AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ವಿರುದ್ಧ ಹೀನಾಯ ಸೋಲಿನ ಹತಾಶೆ; ಐಸಿಸಿಗೆ ದೂರು ನೀಡಿದ ಪಾಕ್ ಕ್ರಿಕೆಟ್ ಮಂಡಳಿ

IND vs PAK, ICC World Cup 2023: ಭಾರತ ಸರ್ಕಾರದಿಂದಾಗುತ್ತಿರುವ ವೀಸಾ ವಿಳಂಬ ಮತ್ತು ವಿಸಿ ನೀತಿಯ ಅನುಪಸ್ಥಿತಿಯ ಬಗ್ಗೆ ಹಾಗೂ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಭಾರತದ ಅಭಿಮಾನಿಗಳು ತೋರಿದ ಅನುಚಿತ ವರ್ತನೆಯ ಬಗ್ಗೆ ಪಿಸಿಬಿ ಐಸಿಸಿಗೆ ದೂರು ನೀಡಿದೆ.

ಭಾರತದ ವಿರುದ್ಧ ಹೀನಾಯ ಸೋಲಿನ ಹತಾಶೆ; ಐಸಿಸಿಗೆ ದೂರು ನೀಡಿದ ಪಾಕ್ ಕ್ರಿಕೆಟ್ ಮಂಡಳಿ
ಭಾರತ- ಪಾಕಿಸ್ತಾನ ಪಂದ್ಯ
ಪೃಥ್ವಿಶಂಕರ
|

Updated on: Oct 18, 2023 | 11:38 AM

Share

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium in Ahmedabad) ಕಳೆದ ಶನಿವಾರ ಅಂದರೆ, ಅಕ್ಟೋಬರ್ 14 ರಂದು ನಡೆದ ಭಾರತ-ಪಾಕಿಸ್ತಾನ (India vs Pakistan) ನಡುವಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್‌ಗಳ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಕೇವಲ 191 ರನ್​ಗಳಿಗೆ ಆಲೌಟ್ ಆಯಿತು. ನಂತರ ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ (Team India) ಕೇವಲ 31 ಓವರ್‌ಗಳಲ್ಲಿ ಗೆಲವಿನ ನಗೆ ಬೀರಿತು. ಭಾರತದ ಗೆಲುವಿನ ನಂತರ ತೀವ್ರ ಹತಾಶೆಗೊಳಗಾಗಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಇದೀಗ ಐಸಿಸಿಗೆ (ICC) ದೂರು ಸಲ್ಲಿಸಿದೆ.​

ವಾಸ್ತವವಾಗಿ ವಿಶ್ವಕಪ್ ಪಂದ್ಯಾವಳಿಯನ್ನು ವೀಕ್ಷಿಸಲು ಪಾಕಿಸ್ತಾನ ತಂಡದ ಅಭಿಮಾನಿಗಳಿಗೆ ಹಾಗೂ ಪಾಕಿಸ್ತಾನಿ ಪತ್ರಕರ್ತರಿಗೆ ಭಾರತದ ವೀಸಾ ನೀಡಲಾಗಿಲ್ಲ. ಹೀಗಾಗಿ ಭಾರತ ಸರ್ಕಾರದಿಂದಾಗುತ್ತಿರುವ ವೀಸಾ ವಿಳಂಬ ಮತ್ತು ವಿಸಿ ನೀತಿಯ ಅನುಪಸ್ಥಿತಿಯ ಬಗ್ಗೆ ಹಾಗೂ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಭಾರತದ ಅಭಿಮಾನಿಗಳು ತೋರಿದ ಅನುಚಿತ ವರ್ತನೆಯ ಬಗ್ಗೆ ಪಿಸಿಬಿ, ಐಸಿಸಿಗೆ ದೂರು ನೀಡಿದೆ.

ಬೆಂಗಳೂರಿನಲ್ಲಿ ಆಸೀಸ್- ಪಾಕ್ ವಿಶ್ವಕಪ್ ಪಂದ್ಯ; ಚಿನ್ನಸ್ವಾಮಿ ಸ್ಟೇಡಿಯಂಗೆ ಬಿಗಿ ಪೊಲೀಸ್ ಭದ್ರತೆ

ಐಸಿಸಿಗೆ ದೂರು ಸಲ್ಲಿಸಿದೆ

ಈ ಬಗ್ಗೆ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ, ‘ಪಾಕಿಸ್ತಾನದ ಪತ್ರಕರ್ತರಿಗೆ ವೀಸಾ ವಿಳಂಬ ಮತ್ತು ನಡೆಯುತ್ತಿರುವ ವಿಶ್ವಕಪ್​ಗಾಗಿ ಪಾಕಿಸ್ತಾನಿ ಅಭಿಮಾನಿಗಳಿಗೆ ವೀಸಾ ನೀತಿಯ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಐಸಿಸಿಗೆ ದೂರು ಸಲ್ಲಿಸಿದೆ’. ಅಲ್ಲದೆ ಅಕ್ಟೋಬರ್ 14 ರಂದು ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಸಂದರ್ಭದಲ್ಲಿ ಪಾಕಿಸ್ತಾನಿ ತಂಡವನ್ನು ಗುರಿಯಾಗಿಸಿಕೊಂಡು ಭಾರತದ ಅಭಿಮಾನಿಗಳು ತೋರಿದ ಅನುಚಿತ ವರ್ತನೆಯ ಬಗ್ಗೆ ಪಿಸಿಬಿ ದೂರು ದಾಖಲಿಸಿದೆ ಎಂದು ಪಿಸಿಬಿ ಮಾಧ್ಯಮ ಟ್ವೀಟ್ ಮಾಡಿದೆ.

ಮಿಕ್ಕಿ ಆರ್ಥರ್ ಆರೋಪ

ಇದಕ್ಕೂ ಮೊದಲು ಭಾರತ ಹಾಗೂ ಪಾಕಿಸ್ತಾನ ಪಂದ್ಯದ ನಂತರ ಮಾತನಾಡಿದ್ದ ಪಾಕ್ ತಂಡದ ನಿರ್ದೇಶಕ ಮಿಕ್ಕಿ ಆರ್ಥರ್ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಗಳನ್ನು ಎತ್ತಿದರು. ‘ಇದು ವಿಶ್ವಕಪ್ ಪಂದ್ಯಾವಳಿ ಅನಿಸಲಿಲ್ಲ. ಬದಲಿಗೆ ಇದು ಬಿಸಿಸಿಐ ಆಯೋಜಿಸಿದ ದ್ವಿಪಕ್ಷೀಯ ಸರಣಿಯಿಂದ ಬಾಸವಾಯಿತು. ಪಾಕಿಸ್ತಾನದ ಅಭಿಮಾನಿಗಳಿಗೆ ಭಾರತಕ್ಕೆ ಬರಲು ವೀಸಾ ನೀಡಲಾಗಿಲ್ಲ. ಇದು ತಂಡದ ಪ್ರದರ್ಶನಕ್ಕೆ ಕೊಂಚ ಹಿನ್ನಡೆಯುಂಟು ಮಾಡಿತು’ ಎಂದಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ