AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ರವೀಂದ್ರ ಜಡೇಜಾ ಔಟ್: ಪ್ಲೇಯಿಂಗ್ 11 ನಲ್ಲಿ ಮೂವರಲ್ಲಿ ಯಾರಿಗೆ ಸಿಗಲಿದೆ ಚಾನ್ಸ್​..?

India vs Pakistan: ಟೀಮ್ ಇಂಡಿಯಾದಲ್ಲಿ ಮೂವರು ಸ್ಪಿನ್ ಆಲ್​ರೌಂಡರ್​ಗಳಿದ್ದರೂ, ಬ್ಯಾಟಿಂಗ್​ನಲ್ಲಿ ದೀಪಕ್ ಹೂಡಾ ಇಬ್ಬರಿಗಿಂತ ಉತ್ತಮ ಫಾರ್ಮ್​ನಲ್ಲಿದ್ದಾರೆ.

IND vs PAK: ರವೀಂದ್ರ ಜಡೇಜಾ ಔಟ್: ಪ್ಲೇಯಿಂಗ್ 11 ನಲ್ಲಿ ಮೂವರಲ್ಲಿ ಯಾರಿಗೆ ಸಿಗಲಿದೆ ಚಾನ್ಸ್​..?
Indian Team
TV9 Web
| Edited By: |

Updated on:Sep 03, 2022 | 5:11 PM

Share

Asia Cup 2022: ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಸೂಪರ್-4 ಹಂತದ 2ನೇ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ (India vs Pakistan) ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಗಾಯಗೊಂಡು ರವೀಂದ್ರ ಜಡೇಜಾ (Ravindra Jadeja) ತಂಡದಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ತಂಡಕ್ಕೆ ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ. ಹೀಗಾಗಿಯೇ ಪಾಕ್ ವಿರುದ್ದ ಜಡೇಜಾ ಸ್ಥಾನದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಟೀಮ್ ಇಂಡಿಯಾದಲ್ಲಿ ಮೂವರು ಸ್ಪಿನ್ ಆಲ್​ರೌಂಡರ್​ಗಳಿದ್ದಾರೆ. ಅವರೆಂದರೆ ದೀಪಕ್ ಹೂಡಾ, ರವಿಚಂದ್ರನ್ ಅಶ್ವಿನ್ ಹಾಗೂ ಅಕ್ಷರ್ ಪಟೇಲ್. ಇವರಿಬ್ಬರಲ್ಲಿ ಒಬ್ಬರನ್ನು ಕಣಕ್ಕಿಳಿಸಬಹುದು. ಆದರೆ ಇವರಲ್ಲಿ ಯಾರನ್ನು ಆಯ್ಕೆ ಮಾಡುವುದು  ಎಂಬ ಚಿಂತೆಯೊಂದು ಟೀಮ್ ಇಂಡಿಯಾಗೆ ಶುರುವಾಗಿದೆ.

ಏಕೆಂದರೆ ಇಲ್ಲಿ ಮೂವರು ಸ್ಪಿನ್ ಆಲ್​ರೌಂಡರ್​ಗಳಿದ್ದರೂ, ಬ್ಯಾಟಿಂಗ್​ನಲ್ಲಿ ದೀಪಕ್ ಹೂಡಾ ಇಬ್ಬರಿಗಿಂತ ಉತ್ತಮ ಫಾರ್ಮ್​ನಲ್ಲಿದ್ದಾರೆ. ಇನ್ನು ಬೌಲಿಂಗ್​ ಅನ್ನು ಪರಿಗಣನೆಗೆ ತೆಗೆದುಕೊಂಡರೆ ಅಶ್ವಿನ್ ಹಾಗೂ ಅಕ್ಷರ್ ನಡುವೆ ಪೈಪೋಟಿ ಇದೆ. ಇಲ್ಲಿ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್​ ಬ್ಯಾಟಿಂಗ್​ಗೆ ಹೆಚ್ಚಿನ ಒತ್ತು ನೀಡಲು ಬಯಸಿದರೆ ದೀಪಕ್ ಹೂಡಾಗೆ ಚಾನ್ಸ್ ಸಿಗಬಹುದು. ಹಾಗೆಯೇ ಉತ್ತಮ ಸ್ಪಿನ್ನರ್​ಗೆ ಮಣೆಹಾಕಲು ಬಯಸಿದರೆ ಅನುಭವ ಸ್ಪಿನ್ನರ್ ಅಶ್ವಿನ್​ಗೆ ಅವಕಾಶ ನೀಡಬಹುದು.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದಾಗ್ಯೂ ಎಡಗೈ ಸ್ಪಿನ್ನರ್​ ಅನ್ನು ಕಣಕ್ಕಿಳಿಸಲು ಮುಂದಾದರೆ ಅಕ್ಷರ್ ಪಟೇಲ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ಮೇಲ್ನೋಟಕ್ಕೆ ಜಡೇಜಾ ಸ್ಥಾನಕ್ಕೆ ದೀಪಕ್ ಹೂಡಾ ಸೂಕ್ತ ಎನಿಸಿದರೂ, ಟೀಮ್ ಇಂಡಿಯಾ ಎಡಗೈ ಬ್ಯಾಟ್ಸ್​ಮನ್​ಗೆ ಒತ್ತು ನೀಡುವ ಸಾಧ್ಯತೆಯಿದೆ. ಏಕೆಂದರೆ ತಂಡದಲ್ಲಿ ಏಕೈಕ ಎಡಗೈ ಆಟಗಾರನಾಗಿ ರವೀಂದ್ರ ಜಡೇಜಾ ಮಾತ್ರ ಕಾಣಿಸಿಕೊಂಡಿದ್ದರು. ಇದೀಗ ತಂಡದಲ್ಲಿರುವ ಎಡಗೈ ಆಟಗಾರನೆಂದರೆ ಅಕ್ಷರ್ ಪಟೇಲ್. ಹೀಗಾಗಿ ಪಟೇಲ್​ರನ್ನು ಕಣಕ್ಕಿಳಿಸಿದರೂ ಅಚ್ಚರಿಪಡಬೇಕಿಲ್ಲ.

ಒಟ್ಟಿನಲ್ಲಿ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಆಗುವುದು ಖಚಿತ. ಅದರಂತೆ ಮೂವರು ಸ್ಪಿನ್ ಆಲ್​ರೌಂಡರ್​ಗಳಲ್ಲಿ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್​ಗೆ ಯಾರಿಗೆ ಮಣೆಹಾಕಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಟೀಮ್ ಇಂಡಿಯಾ ಹೀಗಿದೆ:

ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌ ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದಿನೇಶ್‌ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್‌ ಪಾಂಡ್ಯ, ಅಕ್ಷರ್‌ ಪಟೇಲ್‌, ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಸಿಂಗ್‌, ಅವೇಶ್‌ ಖಾನ್‌, ಯುಜ್ವೇಂದ್ರ ಚಹಲ್‌, ಆರ್‌ ಅಶ್ವಿನ್‌, ರವಿ ಬಿಷ್ಣೋಯ್‌.

ಮೀಸಲು ಆಟಗಾರರು: ದೀಪಕ್‌ ಚಹರ್‌ ಮತ್ತು ಶ್ರೇಯಸ್‌ ಅಯ್ಯರ್‌.

Published On - 4:59 pm, Sat, 3 September 22

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!