IND vs PAK: ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಸೇರಿಕೊಂಡ ಜಸ್ಪ್ರಿತ್ ಬುಮ್ರಾ

IND vs PAK: ಪಾಕಿಸ್ತಾನ ವಿರುದ್ಧದ ಬಹು ನಿರೀಕ್ಷಿತ ಹಣಾಹಣಿಗೂ ಮುನ್ನ ಟೀಂ ಇಂಡಿಯಾಗೆ ಆನೆ ಬಲ ಬಂದಿದೆ. ಮೊದಲ ಮಗುವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲು ಟೀಂ ಇಂಡಿಯಾವನ್ನು ತೊರೆದಿದ್ದ ತಂಡದ ಬೌಲಿಂಗ್ ಜೀವಾಳ ಜಸ್ಪ್ರೀತ್ ಬುಮ್ರಾ ಇದೀಗ ಕೊಲಂಬೊದಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ.

IND vs PAK: ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಸೇರಿಕೊಂಡ ಜಸ್ಪ್ರಿತ್ ಬುಮ್ರಾ
ಜಸ್ಪ್ರೀತ್ ಬುಮ್ರಾ
Follow us
|

Updated on:Sep 08, 2023 | 1:41 PM

ಪಾಕಿಸ್ತಾನ ವಿರುದ್ಧದ ಬಹು ನಿರೀಕ್ಷಿತ ಹಣಾಹಣಿಗೂ ಮುನ್ನ ಟೀಂ ಇಂಡಿಯಾಗೆ (Team India) ಆನೆ ಬಲ ಬಂದಿದೆ. ಮೊದಲ ಮಗುವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲು ಟೀಂ ಇಂಡಿಯಾವನ್ನು ತೊರೆದಿದ್ದ ತಂಡದ ಬೌಲಿಂಗ್ ಜೀವಾಳ ಜಸ್ಪ್ರೀತ್ ಬುಮ್ರಾ (Jasprit Bumrah) ಇದೀಗ ಕೊಲಂಬೊದಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ಕಳೆದ ವಾರಾಂತ್ಯದಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯ (India vs Pakistan) ಮುಗಿದ ತಕ್ಷಣ ಬುಮ್ರಾ ಭಾರತಕ್ಕೆ ವಾಪಸಾಗಿದ್ದರು. ಆ ವೇಳೆ ಬುಮ್ರಾ ಮತ್ತೆ ಗಾಯಗೊಂಡಿದ್ದಾರೆಂಬ ವದಂತಿ ಹಬ್ಬಲಾರಂಭಿಸಿತ್ತು. ಆದರೆ ಆ ಬಳಿಕ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಾನು ಅಪ್ಪನಾದ ಸುದ್ದಿಯನ್ನು ಪೋಸ್ಟ್ ಮಾಡಿದ್ದ ಬುಮ್ರಾ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದರು.

ಬುಮ್ರಾ, ಶುಕ್ರವಾರ ಮುಂಜಾನೆ ಕೊಲಂಬೊಗೆ ಆಗಮಿಸಿದ್ದು, ಸಂಜೆ ಅಭ್ಯಾಸಕ್ಕೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಏತನ್ಮಧ್ಯೆ, ಮಳೆಯಿಂದಾಗಿ ಟೀಂ ಇಂಡಿಯಾ ಇಲ್ಲಿಯವರೆಗೆ ಒಳಾಂಗಣದಲ್ಲಿ ತರಬೇತಿ ನಡೆಸುತ್ತಿದೆ. ಹವಾಮಾನ ಮುನ್ಸೂಚನೆಯ ಪ್ರಕಾರ ಶುಕ್ರವಾರ ಸಂಜೆಯೂ ಹೆಚ್ಚು ಮಳೆಯಲಾಗಿದೆ ಎಂದು ವರದಿ ನೀಡಿದೆ.

Jasprit Bumrah: ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ದಂಪತಿಗಳಿಗೆ ಗಂಡು ಮಗು ಜನನ; ಮಗುವಿನ ಹೆಸರೇನು ಗೊತ್ತಾ?

ಏಕದಿನದಲ್ಲಿ ಬುಮ್ರಾ ಇನ್ನು ಬೌಲಿಂಗ್ ಮಾಡಿಲ್ಲ

ಇನ್ನು ಬುಮ್ರಾ, ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ ನಂತರ ಅವರು ಇನ್ನೂ ಏಕದಿನ ಪಂದ್ಯದಲ್ಲಿ ಬೌಲಿಂಗ್ ಮಾಡಿಲ್ಲ. ಐರ್ಲೆಂಡ್ ವಿರುದ್ಧದ ಟಿ20 ಸರಣಿಯೊಂದಿಗೆ ತಂಡಕ್ಕೆ ಮರಳಿದ್ದ ಬುಮ್ರಾ ಅಲ್ಲಿ ಕೇವಲ 4 ಓವರ್​ಗಳನಷ್ಟೇ ಬೌಲ್ ಮಾಡಿದ್ದರು. ಆ ಬಳಿಕ ಆರಂಭವಾದ ಏಷ್ಯಾಕಪ್​ನಲ್ಲಿ ಬುಮ್ರಾಗೆ ಬೌಲಿಂಗ್ ಮಾಡುವ ಅವಕಾಶ ಸಿಕ್ಕಿಲ್ಲ. ಕಳೆದ ವಾರ ನಡೆದ ಏಷ್ಯಾಕಪ್​ನ ಮೂರನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಕಣಕ್ಕಿಳಿಯಿತ್ತಾದರೂ, ಬೌಲಿಂಗ್ ಮಾಡಲು ತಂಡಕ್ಕೆ ಅವಕಾಶ ಸಿಗಲಿಲ್ಲ. ಆ ಬಳಿಕ ಟೀಂ ಇಂಡಿಯಾ, ನೇಪಾಳ ವಿರುದ್ಧ ಕಣಕ್ಕಿಳಿದಿತ್ತು. ಆದರೆ ಆ ಪಂದ್ಯದಲ್ಲಿ ಬುಮ್ರಾ ಆಡಿರಲಿಲ್ಲ. ಹೀಗಾಗಿ ಪಾಕ್ ವಿರುದ್ಧದ ಸೂಪರ್ 4 ಹಂತದ ಪಂದ್ಯ ನಡೆದರೆ, ಅಲ್ಲಿ ಬುಮ್ರಾ ಬೌಲಿಂಗ್ ಮಾಡುವುದನ್ನು ಕಾಣಬಹುದಾಗಿದೆ.

ವಿಶ್ವಕಪ್‌ಗೆ ಇನ್ನೂ ಒಂದು ತಿಂಗಳು ಬಾಕಿ ಇರುವಾಗ ಬುಮ್ರಾ ಲಯ ಕಂಡುಕೊಳ್ಳುವುದು ಭಾರತಕ್ಕೆ ಅತ್ಯವಶ್ಯಕವಾಗಿದೆ. ಏಕೆಂದರೆ ಈ ಬಾರಿಯ ವಿಶ್ವಕಪ್ ಭಾರತದಲ್ಲಿ ನಡೆಯುತ್ತಿರುವುದರಿಂದ ವಿಶ್ವಕಪ್ ಗೆಲ್ಲಬೇಕೆನ್ನುವ ಭಾರತದ ಮಹದಾಸೆಗೆ ಬುಮ್ರಾ ಬೌಲಿಂಗ್ ನೆರವಾಗಿದೆ.

ಭಾರತ- ಪಾಕ್ ಪಂದ್ಯ ನಡೆಯುವುದು ಡೌಟ್

ಇನ್ನು ಭಾರತ ಹಾಗೂ ಪಾಕಿಸ್ತಾನ ನಡುವಿನ ಸೂಪರ್ 4 ಹಂತದ ಪಂದ್ಯದ ಬಗ್ಗೆ ಹೇಳುವುದಾದರೆ, ಅಲ್ಲಿನ ಹವಾಮಾನ ವರದಿ ಪ್ರಕಾರ ಈ ಪಂದ್ಯವೂ ನಡೆಯುವುದು ಅನುಮಾನವಾಗಿದೆ. ಸೆಪ್ಟೆಂಬರ್ 10 ರಂದು ಹವಾಮಾನ ಮುನ್ಸೂಚನೆಯ ಪ್ರಕಾರ ಕೊಲಂಬೊದಲ್ಲಿ ಶೇ. 90 ರಷ್ಟು ಮಳೆ ಬೀಳುವ ಸಾಧ್ಯತೆ ಇದೆ. ಇದರ ಹೊರತಾಗಿ ಇಲ್ಲಿ ನಡೆಯುವ ಪಂದ್ಯಾವಳಿಯ ಉಳಿದ ಪಂದ್ಯಗಳು ಸಹ ವಾಶ್ ಔಟ್ ಆಗುವ ಸಾಧ್ಯತೆಗಳಿವೆ.

ಶ್ರೀಲಂಕಾ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಲಿರುವ ಶನಿವಾರದಂದು 85% ಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನದ ದಿನವೂ 90% ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:38 pm, Fri, 8 September 23

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?