AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK Playing XI: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಿ 2 ಬದಲಾವಣೆ

ICC T20 World Cup India vs Pakistan Playing XI: 2026 ರ ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ನಡುವೆ ಕೊಲಂಬೊದಲ್ಲಿ ಮಹತ್ವದ ಪಂದ್ಯ ನಡೆಯುತ್ತಿದೆ. ಸೂಪರ್ 8 ಗೆ ಅರ್ಹತೆ ಪಡೆಯಲು ಇದು ಎರಡೂ ತಂಡಗಳಿಗೆ ಅತಿ ಮುಖ್ಯ. ಪಾಕಿಸ್ತಾನ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದೆ. ಭಾರತ ತಂಡದಲ್ಲಿ ಎರಡು ಬದಲಾವಣೆಗಳಾಗಿದ್ದು, ಇತಿಹಾಸದಲ್ಲಿ ಭಾರತ 7-1 ಅಂತರದಿಂದ ಪಾಕಿಸ್ತಾನದ ಮೇಲೆ ಮೇಲುಗೈ ಸಾಧಿಸಿದೆ.

IND vs PAK Playing XI: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಿ 2 ಬದಲಾವಣೆ
Ind Vs Pak
ಪೃಥ್ವಿಶಂಕರ
|

Updated on:Feb 15, 2026 | 6:53 PM

Share

2026 ರ ಟಿ20 ವಿಶ್ವಕಪ್‌ನ (T20 World Cup 2026) ಗುಂಪು ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯ ಇಂದು ನಡೆಯುತ್ತಿದೆ. ಈ ಪಂದ್ಯವು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯಲು ಈ ಪಂದ್ಯದ ಗೆಲುವು ಉಭಯ ತಂಡಗಳಿಗೆ ಅಗತ್ಯವಾಗಿರುವುದರಿಂದ ಎರಡೂ ತಂಡಗಳು ಶತಾಯಗತಾಯ ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿವೆ. ಇದರ ಜೊತೆಗೆ ಟೀಂ ಇಂಡಿಯಾ, ಪಾಕಿಸ್ತಾನದ ವಿರುದ್ಧ ತನ್ನ ಅಜೇಯ ಓಟವನ್ನು ಮುಂದುವರೆಸಲು ನೋಡುತ್ತಿದೆ. ಇದೀಗ ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಇದರ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

ಟಾಸ್ ಗೆದ್ದ ಪಾಕಿಸ್ತಾನ

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ನಾಯಕ ಸಲ್ಮಾನ್ ಅಲಿ ಅಘಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟಾಸ್ ಬಳಿಕ ಮಾತನಾಡಿದ ಸಲ್ಮಾನ್ ಅಘಾ ತಂಡದಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದಿದ್ದಾರೆ. ಅಂದರೆ ಕಳೆದ ಪಂದ್ಯದಲ್ಲಿ ಆಡಿದ 11 ಆಟಗಾರರೇ ಈ ಪಂದ್ಯದಲ್ಲೂ ಆಡಲಿದ್ದಾರೆ. ಇತ್ತ ಟಾಸ್ ಸೋತ ಬಳಿಕ ಮಾತನಾಡಿದ ಭಾರತದ ನಾಯಕ ಸೂರ್ಯಕುಮಾರ್ ಯಾದವ್, ತಂಡದಲ್ಲಿ 2 ಬದಲಾವಣೆಗಳಾಗಿರುವುದನ್ನು ಖಚಿತಪಡಿಸಿದರು. ಅದರಂತೆ ಅಭಿಷೇಕ್ ಶರ್ಮಾ ಮತ್ತು ಕುಲ್ದೀಪ್ ಯಾದವ್ ಈ ಪಂದ್ಯದಲ್ಲಿ ಆಡುತ್ತಿದ್ದು, ಅರ್ಶ್ದೀಪ್ ಸಿಂಗ್ ಮತ್ತು ಸಂಜು ಸ್ಯಾಮ್ಸನ್ ಪ್ಲೇಯಿಂಗ್ 11 ನಿಂದ ಹೊರಬಿದ್ದಿದ್ದಾರೆ.

ಭಾರತ- ಪಾಕ್ ಮುಖಾಮುಖಿ ದಾಖಲೆ

ಇದು ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಒಂಬತ್ತನೇ ಮುಖಾಮುಖಿಯಾಗಲಿದೆ. ಹಿಂದಿನ ಎಂಟು ಪಂದ್ಯಗಳಲ್ಲಿ ಭಾರತ ಏಳರಲ್ಲಿ ಗೆದ್ದರೆ, ಪಾಕಿಸ್ತಾನ ಒಂದರಲ್ಲಿ ಗೆದ್ದಿದೆ. ಇದರರ್ಥ ಭಾರತವು ಪಾಕಿಸ್ತಾನದ ಮೇಲೆ 7-1 ಅಂತರದಲ್ಲಿ ಮೇಲುಗೈ ಸಾಧಿಸಿದೆ. ಹಾಗೆಯೇ ಉಭಯ ತಂಡಗಳು ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 16 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತ 12 ಪಂದ್ಯಗಳನ್ನು ಗೆದ್ದಿದೆ. ಇದು ಎರಡೂ ತಂಡಗಳ ನಡುವಿನ 17ನೇ ಮುಖಾಮುಖಿಯಾಗಿದ್ದು, ಭಾರತಕ್ಕೆ 13ನೇ ಗೆಲುವು ದಾಖಲಿಸುವ ಅವಕಾಶ ಸಿಕ್ಕಿದೆ.

IND vs PAK T20 WC Live Score: ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ಕೆ

ಉಭಯ ತಂಡಗಳು

ಪಾಕಿಸ್ತಾನ ತಂಡ: ಸೈಮ್ ಅಯೂಬ್, ಸಾಹಿಬ್ಜಾದಾ ಫರ್ಹಾನ್, ಸಲ್ಮಾನ್ ಅಘಾ (ನಾಯಕ), ಬಾಬರ್ ಆಝಂ, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಫಹೀಮ್ ಅಶ್ರಫ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್), ಶಾಹೀನ್ ಅಫ್ರಿದಿ, ಅಬ್ರಾರ್ ಅಹ್ಮದ್, ಉಸ್ಮಾನ್ ತಾರಿಕ್.

ಭಾರತ ತಂಡ: ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್, ಶಿವಂ ದುಬೆ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ವರುಣ್ ಚಕ್ರವರ್ತಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:50 pm, Sun, 15 February 26

50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ
ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ
ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಕುಂಭ ರಾಶಿಯ ಮೇಲೆ ಹೇಗಿರಲಿದೆ?
ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಕುಂಭ ರಾಶಿಯ ಮೇಲೆ ಹೇಗಿರಲಿದೆ?
ಮಕರ ರಾಶಿಯ ಮೇಲೆ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಪಾಕ್ ಸೇನಾ ಮುಖ್ಯಸ್ಥರ ಬಳಿ ಐಡಿ ಕೇಳಿದ ಮ್ಯೂನಿಕ್ ಭದ್ರತಾ ಸಿಬ್ಬಂದಿ
ಪಾಕ್ ಸೇನಾ ಮುಖ್ಯಸ್ಥರ ಬಳಿ ಐಡಿ ಕೇಳಿದ ಮ್ಯೂನಿಕ್ ಭದ್ರತಾ ಸಿಬ್ಬಂದಿ