IND vs PAK: ಏಷ್ಯಾಕಪ್‌ನಲ್ಲಿ ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ಹೀಗಿರಲಿದೆ
IND vs PAK: ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಆಗಸ್ಟ್ 28 ರಂದು ನಡೆಯಲಿದೆ. ಈಗಾಗಲೇ ಏಷ್ಯಾಕಪ್‌ಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ಪಾಕ್ ವಿರುದ್ಧದ ಪಂದ್ಯಕೆಕ ಭಾರತದ ಪ್ಲೇಯಿಂಗ್ XI ಯಾವುದು ಎಂಬುದು ಕುತೂಹಲಕಾರಿಯಾಗಿದೆ.
ಟಿ20 ಹಾಗೂ ಏಕದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿದ ಟೀಂ ಇಂಡಿಯಾ (Team India) ಇದೀಗ ಏಷ್ಯಾಕಪ್ (Asia Cup) ಮೇಲೆ ಕಣ್ಣಿಟ್ಟಿದೆ. ಆದಾಗ್ಯೂ, ಏಷ್ಯಾಕಪ್ ಗೆಲ್ಲುವುದು ಅಷ್ಟು ಸುಲಭವಲ್ಲ ಏಕೆಂದರೆ ಅದರ ಹಾದಿಯಲ್ಲಿ ಪಾಕಿಸ್ತಾನವೇ ದೊಡ್ಡ ಅಡಚಣೆಯಾಗಿದೆ. ಕಳೆದ ಬಾರಿಯ ಮುಖಾಮುಖಿಯಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಸೋಲು ಕಂಡಿತ್ತು, ಆದರೆ ಇದೀಗ ಸೇಡು ತೀರಿಸಿಕೊಳ್ಳಲು ಸಿದ್ಧತೆ ನಡೆದಿದೆ. ಭಾರತ ಏಷ್ಯಾಕಪ್‌ಗೆ ಅದ್ಭುತ ತಂಡವನ್ನು ಆಯ್ಕೆ ಮಾಡಿದೆ, ಇದರಲ್ಲಿ ಒಂದಕ್ಕಿಂತ ಹೆಚ್ಚು ಮ್ಯಾಚ್ ವಿನ್ನರ್‌ಗಳಿದ್ದಾರೆ. ಆದರೆ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಯಾವ 11 ಆಟಗಾರರು ಟೀಂ ಇಂಡಿಯಾ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಪಡೆಯಲಿದ್ದಾರೆ ಎಂಬುದು ಪ್ರಶ್ನೆ.
ರಾಹುಲ್-ರೋಹಿತ್ ಆರಂಭಿಕ ಜೋಡಿ
ಭಾರತ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಆಡಬೇಕಿದೆ. ಆಗಸ್ಟ್ 28 ರಂದು ಈ ಪಂದ್ಯ ನಡೆಯಲಿದ್ದು, ಕೆಎಲ್ ರಾಹುಲ್ ಮತ್ತು ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಆರಂಭಿಕ ಜೋಡಿಯಾಗಿ ಕಣಕ್ಕಿಳಿಯಲಿದ್ದಾರೆ. ಬಹಳ ದಿನಗಳ ನಂತರ ರಾಹುಲ್ ಟೀಂ ಇಂಡಿಯಾಗೆ ಮರಳಿದ್ದಾರೆ. ರೋಹಿತ್ ಶರ್ಮಾ ಕೂಡ ಫಾರ್ಮ್ನಲ್ಲಿದ್ದು, ಮೊದಲಿಗಿಂತ ಹೆಚ್ಚು ಆಕ್ರಮಣಕಾರಿಯಾಗಿದ್ದಾರೆ. ವಿರಾಟ್ ಕೊಹ್ಲಿ ಕೂಡ ತಂಡಕ್ಕೆ ಮರಳಿದ್ದಾರೆ. ಕೊಹ್ಲಿ ವಿಶ್ರಾಂತಿಯಲ್ಲಿದ್ದು, ಹೊಸ ಹುರುಪಿನೊಂದಿಗೆ ಮೈದಾನಕ್ಕಿಳಿಯಲು ಸಿದ್ಧರಾಗಲಿದ್ದಾರೆ.
ಮಧ್ಯಮ ಕ್ರಮಾಂಕ ಬಲಿಷ್ಠವಾಗಿದೆ
ಭಾರತದ ಆಡುವ ಇಲೆವೆನ್ನ ಮಧ್ಯಮ ಕ್ರಮಾಂಕವು ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ ಮೇಲೆ ಅವಲಂಬಿತವಾಗಿರುತ್ತದೆ. ದೀಪಕ್ ಹೂಡಾ ಫಿನಿಶರ್ ಜವಾಬ್ದಾರಿಯನ್ನು ಪಡೆಯಬಹುದು. ದೀಪಕ್ ಹೂಡಾ ಏಕೆಂದರೆ ಈ ಆಟಗಾರ ಬೌಲಿಂಗ್ ಮಾಡಬಲ್ಲ ಸಾಮಥ್ಯ್ರ ಕೂಡ ಹೊಂದಿದ್ದಾರೆ. ಅಂತಿಮವಾಗಿ ಜಡೇಜಾ ಆಲ್ ರೌಂಡರ್ ಆಗಿ ತಂಡದಲ್ಲಿ ಇರಲಿದ್ದಾರೆ.
ಬೌಲಿಂಗ್ ವಿಭಾಗ ಹೇಗಿರುತ್ತದೆ?
ಭಾರತ ಜಸ್ಪ್ರೀತ್ ಬುಮ್ರಾ ಅವರನ್ನು ಕಂಡಿತ ಮಿಸ್ ಮಾಡಿಕೊಳ್ಳಲಿದೆ ಆದರೆ ರೋಹಿತ್‌ಗೆ ಆಯ್ಕೆಗಳ ಕೊರತೆಯಿಲ್ಲ. ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ವೇಗಿಗಳಾಗಿದ್ದಾರೆ. ಅದೇ ಸಮಯದಲ್ಲಿ ಯುಜುವೇಂದ್ರ ಚಹಾಲ್ ತಮ್ಮ ಸ್ಪಿನ್ ಕೈಚೆಳಕ ತೋರಿಸಲಿದ್ದಾರೆ.
ಪಾಕಿಸ್ತಾನದ ವಿರುದ್ಧ ಭಾರತದ ಸಂಭಾವ್ಯ ಪ್ಲೇಯಿಂಗ್ XI – ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್ ಮತ್ತು ಅರ್ಷದೀಪ್ ಸಿಂಗ್.
ಏಷ್ಯಾಕಪ್‌ಗಾಗಿ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಾಲ್, ರವಿಚಂದ್ರನ್ ಅಶ್ವಿನ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್.