IND Vs PAK: ರೋಹಿತ್ ಶರ್ಮಾ vs ಬಾಬರ್ ಆಜಂ: ಯಾರು ಉತ್ತಮ ನಾಯಕ?

IND Vs PAK: ಒಟ್ಟಾರೆ ಟಿ20 ನಾಯಕತ್ವ ನೋಡುವುದಾದರೆ, 41 ಪಂದ್ಯಗಳ 36 ಇನ್ನಿಂಗ್ಸ್‌ಗಳಲ್ಲಿ 42.30 ಸರಾಸರಿಯಲ್ಲಿ 1396 ರನ್ ಗಳಿಸಿದ್ದಾರೆ. ಈ ವೇಳೆ ಒಂದು ಶತಕ ಮತ್ತು 16 ಅರ್ಧಶತಕಗಳನ್ನು ಬಾರಿಸಿದ್ದಾರೆ.

IND Vs PAK: ರೋಹಿತ್ ಶರ್ಮಾ vs ಬಾಬರ್ ಆಜಂ: ಯಾರು ಉತ್ತಮ ನಾಯಕ?
IND Vs PAK
Follow us
TV9 Web
| Updated By: ಝಾಹಿರ್ ಯೂಸುಫ್

Updated on:Aug 25, 2022 | 11:24 AM

Asia Cup 2022: ಏಷ್ಯಾಕಪ್ ಆಗಸ್ಟ್ 27 ರಿಂದ ಶುರುವಾಗಲಿದೆ. ಭಾನುವಾರ ನಡೆಯಲಿರುವ 2ನೇ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ (India vs Pakistan) ತಂಡಗಳು ಮುಖಾಮುಖಿಯಾಗಲಿದೆ. ಈ ಬಾರಿ ಭಾರತ ತಂಡವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸಲಿದ್ದಾರೆ. ಅಂದರೆ ಕಳೆದ ಬಾರಿ ಭಾರತ-ಪಾಕ್ ಮುಖಾಮುಖಿ ವೇಳೆ ವಿರಾಟ್ ಕೊಹ್ಲಿ (Virat Kohli) ನಾಯಕರಾಗಿದ್ದರು. ಇದೀಗ ರೋಹಿತ್ ಶರ್ಮಾ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ. ವಿಶೇಷ ಎಂದರೆ ಇದು ಬಾಬರ್ ಆಜಂ ಹಾಗೂ ರೋಹಿತ್ ಶರ್ಮಾ ನಾಯಕತ್ವದ ಮೊದಲ ಮುಖಾಮುಖಿ. ಹೀಗಾಗಿಯೇ ಇಬ್ಬರಲ್ಲಿ ಯಾರು ಬೆಸ್ಟ್ ಎಂಬ ಪ್ರಶ್ನೆಯೊಂದು ಹಲವರಲ್ಲಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ…

ರೋಹಿತ್ ಶರ್ಮಾ:

ಟಿ20 ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ 2017 ರಿಂದ 35 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಈ ಅವಧಿಯಲ್ಲಿ ಟೀಮ್ ಇಂಡಿಯಾ 29 ಪಂದ್ಯಗಳನ್ನು ಗೆದ್ದಿದ್ದರೆ, ಕೇವಲ ಆರು ಪಂದ್ಯಗಳಲ್ಲಿ ಮಾತ್ರ ಸೋಲನುಭವಿಸಿದೆ. ಅಂದರೆ ಎಂಎಸ್ ಧೋನಿ (41) ಮತ್ತು ವಿರಾಟ್ ಕೊಹ್ಲಿ (30) ನಂತರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಜಯ ತಂದುಕೊಟ್ಟ ನಾಯಕ ಎಂಬ ಖ್ಯಾತಿ ರೋಹಿತ್ ಶರ್ಮಾಗೆ ಸಲ್ಲುತ್ತದೆ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು ನಾಯಕತ್ವದ ಅವಧಿಯಲ್ಲಿ ಹಿಟ್​ಮ್ಯಾನ್​ ಬ್ಯಾಟಿಂಗ್ ಕೂಡ ಸುಧಾರಿಸಿದೆ. ನಾಯಕನಾಗಿ ಆಡಿದ 35 ಪಂದ್ಯಗಳಲ್ಲಿ 36.28 ಸರಾಸರಿಯಲ್ಲಿ ಒಟ್ಟು 1161 ರನ್ ಗಳಿಸಿದ್ದಾರೆ. ಈ ವೇಳೆ ಎರಡು ಶತಕ ಮತ್ತು ಎಂಟು ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ಕ್ಯಾಪ್ಟನ್ ಆಗಿ ಕಣಕ್ಕಿಳಿದು ರೋಹಿತ್ ಶರ್ಮಾ 100 ಬೌಂಡರಿಗಳು ಮತ್ತು 63 ಸಿಕ್ಸರ್‌ಗಳನ್ನು ಕೂಡ ಬಾರಿಸಿದ್ದಾರೆ.

ಹಾಗೆಯೇ ಒಟ್ಟಾರೆ ಟಿ20 ಕ್ರಿಕೆಟ್ ವೃತ್ತಿಜೀವನದ ಬಗ್ಗೆ ನೋಡುವುದಾದರೆ, ಒಟ್ಟು 132 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ 124 ಇನ್ನಿಂಗ್ಸ್‌ಗಳಲ್ಲಿ 32.3 ಸರಾಸರಿಯಲ್ಲಿ 3487 ರನ್​ಗಳಿಸಿದ್ದಾರೆ. ಈ ವೇಳೆ ನಾಲ್ಕು ಶತಕ ಮತ್ತು 27 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಬಾಬರ್ ಆಜಂ:

ಬಾಬರ್ ಆಜಮ್ 2019 ರಿಂದ ಟಿ20 ಕ್ರಿಕೆಟ್‌ನಲ್ಲಿ 41 ಪಂದ್ಯಗಳಲ್ಲಿ ಪಾಕಿಸ್ತಾನ ತಂಡವನ್ನು ಮುನ್ನಡೆಸಿದ್ದಾರೆ. ಈ ಅವಧಿಯಲ್ಲಿ ತಂಡ 26 ಪಂದ್ಯಗಳನ್ನು ಗೆದ್ದಿದ್ದರೆ, 10 ಪಂದ್ಯಗಳಲ್ಲಿ ಸೋತಿದೆ. ಇನ್ನು 5 ಪಂದ್ಯಗಳು ರದ್ದಾಗಿತ್ತು. ಪಾಕಿಸ್ತಾನದ ಮಾಜಿ ನಾಯಕ ಸರ್ಫರಾಜ್ ಅಹ್ಮದ್ (29) ನಂತರ ಪಾಕ್ ತಂಡವನ್ನು ಟಿ20 ಸ್ವರೂಪದಲ್ಲಿ ಅತಿ ಹೆಚ್ಚು ಪಂದ್ಯಗಳಲ್ಲಿ ಮುನ್ನಡೆಸಿದ ನಾಯಕನಾಗಿ ಬಾಬರ್ ಗುರುತಿಸಿಕೊಂಡಿದ್ದಾರೆ.

ಇನ್ನು ಒಟ್ಟಾರೆ ಟಿ20 ನಾಯಕತ್ವ ನೋಡುವುದಾದರೆ, 41 ಪಂದ್ಯಗಳ 36 ಇನ್ನಿಂಗ್ಸ್‌ಗಳಲ್ಲಿ 42.30 ಸರಾಸರಿಯಲ್ಲಿ 1396 ರನ್ ಗಳಿಸಿದ್ದಾರೆ. ಈ ವೇಳೆ ಒಂದು ಶತಕ ಮತ್ತು 16 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ನಾಯಕನಾಗಿ ಕಣಕ್ಕಿಳಿದಾಗ ಬಾಬರ್ ಆಜಂ 151 ಬೌಂಡರಿ ಮತ್ತು 24 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಇಲ್ಲಿ ಮೇಲ್ನೋಟಕ್ಕೆ ಇಬ್ಬರು ನಾಯಕರುಗಳು ಸಮಬಲ ಹೊಂದಿದ್ದಾರೆ ಎನ್ನಬಹುದು. ಇದಾಗ್ಯೂ ಕಳೆದ ಕೆಲ ಸರಣಿಗಳಿಂದ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಸತತ ಗೆಲುವು ದಾಖಲಿಸುತ್ತಾ ಬಂದಿದೆ. ಹೀಗಾಗಿ ಟಿ20 ವಿಶ್ವಕಪ್​ನಲ್ಲಿನ ಸೋಲಿನ ಸೇಡನ್ನು ತೀರಿಸಿಕೊಳ್ಳುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ.

ಏಷ್ಯಾಕಪ್​ಗಾಗಿ ಉಭಯ ತಂಡಗಳು ಹೀಗಿವೆ:

ಪಾಕಿಸ್ತಾನ್ ತಂಡ ಹೀಗಿದೆ: ಬಾಬರ್ ಆಜಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್, ವಾಸಿಮ್ ಜೂನಿಯರ್, ನಸೀಮ್ ಶಾ, ಶಾನವಾಜ್ ದಹಾನಿ, ಉಸ್ಮಾನ್ ಖಾದಿರ್, ಮೊಹಮ್ಮದ್ ಹಸ್ನೈನ್

ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಮೀಸಲು ಆಟಗಾರರು: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಹಾಗೂ ದೀಪಕ್ ಚಹರ್.

Published On - 11:23 am, Thu, 25 August 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ