India vs Pakistan, T20 World cup 2021: 6+5: ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿರಲಿದೆಯಂತೆ

India vs Pakistan Playing 11: ಆರಂಭಿಕರಾಗಿ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸದ್ದು, 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಲಿದ್ದಾರೆ. ಹಾಗೆಯೇ ತಂಡದಲ್ಲಿ ಸೂರ್ಯಕುಮಾರ್ ಯಾದವ್ ನಾಲ್ಕನೇ ಸ್ಥಾನ ಪಡೆಯಲಿದ್ದಾರೆ.

India vs Pakistan, T20 World cup 2021: 6+5: ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿರಲಿದೆಯಂತೆ
Team India

ಭಾರತ-ಪಾಕಿಸ್ತಾನ್ (India vs Pakistan) ನಡುವಣ ಕ್ರಿಕೆಟ್ ಕದನಕ್ಕಾಗಿ ಕ್ಷಣಗಣನೆ ಶುರುವಾಗಿದೆ. ಭಾನುವಾರ ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದು ಈಗ ಚರ್ಚಾ ವಿಷಯ. ಏಕೆಂದರೆ ಅಭ್ಯಾಸ ಪಂದ್ಯದಲ್ಲಿ ಒಬ್ಬರಿಗಿಂತ ಒಬ್ಬರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅಷ್ಟೇ ಅಲ್ಲದೆ ಬಹುತೇಕ ಆಟಗಾರರು ಕೂಡ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಯಾರಿಗೆ ಅಂತಿಮ 11 ರಲ್ಲಿ ಚಾನ್ಸ್​ ಸಿಗಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಟೀಮ್ ಇಂಡಿಯಾದ ಮಾಜಿ ಆಟಗಾರ, ಮಾಜಿ ಆಯ್ಕೆಗಾರಾಗಿರುವ ಸಬಾ ಕರೀಮ್ ಉತ್ತರ ನೀಡಿದ್ದಾರೆ.

ಟಿವಿ9 ಜೊತೆ ಮಾತನಾಡಿರುವ ಟೀಮ್ ಇಂಡಿಯಾ ಮಾಜಿ ಆಯ್ಕೆಗಾರ ಸಬಾ ಕರೀಮ್, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವರುಣ್ ಚಕ್ರವರ್ತಿಗೆ ಅವಕಾಶ ಸಿಗುವುದಿಲ್ಲ ಎಂದಿದ್ದಾರೆ. ಅಭ್ಯಾಸ ಪಂದ್ಯದಲ್ಲೇ ಟೀಮ್ ಇಂಡಿಯಾ ಆಡುವ ಬಳಗವನ್ನು ಸಿದ್ಧಪಡಿಸಿದ್ದು, ಅದರಂತೆ ಭಾರತ ತಂಡ ಇರಲಿದೆ. ಎಲ್ಲರೂ ಹಾರ್ದಿಕ್ ಪಾಂಡ್ಯ ಬೌಲಿಂಗ್ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಅವರು ಬೌಲಿಂಗ್ ಮಾಡದ ಹೊರತಾಗಿಯೂ ಅವರಿಗೆ ತಂಡದಲ್ಲಿ ಸ್ಥಾನ ಸಿಗಲಿದೆ. ಹಾರ್ದಿಕ್ ಪಾಂಡ್ಯ ಬಿಗ್ ಹಿಟ್ಟರ್​. ಹೀಗಾಗಿ ಅವರನ್ನು ಆಡುವ ಬಳಗದಲ್ಲಿ ಬ್ಯಾಟರ್ ಆಗಿ ಬಳಸಿಕೊಳ್ಳಲಿದ್ದಾರೆ. ಹಾಗೆಯೇ ಎಡಗೈ ಹಿಟ್ಟರ್ ಆಗಿ ರಿಷಭ್ ಪಂತ್ ಕೂಡ ತಂಡದಲ್ಲಿ ಇರಲಿದ್ದಾರೆ ಎಂದು ಸಬಾ ಕರೀಮ್ ತಿಳಿಸಿದ್ದಾರೆ.

ಇನ್ನು ಟೀಮ್ ಇಂಡಿಯಾ 6+5 ಸೂತ್ರದೊಂದಿಗೆ ಕಣಕ್ಕಿಳಿಯಲಿದ್ದು, ಅದರಂತೆ ಪಾಕ್ ವಿರುದ್ದದ ಪಂದ್ಯದಲ್ಲಿ ಭಾರತ ತಂಡದಲ್ಲಿ 6 ಬ್ಯಾಟರ್​ಗಳು ಹಾಗೂ 5 ಬೌಲರುಗಳು ಕಾನಿಸಿಕೊಳ್ಳಿದ್ದಾರೆ ಎಂದು ಸಬಾ ಕರೀಮ್ ಹೇಳಿದ್ದಾರೆ. ಆರಂಭಿಕರಾಗಿ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸದ್ದು, 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಲಿದ್ದಾರೆ. ಹಾಗೆಯೇ ತಂಡದಲ್ಲಿ ಸೂರ್ಯಕುಮಾರ್ ಯಾದವ್ ನಾಲ್ಕನೇ ಸ್ಥಾನ ಪಡೆಯಲಿದ್ದಾರೆ. ಇನ್ನು ರಿಷಬ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ 5 ಮತ್ತು 6ನೇ ಕ್ರಮಾಂಕದಲ್ಲಿ ಆಡಲಿದ್ದಾರೆ ಎಂದಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಆಲ್ರರೌಂಡರ್​ ಜಡೇಜಾ ಮತ್ತು ಅಶ್ವಿನ್ ಅವರನ್ನು ಟೀಮ್ ಇಂಡಿಯಾ ಬಳಸಿಕೊಳ್ಳಲಿದೆ. ಇದಲ್ಲದೆ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ ವೇಗಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ವರುಣ್ ಚಕ್ರವರ್ತಿಯನ್ನು ಆಯ್ಕೆ ಮಾಡುವುದಿಲ್ಲ ಎಂದಿರುವ ಸಬಾ ಕರೀಮ್ ಅದಕ್ಕೆ ಕಾರಣವನ್ನೂ ತಿಳಿಸಿದ್ದಾರೆ.

ಅಶ್ವಿನ್ ಅವರು ಅಭ್ಯಾಸ ಪಂದ್ಯಗಳಲ್ಲಿ ಪವರ್‌ಪ್ಲೇಗಳಲ್ಲಿ ಬೌಲಿಂಗ್ ಮಾಡಿದ್ದರು. ಇದು ಅವರಿಗೆ ಪಾಕ್ ವಿರುದ್ದದ ಪಂದ್ಯದಲ್ಲಿ ಸ್ಥಾನ ಸಿಗಲಿದೆ ಎಂಬುದಕ್ಕೆ ಉತ್ತಮ ಸೂಚನೆ. ಇನ್ನು ವರುಣ್ ಚಕ್ರವರ್ತಿಗೆ ಅಭ್ಯಾಸ ಪಂದ್ಯದಲ್ಲೂ ಹೆಚ್ಚಿನ ಬೌಲಿಂಗ್​ಗೆ ಅವಕಾಶ ನೀಡಿಲ್ಲ. ಆಸ್ಟ್ರೇಲಿಯಾ ವಿರುದ್ಧ ಕೇವಲ 2 ಓವರ್‌ಗಳನ್ನು ಬೌಲ್ ಮಾಡಿದ್ದರು. ಈ ವೇಳೆ ದುಬಾರಿಯಾಗಿದ್ದರು. ಮತ್ತೊಂದೆಡೆ ಎರಡು ಅಭ್ಯಾಸ ಪಂದ್ಯಗಳಲ್ಲೂ ಕಣಕ್ಕಿಳಿದ ಅಶ್ವಿನ್ ಯಶಸ್ವಿಯಾಗಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸಿದ್ದರು.

ಪಾಕಿಸ್ತಾನದ ವಿರುದ್ಧ ಸಬಾ ಕರೀಮ್ ಅವರ ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ:
ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ

ಇದನ್ನೂ ಓದಿ: India vs Pakistan, T20 World cup 2021: ಒಂದು ದಿನ ಮೊದಲೇ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ್

ಇದನ್ನೂ ಓದಿ: T20 World cup 2021: ಪಾಕ್ ವಿರುದ್ದದ ಪಂದ್ಯದೊಂದಿಗೆ ಹೊಸ ಸಾಧನೆ ಮಾಡಲಿದ್ದಾರೆ ಕೆಎಲ್ ರಾಹುಲ್, ಪಾಂಡ್ಯ

ಇದನ್ನೂ ಓದಿ: T20 World Cup 2021: ಟಿ20 ರ‍್ಯಾಂಕಿಂಗ್‌​ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?

(IND vs PAK, T20 World Cup 2021: Saba Karim picks Team India PLAYING XI against Pakistan)

 

Click on your DTH Provider to Add TV9 Kannada