90 ಮೀ. ಸಿಕ್ಸರ್ ಬಾರಿಸಿ ಅಂಪೈರ್‌ಗೆ ಬೈಸೆಪ್ಸ್ ತೋರಿಸಿದ ರೋಹಿತ್ ಶರ್ಮಾ..! ವಿಡಿಯೋ ವೈರಲ್

Rohit Sharma Six: ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ತಮ್ಮ ಏಕದಿನ ವೃತ್ತಿಜೀವನದ 300 ನೇ ಸಿಕ್ಸರ್ ಬಾರಿಸಿದ ತಕ್ಷಣ, ಅವರು ಅಂಪೈರ್‌ಗೆ ತಮ್ಮ ಬೈಸೆಪ್ಸ್ ತೋರಿಸಿ ಸಂಭ್ರಮಿಸಿದರು. ಇದೀಗ ರೋಹಿತ್ ಅವರ ಈ ಅದ್ಭುತ ಸಂಭ್ರಮದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

90 ಮೀ. ಸಿಕ್ಸರ್ ಬಾರಿಸಿ ಅಂಪೈರ್‌ಗೆ ಬೈಸೆಪ್ಸ್ ತೋರಿಸಿದ ರೋಹಿತ್ ಶರ್ಮಾ..! ವಿಡಿಯೋ ವೈರಲ್
ರೋಹಿತ್ ಶರ್ಮಾ
Follow us
ಪೃಥ್ವಿಶಂಕರ
|

Updated on:Oct 15, 2023 | 8:16 AM

ವಿಶ್ವಕಪ್ 2023 ರ (ICC World Cup 2023 12 ನೇ ಪಂದ್ಯದಲ್ಲಿ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಮಣಿಸುವಲ್ಲಿ ಟೀಂ ಇಂಡಿಯಾ (India vs Pakistan) ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 10 ವಿಕೆಟ್ ನಷ್ಟಕ್ಕೆ 191 ರನ್ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ (Rohit Sharma) ಆರಂಭದಿಂದಲ್ಲೇ ಸ್ಫೋಟಕ ಬ್ಯಾಟಿಂಗ್ ಮಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಸಮಯದಲ್ಲಿ, ರೋಹಿತ್ ತಮ್ಮ ಏಕದಿನ ವೃತ್ತಿಜೀವನದಲ್ಲಿ 300 ಸಿಕ್ಸರ್ ಸಿಡಿಸಿದ ದಾಖಲೆಯನ್ನು ಬರೆದರು. ಈ ವೇಳೆ ದಾಖಲೆಯ ಸಿಕ್ಸರ್​ ಸಿಡಿಸಿದ ಹಿಟ್​ಮ್ಯಾನ್ ಮೈದಾನದಲ್ಲಿ ವಿಭಿನ್ನವಾಗಿ ಸಂಭ್ರಮಿಸಿದರು.

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ತಮ್ಮ ಏಕದಿನ ವೃತ್ತಿಜೀವನದ 300 ನೇ ಸಿಕ್ಸರ್ ಬಾರಿಸಿದ ತಕ್ಷಣ, ಅವರು ಅಂಪೈರ್‌ಗೆ ತಮ್ಮ ಬೈಸೆಪ್ಸ್ ತೋರಿಸಿ ಸಂಭ್ರಮಿಸಿದರು. ಇದೀಗ ರೋಹಿತ್ ಅವರ ಈ ಅದ್ಭುತ ಸಂಭ್ರಮದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಪಂದ್ಯದಲ್ಲಿ ನಾಯಕ ರೋಹಿತ್, ಪಾಕಿಸ್ತಾನದ ವಿರುದ್ಧ 63 ಎಸೆತಗಳಲ್ಲಿ ಬೌಂಡರಿ ಮತ್ತು 6 ಸಿಕ್ಸರ್‌ಗಳ ಸಹಿತ 86 ರನ್‌ಗಳ ಇನಿಂಗ್ಸ್‌ ಆಡಿದರು.

ಪಂದ್ಯ ಹೀಗಿತ್ತು

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಇದು ಸತತ ಎಂಟನೇ ಗೆಲುವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಕೇವಲ 191 ರನ್‌ಗಳಿಗೆ ಆಲೌಟ್ ಆಯಿತು. ಇದಾದ ಬಳಿಕ ಭಾರತ ತಂಡ 30.3 ಓವರ್‌ಗಳಲ್ಲಿ 117 ಎಸೆತಗಳು ಬಾಕಿ ಇರುವಂತೆಯೇ ಏಳು ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿತು.

IND vs PAK, ICC World Cup: ಜಮ್ಮು-ಕಾಶ್ಮೀರದಲ್ಲಿ ಭಾರತದ ಗೆಲುವನ್ನು ಅದ್ಧೂರಿಯಾಗಿ ಸಂಭ್ರಮಿಸಿದ ಫ್ಯಾನ್ಸ್

ಭಾರತದ ಪರ ನಾಯಕ ರೋಹಿತ್ ಶರ್ಮಾ ಕೇವಲ 63 ಎಸೆತಗಳಲ್ಲಿ 86 ರನ್ ಸಿಡಿಸಿದ್ದರು. ಈ ವೇಳೆ ಹಿಟ್‌ಮ್ಯಾನ್ 6 ಬೌಂಡರಿ ಹಾಗೂ 6 ಸಿಕ್ಸರ್ ಸಹ ಸಿಡಿಸಿದ್ದರು. ಶ್ರೇಯಸ್ ಅಯ್ಯರ್ ಕೂಡ 53 ರನ್ ಗಳಿಸಿ ಅಜೇಯರಾಗಿ ಮರಳಿದರು. ಇದಕ್ಕೂ ಮುನ್ನ ಬೌಲಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಹಾರ್ದಿಕ್ ಪಾಂಡ್ಯ ಮತ್ತು ಮೊಹಮ್ಮದ್ ಸಿರಾಜ್ ತಲಾ ಎರಡು ವಿಕೆಟ್ ಪಡೆದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:09 am, Sun, 15 October 23

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ