ರದರ್ಶನದಿಂದ 10 ವಿಕೆಟ್​ಗಳ ಸುಲಭ ಗೆಲುವು ಸಾಧಿಸಿತು.

ಇದನ್ನೂ ಓದಿ
Image
India vs Pakistan: ಭಾರತ- ಪಾಕಿಸ್ತಾನ ಪಂದ್ಯಕ್ಕಿದೆಯೆ ಮಳೆಯ ಕಾಟ?: ಇಲ್ಲಿದೆ ಹವಾಮಾನ ವರದಿ
Image
IND vs PAK: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ಪರ ಆಡುವ 11 ಆಟಗಾರರ ಸಂಭಾವ್ಯ ಪಟ್ಟಿ
Image
Rahul Dravid: ಪಾಕ್ ವಿರುದ್ಧದ ಪಂದ್ಯಕ್ಕೆ ಕೆಲವೇ ಗಂಟೆಗಳಿರುವಾಗ ಭಾರತಕ್ಕೆ ಸಿಕ್ತು ಗುಡ್ ನ್ಯೂಸ್: ಏನದು?
Image
IND vs PAK: ಪಾಕ್ ವಿರುದ್ಧದ ಕದನಕ್ಕೆ ಭಾರತ ಭರ್ಜರಿ ಅಭ್ಯಾಸ: ಫೋಟೋ ನೋಡಿ

ಇನ್ನು ಏಷ್ಯಾಕಪ್​​​​​ ಏಕದಿನ ಟೂರ್ನಿಯಲ್ಲಿ ಕೊಹ್ಲಿ ಪ್ರದರ್ಶನ ಅದ್ಭುತವಾಗಿದೆ. 10 ಪಂದ್ಯಗಳಲ್ಲಿ 61.30ರ ಸರಾಸರಿಯಲ್ಲಿ 613 ರನ್​ ಸಿಡಿಸಿದ್ದಾರೆ. 3 ಶತಕ, 1 ಅರ್ಧಶತಕ ಬಾರಿಸಿದ್ದಾರೆ. ಏಷ್ಯಾಕಪ್​​ ಟಿ20ಯಲ್ಲಿ ಆಡಿದ್ದು ಕಡಿಮೆ ಪಂದ್ಯಗಳಾದರೂ, ಭರ್ಜರಿ ಸರಾಸರಿ ಹೊಂದಿದ್ದಾರೆ. ಕೊಹ್ಲಿ 4 ಪಂದ್ಯಗಳಲ್ಲಿ ಬ್ಯಾಟ್​ ಬೀಸಿದ್ದು, 76.50ರ ಸರಾಸರಿಯಲ್ಲಿ 153 ರನ್​​ ಕಲೆ ಹಾಕಿದ್ದಾರೆ. ಅಜೇಯ 56 ರನ್,​ ಕೊಹ್ಲಿಯ ಬೆಸ್ಟ್​ ಸ್ಕೋರ್​ ಆಗಿದೆ.

33 ವರ್ಷದ ವಿರಾಟ್ ಕೊಹ್ಲಿ 99 ಟಿ20 ಪಂದ್ಯಗಳಲ್ಲಿ 91 ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಈ ವೇಳೆ 50 ಸರಾಸರಿಯಲ್ಲಿ 3308 ರನ್ ಗಳಿಸಿದ್ದಾರೆ. ಈ ವೇಳೆ 30 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ವಿಶ್ವದ ಮೂರನೇ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ. ಅಲ್ಲದೆ ಇಂದು ಕೊಹ್ಲಿ 100ನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ಆಡಲಿದ್ದಾರೆ. ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೂ ವಿರಾಟ್ ಪಾತ್ರರಾಗಲಿದ್ದಾರೆ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್