Asia Cup 2022: ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಸೂಪರ್-4 ಹಂತದ 2ನೇ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ (India vs Pakistan) ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಗಾಯಗೊಂಡು ರವೀಂದ್ರ ಜಡೇಜಾ (Ravindra Jadeja) ತಂಡದಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ತಂಡಕ್ಕೆ ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ. ಹೀಗಾಗಿಯೇ ಪಾಕ್ ವಿರುದ್ದ ಜಡೇಜಾ ಸ್ಥಾನದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಟೀಮ್ ಇಂಡಿಯಾದಲ್ಲಿ ಮೂವರು ಸ್ಪಿನ್ ಆಲ್ರೌಂಡರ್ಗಳಿದ್ದಾರೆ. ಅವರೆಂದರೆ ದೀಪಕ್ ಹೂಡಾ, ರವಿಚಂದ್ರನ್ ಅಶ್ವಿನ್ ಹಾಗೂ ಅಕ್ಷರ್ ಪಟೇಲ್. ಇವರಿಬ್ಬರಲ್ಲಿ ಒಬ್ಬರನ್ನು ಕಣಕ್ಕಿಳಿಸಬಹುದು. ಆದರೆ ಇವರಲ್ಲಿ ಯಾರನ್ನು ಆಯ್ಕೆ ಮಾಡುವುದು ಎಂಬ ಚಿಂತೆಯೊಂದು ಟೀಮ್ ಇಂಡಿಯಾಗೆ ಶುರುವಾಗಿದೆ.
ಏಕೆಂದರೆ ಇಲ್ಲಿ ಮೂವರು ಸ್ಪಿನ್ ಆಲ್ರೌಂಡರ್ಗಳಿದ್ದರೂ, ಬ್ಯಾಟಿಂಗ್ನಲ್ಲಿ ದೀಪಕ್ ಹೂಡಾ ಇಬ್ಬರಿಗಿಂತ ಉತ್ತಮ ಫಾರ್ಮ್ನಲ್ಲಿದ್ದಾರೆ. ಇನ್ನು ಬೌಲಿಂಗ್ ಅನ್ನು ಪರಿಗಣನೆಗೆ ತೆಗೆದುಕೊಂಡರೆ ಅಶ್ವಿನ್ ಹಾಗೂ ಅಕ್ಷರ್ ನಡುವೆ ಪೈಪೋಟಿ ಇದೆ. ಇಲ್ಲಿ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಬ್ಯಾಟಿಂಗ್ಗೆ ಹೆಚ್ಚಿನ ಒತ್ತು ನೀಡಲು ಬಯಸಿದರೆ ದೀಪಕ್ ಹೂಡಾಗೆ ಚಾನ್ಸ್ ಸಿಗಬಹುದು. ಹಾಗೆಯೇ ಉತ್ತಮ ಸ್ಪಿನ್ನರ್ಗೆ ಮಣೆಹಾಕಲು ಬಯಸಿದರೆ ಅನುಭವ ಸ್ಪಿನ್ನರ್ ಅಶ್ವಿನ್ಗೆ ಅವಕಾಶ ನೀಡಬಹುದು.
ಇದಾಗ್ಯೂ ಎಡಗೈ ಸ್ಪಿನ್ನರ್ ಅನ್ನು ಕಣಕ್ಕಿಳಿಸಲು ಮುಂದಾದರೆ ಅಕ್ಷರ್ ಪಟೇಲ್ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ಮೇಲ್ನೋಟಕ್ಕೆ ಜಡೇಜಾ ಸ್ಥಾನಕ್ಕೆ ದೀಪಕ್ ಹೂಡಾ ಸೂಕ್ತ ಎನಿಸಿದರೂ, ಟೀಮ್ ಇಂಡಿಯಾ ಎಡಗೈ ಬ್ಯಾಟ್ಸ್ಮನ್ಗೆ ಒತ್ತು ನೀಡುವ ಸಾಧ್ಯತೆಯಿದೆ. ಏಕೆಂದರೆ ತಂಡದಲ್ಲಿ ಏಕೈಕ ಎಡಗೈ ಆಟಗಾರನಾಗಿ ರವೀಂದ್ರ ಜಡೇಜಾ ಮಾತ್ರ ಕಾಣಿಸಿಕೊಂಡಿದ್ದರು. ಇದೀಗ ತಂಡದಲ್ಲಿರುವ ಎಡಗೈ ಆಟಗಾರನೆಂದರೆ ಅಕ್ಷರ್ ಪಟೇಲ್. ಹೀಗಾಗಿ ಪಟೇಲ್ರನ್ನು ಕಣಕ್ಕಿಳಿಸಿದರೂ ಅಚ್ಚರಿಪಡಬೇಕಿಲ್ಲ.
ಒಟ್ಟಿನಲ್ಲಿ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಆಗುವುದು ಖಚಿತ. ಅದರಂತೆ ಮೂವರು ಸ್ಪಿನ್ ಆಲ್ರೌಂಡರ್ಗಳಲ್ಲಿ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ಗೆ ಯಾರಿಗೆ ಮಣೆಹಾಕಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಟೀಮ್ ಇಂಡಿಯಾ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್‌ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಯುಜ್ವೇಂದ್ರ ಚಹಲ್, ಆರ್ ಅಶ್ವಿನ್, ರವಿ ಬಿಷ್ಣೋಯ್.
ಮೀಸಲು ಆಟಗಾರರು: ದೀಪಕ್ ಚಹರ್ ಮತ್ತು ಶ್ರೇಯಸ್ ಅಯ್ಯರ್.
Published On - 4:59 pm, Sat, 3 September 22