AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಪಾಕ್ ಎದುರು ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಮತ್ತಷ್ಟು ಕಠಿಣ..!

IND vs PAK, U19 Asia Cup: ಈ ಗೆಲುವಿನೊಂದಿಗೆ ಪಾಕಿಸ್ತಾನ ಸೆಮಿಫೈನಲ್​ಗೆ ಸುಲಭ ಅರ್ಹತೆ ಸಾಧಿಸಿದರೆ, ಭಾರತ ಮಾತ್ರ ತನ್ನ ಸೆಮೀಸ್ ಹಾದಿಯನ್ನು ಸಾಕಷ್ಟು ಕಠಿಣ ಮಾಡಿಕೊಂಡಿದೆ. ಟೀಂ ಇಂಡಿಯಾಕ್ಕೆ ಸೆಮಿಫೈನಲ್ ಹಾದಿ ಇನ್ನೂ ತೆರೆದಿದೆ. ಆದರೆ ತಂಡ ಇದಕ್ಕಾಗಿ ಮುಂದಿನ ಪಂದ್ಯದಲ್ಲಿ ತಾನೂ ಗೆಲ್ಲುವುದಲ್ಲದೆ, ಪಾಕ್ ತಂಡದ ಗೆಲುವಿಗೂ ಪ್ರಾರ್ಥಿಸಬೇಕಿದೆ.

IND vs PAK: ಪಾಕ್ ಎದುರು ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಮತ್ತಷ್ಟು ಕಠಿಣ..!
ಭಾರತ- ಪಾಕಿಸ್ತಾನ
Follow us
ಪೃಥ್ವಿಶಂಕರ
|

Updated on:Dec 11, 2023 | 7:24 AM

ಅಂಡರ್ 19 ಏಷ್ಯಾಕಪ್‌ನಲ್ಲಿ (ACC U19 Asia Cup 2023) ನಡೆದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭಾರತ (India vs Pakistan) ಯುವ ಪಡೆ 8 ವಿಕೆಟ್​ಗಳ ಹೀನಾಯ ಸೋಲು ಅನುಭವಿಸಿದೆ. ದುಬೈನ ಐಸಿಸಿ ಅಕಾಡೆಮಿ ಓವಲ್ 1 ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 259 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು. ಈ ಗೆಲುವಿನೊಂದಿಗೆ ಪಾಕಿಸ್ತಾನ ಸೆಮಿಫೈನಲ್​ಗೆ ಸುಲಭ ಅರ್ಹತೆ ಸಾಧಿಸಿದರೆ, ಭಾರತ ಮಾತ್ರ ತನ್ನ ಸೆಮೀಸ್ ಹಾದಿಯನ್ನು ಸಾಕಷ್ಟು ಕಠಿಣ ಮಾಡಿಕೊಂಡಿದೆ. ಟೀಂ ಇಂಡಿಯಾಕ್ಕೆ (Team India) ಸೆಮಿಫೈನಲ್ ಹಾದಿ ಇನ್ನೂ ತೆರೆದಿದೆ. ಆದರೆ ತಂಡ ಇದಕ್ಕಾಗಿ ಮುಂದಿನ ಪಂದ್ಯದಲ್ಲಿ ತಾನೂ ಗೆಲ್ಲುವುದಲ್ಲದೆ, ಪಾಕ್ ತಂಡದ ಗೆಲುವಿಗೂ ಪ್ರಾರ್ಥಿಸಬೇಕಿದೆ.

ಟೀಂ ಇಂಡಿಯಾ ಸೆಮಿಫೈನಲ್ ತಲುಪುವುದು ಹೇಗೆ?

ವಾಸ್ತವವಾಗಿ ಪಾಕಿಸ್ತಾನದ ವಿರುದ್ಧ ಹೀನಾಯ ಸೋಲು ಅನುಭವಿಸಿರುವ ಟೀಂ ಇಂಡಿಯಾ ತನ್ನ ನೆಟ್​ ರನ್​ರೇಟ್​ನಲ್ಲಿ ಭಾರಿ ಕುಸಿತ ಕಂಡಿದೆ. ಹೀಗಾಗಿ ಲೀಗ್ ಸುತ್ತಿನಲ್ಲಿ ತನ್ನ ಕೊನೆಯ ಪಂದ್ಯವನ್ನು ಡಿಸೆಂಬರ್ 12 ರಂದು ನೇಪಾಳ ವಿರುದ್ಧ ಆಡಲಿದೆ. ಈ ಪಂದ್ಯ ಭಾರತಕ್ಕೆ ನಾಕೌಟ್ ಪಂದ್ಯಕ್ಕಿಂತ ಕಡಿಮೆಯಿಲ್ಲ. ಸೆಮಿಫೈನಲ್‌ ರೇಸ್‌ನಲ್ಲಿ ಉಳಿಯಲು ಟೀಂ ಇಂಡಿಯಾ ಶತಾಯಗತಾಯ ಈ ಪಂದ್ಯವನ್ನು ಗೆಲ್ಲಲೇಬೇಕು. ಹಾಗೆಯೇ ತನ್ನ ಮುಂದಿನ ಪಂದ್ಯದಲ್ಲಿ ಅಂದರೆ ಡಿಸೆಂಬರ್ 12 ರಂದೇ ನಡೆಯುವ ಇನ್ನೊಂದು ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸುತ್ತಿರುವ ಪಾಕಿಸ್ತಾನ ತಂಡದ ಗೆಲುವಿಗೆ ಪ್ರಾರ್ಥಿಸಬೇಕು.

ವಾಸ್ತವವಾಗಿ, ಈ ಪಂದ್ಯದಲ್ಲಿ ಅಫ್ಘಾನಿಸ್ತಾನವು ಪಾಕಿಸ್ತಾನವನ್ನು ಸೋಲಿಸಿದರೆ, ಅದರ ಮತ್ತು ಭಾರತದ ಅಂಕಗಳು ಸಮಾನಾಗಿರುತ್ತಿವೆ. ಅಂದರೆ ಉಭಯ ತಂಡಗಳ ಬಳಿ ತಲಾ 4 ಅಂಕಗಳು ಇರಲಿವೆ. ಈ ವೇಳೆ ನೆಟ್​ ರನ್​ರೇಟ್ ಉತ್ತಮವಾಗಿರುವ ತಂಡವನ್ನು ಸೆಮಿಫೈನಲ್​ಗೆ ಆಯ್ಕೆ ಮಾಡಲಾಗುತ್ತದೆ. ಹೀಗಾಗಿ ಟೀಂ ಇಂಡಿಯಾ ನೇಪಾಳ ವಿರುದ್ಧ ಭಾರಿ ಅಂತರದ ಗೆಲುವು ಸಾಧಿಸುವುದಲ್ಲದೆ, ಅಫ್ಘಾನಿಸ್ತಾನದ ಸೋಲಿಗೆ ಪ್ರಾರ್ಥಿಸಬೇಕಿದೆ. ಒಂದು ವೇಳೆ ಅಫ್ಘಾನಿಸ್ತಾನ ತಂಡ ಪಾಕ್ ಎದುರು ಗೆದ್ದರೂ, ಆ ಗೆಲುವು ಭಾರಿ ಅಂತರದ್ದಾಗಿರಬಾರದು. ಹಾಗೆಯೇ ಲೀಗ್ ಸುತ್ತಿನ ಅಂತ್ಯದಲ್ಲಿ ಅಫ್ಘಾನಿಸ್ತಾನ ತಂಡದ ನೆಟ್​ ರನ್​ರೇಟ್ ಭಾರತಕ್ಕಿಂತ ಹೆಚ್ಚಿರಬಾರದು. ಹಾಗಿದ್ದರೆ ಮಾತ್ರ ಭಾರತ ಸೆಮಿಫೈನಲ್‌ ಸುತ್ತಿಗೆ ಲಗ್ಗೆ ಇಡಲಿದೆ.

IND vs PAK: ಇಂದು ಭಾರತ- ಪಾಕ್ ಕ್ರಿಕೆಟ್ ಫೈಟ್; ಗೆದ್ದವರಿಗೆ ಸೆಮೀಸ್ ಟಿಕೆಟ್! ಪಂದ್ಯದ ಪೂರ್ಣ ವಿವರ ಇಲ್ಲಿದೆ

ಪಾಕಿಸ್ತಾನಕ್ಕೆ ಏಕಪಕ್ಷೀಯ ಗೆಲುವು

ಇನ್ನು ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದ ಬಗ್ಗೆ ಮಾತನಾಡುವುದಾದರೆ.. ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾಕ್ಕೆ ಆರಂಭಿಕರು ಸಾಧಾರಣ ಆರಂಭ ನೀಡಿದರು. ತಂಡದ ಪರ ಆದರ್ಶ್ ಸಿಂಗ್ 62 ರನ್ ಮತ್ತು ಅರ್ಸಿನ್ ಕುಲಕರ್ಣಿ 24 ರನ್​ಗಳ ಕಾಣಿಕೆ ನೀಡಿದರು. ನಾಯಕ ಉದಯ್ ಸಹರನ್ 60 ರನ್ ಬಾರಿಸಿದರೆ, ಕೊನೆಯ ಸಚಿನ್ ದಾಸ್ ಸ್ಫೋಟಕ 58 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಆಟಗಾರರಿಂದಲೇ ಟೀಂ ಇಂಡಿಯಾ 259 ರನ್​ಗಳ ಗೌರವಾನ್ವಿತ ಸ್ಕೋರ್ ತಲುಪಲು ಸಾಧ್ಯವಾಯಿತು. ಆದರೆ ಈ ಗುರಿಯನ್ನು ಪಾಕಿಸ್ತಾನ ಕೇವಲ 2 ವಿಕೆಟ್ ನಷ್ಟದಲ್ಲಿ ಸಾಧಿಸಿತು. ಪಾಕಿಸ್ತಾನ ಪರ ಅಜನ್ ಅವಾಯಿಸ್ ಭರ್ಜರಿ ಶತಕ ಬಾರಿಸಿ ಭಾರತದ ಗೆಲುವನ್ನು ಕಸಿದುಕೊಂಡರು.

ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾಗೆ ಗೆಲುವು

ಈ ಟೂರ್ನಿಯಲ್ಲಿ ಭಾರತ ಅಂಡರ್-19 ತಂಡ ಗೆಲುವಿನೊಂದಿಗೆ ಅಭಿಯಾನ ಆರಂಭಿಸಿತ್ತು. ದುಬೈನ ಐಸಿಸಿ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಅಫ್ಘಾನಿಸ್ತಾನ ಅಂಡರ್-19 ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್‌ಗಳ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಇಡೀ ಅಫ್ಘಾನಿಸ್ತಾನ ತಂಡ 173 ರನ್‌ಗಳಿಗೆ ಆಲೌಟ್ ಆಗಿತ್ತು. 174 ರನ್‌ಗಳ ಗುರಿ ಬೆನ್ನತ್ತಿದ ಭಾರತ ತಂಡ 7 ವಿಕೆಟ್‌ಗಳ ಅಂತರದಲ್ಲಿ ಜಯ ಸಾಧಿಸಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 am, Mon, 11 December 23

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ