IND vs PAK: ಭಾರತ-ಪಾಕಿಸ್ತಾನ ಪಂದ್ಯ ನಡೆಯುವ ಕ್ರೀಡಾಂಗಣದ ಪಿಚ್ ಹೇಗಿದೆ?: ಯಾರಿಗೆ ಹೆಚ್ಚು ಸಹಕಾರಿ?

Asia Cup 2022: ನಾಳೆ (ಆ. 28) ಭಾರತ- ಪಾಕಿಸ್ತಾನ (India vs Pakistan) ನಡುವೆ ಹೈವೋಲ್ಟೇಜ್ ಪಂದ್ಯ ಆಯೋಜಿಸಲಾಗಿದೆ. ಈ ಬದ್ದವೈರಿಗಳ ಕಾದಾಟಕ್ಕೆ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಸಾಕ್ಷಿಯಾಗಿದೆ. ಈ ಪಿಚ್ ಹೇಗಿದೆ?, ಯಾರಿಗೆ ಹೆಚ್ಚು ಸಹಕರಿಸುತ್ತೆ? ಎಂಬುದನ್ನು ನೋಡೋಣ.

IND vs PAK: ಭಾರತ-ಪಾಕಿಸ್ತಾನ ಪಂದ್ಯ ನಡೆಯುವ ಕ್ರೀಡಾಂಗಣದ ಪಿಚ್ ಹೇಗಿದೆ?: ಯಾರಿಗೆ ಹೆಚ್ಚು ಸಹಕಾರಿ?
India vs PAK Asia Cup 2022
Follow us
TV9 Web
| Updated By: Vinay Bhat

Updated on:Aug 27, 2022 | 12:11 PM

ಏಷ್ಯಾಕಪ್​ ಟೂರ್ನಿಗೆ (Asia Cup 2022) ಇಂದು ಚಾಲನೆ ಸಿಗಲಿದ್ದು ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಸೆಣೆಸಾಟ ನಡೆಸಲಿದೆ. ನಾಳೆ (. 28) ಭಾರತ- ಪಾಕಿಸ್ತಾನ (India vs Pakistan) ನಡುವೆ ಹೈವೋಲ್ಟೇಜ್ ಪಂದ್ಯ ಆಯೋಜಿಸಲಾಗಿದೆ. ಇಡೀ ವಿಶ್ವವೇ ಈ ಕಾದಾಟ ವೀಕ್ಷಿಸಲು ತುದಿಗಾಲಿನಲ್ಲಿ ನಿಂತು ಕಾಯುತ್ತಿದೆ. ಅನೇಕ ಕಾರಣಗಳಿಂದ ಭಾರತ–ಪಾಕ್ ಕದನ ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಸ್ಟಾರ್ ಆಟಗಾರರಿಂದಲೇ ತುಂಬಿರುವ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಯಾವರೀತಿ ಇರಲಿದೆ ಎಂಬ ಕುತೂಹಲ ಕೂಡ ಇದೆ. ಈ ಬದ್ದವೈರಿಗಳ ಕಾದಾಟಕ್ಕೆ ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ (Dubai international stadium) ಸಾಕ್ಷಿಯಾಗಿದೆ. ಹಾಗಾದರೆ ಈ ಪಿಚ್ ಹೇಗಿದೆ?, ಯಾರಿಗೆ ಹೆಚ್ಚು ಸಹಕರಿಸುತ್ತೆ? ಎಂಬುದನ್ನು ನೋಡೋಣ.

ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಭಾರತ ಹಾಗೂ ಪಾಕ್ ಆಟಗಾರರು ಸಾಕಷ್ಟು ಪಂದ್ಯಗಳನ್ನು ಆಡಿದ್ದಾರೆ. ಪಾಕಿಸ್ತಾನಕ್ಕೆ ಇದು ಎರಡನೇ ತವರಿದ್ದಂತೆ. ಭಾರತದ ಆಟಗಾರರು ಇಲ್ಲಿ ಅನೇಕ ಐಪಿಎಲ್ ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ. ಇಲ್ಲಿನ ಪಿಚ್‌ ಸಮಯೋಜಿತವಾಗಿದೆ. ಹೊಸ ಚೆಂಡಿನಲ್ಲಿ ವೇಗಿಗಳು ಲಾಭ ಪಡೆದುಕೊಳ್ಳಬಹುದಾಗಿದೆ. ಆದರೆ, ಈ ಪಿಚ್‌ನಲ್ಲಿ ವಿಕೆಟ್‌ಗಳನ್ನು ಉಳಿಸಿಕೊಳ್ಳುವುದು ಬಹುಮುಖ್ಯ ಸಂಗತಿಯಾಗಿದೆ. ಪಂದ್ಯ ಸಾಗುತ್ತಿದ್ದಂತೆ ಬ್ಯಾಟಿಂಗ್ ಸ್ವಲ್ಪ ಸುಲಭವಾಗುತ್ತದೆ.

ಅಲ್ಲದೆ ಈ ಪಿಚ್​ನಲ್ಲಿ ನಿಧಾನಗತಿಯ ಬೌಲರ್‌ಗಳು ಹೆಚ್ಚಿನ ಯಶಸ್ಸು ಸಾಧಿಸಿದ ಇತಿಹಾಸವಿದೆ. ಭಾರತ ಪರ ಹರ್ಷಲ್ ಪಟೇಲ್ ಇದ್ದಿದ್ದರೆ ಪ್ಲಸ್ ಪಾಯಿಂಟ್ ಆಗಿರಬಹುದಿತ್ತು. ಆದರೆ, ಅವರು ಇಂಜುರಿಯಿಂದಾಗಿ ಏಷ್ಯಾಕಪ್​ಗೆ ಆಯ್ಕೆಯಾಗಲಿಲ್ಲ. ಅಂತೆಯೆ ಸ್ಪಿನ್ನರ್‌ಗಳ ದಾಳಿಯ ಮುಂದೆ ಬ್ಯಾಟರ್‌ಗಳು ಪರದಾಡುವುದು ಖಚಿತ. ಭಾರತ ಈ ಪಿಚ್​ನಲ್ಲಿ ನಮೀಬಿಯ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಸ್ಕಾಟ್ಲೆಂಡ್ ತಂಡದ ವಿರುದ್ಧ ಆಡಿದೆ. ಇದರಲ್ಲಿ ನಮೀಬಿಯ ಮತ್ತು ಸ್ಕಾಟ್ಲೆಂಡ್ ವಿರುದ್ಧ ಮಾತ್ರ ಜಯ ಸಾಧಿಸಿದೆ.

ಇದನ್ನೂ ಓದಿ
Image
Virat Kohli: ಪಾಕ್ ವಿರುದ್ದ ಕಿಂಗ್ ಕೊಹ್ಲಿ ಕಣಕ್ಕಿಳಿದರೆ ಅದುವೇ ಹೊಸ ದಾಖಲೆ..!
Image
Virat Kohli: ಪ್ರ್ಯಾಕ್ಟೀಸ್ ಸೆಷನ್​ನಲ್ಲಿ ಮನಬಂದಂತೆ ಬ್ಯಾಟ್ ಬೀಸುತ್ತಿರುವ ಕೊಹ್ಲಿ: ಆಟಗಾರರಿಗೆ ಶಾಕ್ ಮೇಲೆ ಶಾಕ್
Image
AFG vs SL, Playing IX: ಉದ್ಘಾಟನಾ ಪಂದ್ಯಕ್ಕೆ ಶ್ರೀಲಂಕಾ vs ಅಫ್ಘಾನಿಸ್ತಾನ ತಂಡಗಳ ಪ್ಲೇಯಿಂಗ್ XI ಹೇಗಿರಬಹುದು?
Image
IND vs PAK: ಲೀಕ್ ಆಯ್ತು ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI: ಯಾರಿಗೆಲ್ಲ ಸ್ಥಾನ ನೋಡಿ

ಇನ್ನು ಭಾರತ ಹಾಗೂ ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿಲ್ಲ. ಹೀಗಾಗಿ ಪಂದ್ಯ ನಿರಾತಂಕವಾಗಿ ಸಾಗಲಿದೆ. ದಿನವಿಡೀ ಶುಭ್ರ ವಾತಾವರಣದಿಂದ ಕೂಡಿರಲಿದ್ದು ತಾಪಮಾನ 28-30 ಡಿಗ್ರಿ ಸೆಲ್ಸಿಯಸ್‌ನಷ್ಟು ಇರಲಿದೆ. ಇನ್ನು ಪಂದ್ಯದ ಆರಂಭದ ಬಳಿಕ ಗಾಳಿಯ ವೇಗದ ಪ್ರಮಾಣ ಕೂಡ ಕಡಿಮೆಯಾಗಲಿದೆ.

ಟಾಸ್ ಕೂಡ ಈ ಪಂದ್ಯದಲ್ಲಿ ಬಹುಮುಖ್ಯ ಪಾತ್ರವಹಿಸಲಿದ್ದು, ಟಾಸ್ ಗೆದ್ದ ತಂಡ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಯಾಕೆಂದರೆ ಇಲ್ಲಿ ಚೇಸಿಂಗ್ ಮಾಡಿದ ತಂಡ ಹೆಚ್ಚು ಗೆದ್ದ ಇತಿಹಾಸವಿದೆ. ಮೊದಲ ಇನ್ನಿಂಗ್ಸ್ ಸರಾಸರಿ 142 ರನ್ ಆದರೆ, ಎರಡನೇ ಇನ್ನಿಂಗ್ಸ್ ಸರಾಸರಿ 124 ಆಗಿದೆ. 211 ರನ್ ಗಳಿಸಿರುವುದು ಈ ಗ್ರೌಂಡ್​ನ ಗರಿಷ್ಠ ಸ್ಕೋರ್ ಆಗಿದೆ.

ಏಷ್ಯಾಕಪ್ ಟೂರ್ನಿಯ ಎಲ್ಲ ಪಂದ್ಯಗಳು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7:30ಕ್ಕೆ ಶುರುವಾಗಲಿದೆ. ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ (ಇಂಗ್ಲಿಷ್), ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ ಮತ್ತು ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ ಎಚ್‌ಡಿ (ಹಿಂದಿ) ಚಾನೆಲ್‌ಗಳಲ್ಲಿ ಲಭ್ಯವಿರಲಿದೆ. ಇದರ ಜೊತೆಗೆ ದೂರದರ್ಶನದಲ್ಲೂ ನೇರಪ್ರಸಾರ ಕಾಣಲಿದೆ. ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್​ ಸ್ಟ್ರೀಮ್ ವೀಕ್ಷಿಸಬಹುದು.

Published On - 12:11 pm, Sat, 27 August 22

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು