AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK Weather: ಭಾರತ- ಪಾಕ್ ಪಂದ್ಯ ರದ್ದು? ಮೆಲ್ಬೋರ್ನ್‌ನಲ್ಲಿ ಮಳೆ ಖಚಿತ ಎಂದ ಹವಾಮಾನ ಇಲಾಖೆ

T20 World Cup 2022: ಭಾನುವಾರ ಮೆಲ್ಬೋರ್ನ್‌ನಲ್ಲಿ ಶೇ. 80 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಆ ದಿನ ಮೆಲ್ಬೋರ್ನ್​ನಲ್ಲಿ ಒಂದು ಮಿಲಿಮೀಟರ್​ನಿಂದ 5 ಮಿ.ಮೀ ವರೆಗೆ ಮಳೆಯಾಗಬಹುದು ಎಂದು ವರದಿಯಾಗಿದೆ.

IND vs PAK Weather: ಭಾರತ- ಪಾಕ್ ಪಂದ್ಯ ರದ್ದು? ಮೆಲ್ಬೋರ್ನ್‌ನಲ್ಲಿ ಮಳೆ ಖಚಿತ ಎಂದ ಹವಾಮಾನ ಇಲಾಖೆ
IND vs PAK Weather
TV9 Web
| Edited By: |

Updated on: Oct 20, 2022 | 1:01 PM

Share

ಇದೇ ಭಾನುವಾರದಂದು ಟಿ20 ವಿಶ್ವಕಪ್​ನಲ್ಲಿ (T20 World Cup 2022) ಹೈವೋಲ್ಟೇಜ್ ಪಂದ್ಯ ನಡೆಯಲ್ಲಿದ್ದು, ಈ ಪಂದ್ಯದಲ್ಲಿ ಬದ್ಧವೈರಿಗಳಾದ ಭಾರತ ಮತ್ತು ಪಾಕಿಸ್ತಾನ (India and Pakistan) ತಂಡಗಳು ಮುಖಾಮುಖಿಯಾಗಲಿವೆ. ಭಾರತ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದರೆ, ಪಾಕ್ ಪಡೆ ಮಾತ್ರ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವ ಲೆಕ್ಕಾಚಾರದಲ್ಲಿದೆ. ಹೀಗಾಗಿ ಈ ಉಭಯ ತಂಡಗಳು ಮೊದಲ ಸೂಪರ್ 12 ಪಂದ್ಯವನ್ನು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ (Melbourne Cricket Ground) ಆಡಲು ಸಜ್ಜಾಗಿವೆ. ಆದರೆ, ಈ ಪಂದ್ಯಕ್ಕೆ ವರುಣನ ಅವಕೃಪೆ ಎದುರಾಗಿರುವುದು ಈ ತಂಡಗಳ ನಡುವಿನ ಕದನ ವೀಕ್ಷಿಸಲು ಕಾತುರವಾಗಿದ್ದ ಕ್ರಿಕೆಟ್ ಜಗತ್ತಿಗೆ ಬ್ರಹ್ಮನಿರಸನ ಉಂಟುಮಾಡಿದೆ.

ಭಾರತ-ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ

ಬ್ಯೂರೋ ಆಫ್ ಮೆಟ್ರೋಲಜಿ ಪ್ರಕಾರ ಅ. 23 ರಂದು ಮೆಲ್ಬೋರ್ನ್‌ನಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಹೀಗಾಗಿ ಪಂದ್ಯಕ್ಕಾಗಿ ಕಾದು ಕುಳಿತಿದ್ದ ಅಭಿಮಾನಿಗಳಿಗೆ ವರುಣ ರಾಯ ನಿರಾಸೆ ಮೂಡಿಸಿದ್ದಾನೆ. ಈ ಮೊದಲು 2019 ರ ವಿಶ್ವಕಪ್‌ನಲ್ಲೂ ಸಹ ಇದೇ ರೀತಿಯ ಘಟನೆ ನಡೆದಿತ್ತು. 2019 ರ ವಿಶ್ವಕಪ್​ನಲ್ಲಿ ಭಾರಯ ಹಾಗೂ ಪಾಕಿಸ್ತಾನ ತಂಡಗಳು ಮ್ಯಾಂಚೆಸ್ಟರ್‌ನಲ್ಲಿ ಮುಖಾಮುಖಿಯಾಗಲು ಸಿದ್ದವಾಗಿದ್ದವು. ಆದರೆ ನಿರೀಕ್ಷಿತ ಅತಿಥಿಯಾಗಿ ಬಂದಿದ್ದ ಮಳೆರಾಯ ಆಟಗಾರರನ್ನು ಮೈದಾನಕ್ಕಿಳಿಯದಂತೆ ಮಾಡಿದ್ದ.

ಇದನ್ನೂ ಓದಿ: T20 World Cup 2022: ಒಂದೇ ದಿನ 3 ತಂಡಗಳ 4 ಆಟಗಾರರು ಟಿ20 ವಿಶ್ವಕಪ್​ನಿಂದ ಔಟ್..!

ಮೆಲ್ಬೋರ್ನ್‌ನಲ್ಲಿ ಮಳೆಯಾಗುವ ಸಾಧ್ಯತೆಯಿದೆ

ಬ್ಯೂರೋ ಆಫ್ ಮೆಟ್ರೋಲಜಿ ವರದಿಗಳ ಪ್ರಕಾರ, ಭಾನುವಾರ ಮೆಲ್ಬೋರ್ನ್‌ನಲ್ಲಿ ಶೇ. 80 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಆ ದಿನ ಮೆಲ್ಬೋರ್ನ್​ನಲ್ಲಿ ಒಂದು ಮಿಲಿಮೀಟರ್​ನಿಂದ 5 ಮಿ.ಮೀ ವರೆಗೆ ಮಳೆಯಾಗಬಹುದು ಎಂದು ವರದಿಯಾಗಿದೆ. ವಿಶೇಷವಾಗಿ ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅಭಿಮಾನಿಗಳು ಆಗಸದತ್ತ ಮುಖಮಾಡುವ ಪರಿಸ್ಥಿತಿ ಎದುರಾಗಿದೆ. ಇದು ಸಾಲದೆಂಬಂತೆ ಈ ಪಂದ್ಯಕ್ಕೆ ಯಾವುದೇ ಮೀಸಲು ದಿನವನ್ನು ಐಸಿಸಿ ನಿಗದಿ ಪಡಿಸದೆ ಇರುವುದರಿಂದ ಆ ದಿನ ಮಳೆ ಬಾರದಿರಲಿ ಎಂಬುದು ಅಭಿಮಾನಿಗಳ ಕೊರಿಕೆಯಾಗಿದೆ.

ಅಭ್ಯಾಸ ಪಂದ್ಯಗಳೂ ರದ್ದಾಗಿವೆ

ಸದ್ಯ ಆಸ್ಟ್ರೇಲಿಯಾದ ಹಲವೆಡೆ ಮಳೆಯ ಎಫೆಕ್ಟ್ ಕಾಣಿಸಿಕೊಂಡಿದೆ. ಬುಧವಾರ ಬ್ರಿಸ್ಬೇನ್‌ನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಇಲ್ಲಿ ನಡೆಯಬೇಕಿದ್ದ ಎರಡೂ ಅಭ್ಯಾಸ ಪಂದ್ಯಗಳು ರದ್ದಾಗಿದ್ದವು. ಮೊದಲ ಅಭ್ಯಾಸ ಪಂದ್ಯ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವೆ ನಡೆಯಬೇಕಿತ್ತು. ಎರಡನೇ ಅಭ್ಯಾಸ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಬೇಕಿತ್ತು.

ಟಿ20 ವಿಶ್ವಕಪ್​ಗೆ ಉಭಯ ತಂಡಗಳು

ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಪಾಕಿಸ್ತಾನ ತಂಡ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಆಸಿಫ್ ಅಲಿ, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಶಾನ್ ಮಸೂದ್, ಮೊಹಮ್ಮದ್ ನವಾಜ್, ಶಾಹೀನ್ ಶಾ ಆಫ್ರಿದಿ, ಖುಷ್ದಿಲ್ ಶಾ, ಮೊಹಮ್ಮದ್ ವಾಸಿಂ, ನಸೀಮ್ ಶಾ, ಮೊಹಮ್ಮದ್ ಹಸ್ನೈನ್

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ