Rishabh Pant: ಟೀಮ್ ಇಂಡಿಯಾದಿಂದ ರಿಷಭ್ ಪಂತ್​ರನ್ನು ಕೈ ಬಿಡಲು ಇದುವೇ ಕಾರಣ..!

Rishabh Pant: ಪಂತ್ ಸ್ಥಾನದಲ್ಲಿ ಟೀಮ್ ಇಂಡಿಯಾ ವೇಗಿ ಅವೇಶ್ ಖಾನ್​ರನ್ನು ಆಯ್ಕೆ ಮಾಡಿದೆ. ಈ ಮೂಲಕ 7 ಬ್ಯಾಟ್ಸ್​ಮನ್ ಹಾಗೂ 4 ಪರಿಪೂರ್ಣ ಬೌಲರ್​ಗಳನ್ನು ಕಣಕ್ಕಿಳಿಸಿದೆ.

Rishabh Pant: ಟೀಮ್ ಇಂಡಿಯಾದಿಂದ ರಿಷಭ್ ಪಂತ್​ರನ್ನು ಕೈ ಬಿಡಲು ಇದುವೇ ಕಾರಣ..!
Rishabh Pant
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 28, 2022 | 7:24 PM

India vs Pakistan: ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಬಳಿಕ ಮಾತನಾಡಿದ ರೋಹಿತ್ ಶರ್ಮಾ ಪ್ಲೇಯಿಂಗ್ ಇಲೆವೆನ್​ನಲ್ಲಿ ರಿಷಭ್ ಪಂತ್ ಅವರಿಗೆ ಸ್ಥಾನ ನೀಡಲಾಗಿಲ್ಲ ಎಂದು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಪಂತ್ ಆಡುವ ಬಳಗದಿಂದ ಹೊರಬೀಳಲು ಕಾರಣವೇನು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಸಿಗುತ್ತಿರುವ ಉತ್ತರ ತಂಡದಲ್ಲಿನ ಸಮತೋಲನ. ಇಬ್ಬರು ವಿಕೆಟ್ ಕೀಪರ್​ಗಳನ್ನು ಪ್ಲೇಯಿಂಗ್ ಇಲೆವೆನ್​ಗೆ ಆಯ್ಕೆ ಮಾಡಿದರೆ ಓರ್ವ ಬೌಲರ್ ಹೊರಗುಳಿಯಬೇಕಾಗುತ್ತದೆ. ಹೀಗಾಗಿ ರಿಷಭ್ ಪಂತ್ ಅವರನ್ನು ಕೈ ಬಿಟ್ಟು ದಿನೇಶ್ ಕಾರ್ತಿಕ್​​ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ.

ಇನ್ನು ಪಂತ್ ಸ್ಥಾನದಲ್ಲಿ ಟೀಮ್ ಇಂಡಿಯಾ ವೇಗಿ ಅವೇಶ್ ಖಾನ್​ರಿಗೆ ಸ್ಥಾನ ನೀಡಲಾಗಿದೆ. ಈ ಮೂಲಕ 7 ಬ್ಯಾಟ್ಸ್​ಮನ್ ಹಾಗೂ 4 ಪರಿಪೂರ್ಣ ಬೌಲರ್​ಗಳನ್ನು ಕಣಕ್ಕಿಳಿಸಿದೆ. ಇದರಿಂದ ಟೀಮ್ ಇಂಡಿಯಾ 6 ಬೌಲರ್​ಗಳನ್ನು ಬಳಸಿಕೊಳ್ಳಬಹುದು. ಅಂದರೆ ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್ ವೇಗಿಗಳಾಗಿ ತಂಡದಲ್ಲಿದ್ದರೆ, ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಾಲ್ ಸ್ಥಾನ ಪಡೆದಿದ್ದಾರೆ. ಇನ್ನು ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಅವಕಾಶ ಪಡೆದಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಪಡೆ ಹೆಚ್ಚುವರಿ ಓರ್ವ ಬೌಲರ್​ನ ಆಯ್ಕೆಯೊಂದಿಗೆ ಕಣಕ್ಕಿಳಿದಿದೆ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್,ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಹಾಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್

ಪಾಕಿಸ್ತಾನ್ ಪ್ಲೇಯಿಂಗ್ ಇಲೆವೆನ್: ಬಾಬರ್ ಆಜಮ್, ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾನವಾಜ್ ದಹಾನಿ

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ