Rishabh Pant: ಟೀಮ್ ಇಂಡಿಯಾದಿಂದ ರಿಷಭ್ ಪಂತ್​ರನ್ನು ಕೈ ಬಿಡಲು ಇದುವೇ ಕಾರಣ..!

| Updated By: ಝಾಹಿರ್ ಯೂಸುಫ್

Updated on: Aug 28, 2022 | 7:24 PM

Rishabh Pant: ಪಂತ್ ಸ್ಥಾನದಲ್ಲಿ ಟೀಮ್ ಇಂಡಿಯಾ ವೇಗಿ ಅವೇಶ್ ಖಾನ್​ರನ್ನು ಆಯ್ಕೆ ಮಾಡಿದೆ. ಈ ಮೂಲಕ 7 ಬ್ಯಾಟ್ಸ್​ಮನ್ ಹಾಗೂ 4 ಪರಿಪೂರ್ಣ ಬೌಲರ್​ಗಳನ್ನು ಕಣಕ್ಕಿಳಿಸಿದೆ.

Rishabh Pant: ಟೀಮ್ ಇಂಡಿಯಾದಿಂದ ರಿಷಭ್ ಪಂತ್​ರನ್ನು ಕೈ ಬಿಡಲು ಇದುವೇ ಕಾರಣ..!
Rishabh Pant
Follow us on

India vs Pakistan: ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಬಳಿಕ ಮಾತನಾಡಿದ ರೋಹಿತ್ ಶರ್ಮಾ ಪ್ಲೇಯಿಂಗ್ ಇಲೆವೆನ್​ನಲ್ಲಿ ರಿಷಭ್ ಪಂತ್ ಅವರಿಗೆ ಸ್ಥಾನ ನೀಡಲಾಗಿಲ್ಲ ಎಂದು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಪಂತ್ ಆಡುವ ಬಳಗದಿಂದ ಹೊರಬೀಳಲು ಕಾರಣವೇನು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಸಿಗುತ್ತಿರುವ ಉತ್ತರ ತಂಡದಲ್ಲಿನ ಸಮತೋಲನ. ಇಬ್ಬರು ವಿಕೆಟ್ ಕೀಪರ್​ಗಳನ್ನು ಪ್ಲೇಯಿಂಗ್ ಇಲೆವೆನ್​ಗೆ ಆಯ್ಕೆ ಮಾಡಿದರೆ ಓರ್ವ ಬೌಲರ್ ಹೊರಗುಳಿಯಬೇಕಾಗುತ್ತದೆ. ಹೀಗಾಗಿ ರಿಷಭ್ ಪಂತ್ ಅವರನ್ನು ಕೈ ಬಿಟ್ಟು ದಿನೇಶ್ ಕಾರ್ತಿಕ್​​ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ.

ಇನ್ನು ಪಂತ್ ಸ್ಥಾನದಲ್ಲಿ ಟೀಮ್ ಇಂಡಿಯಾ ವೇಗಿ ಅವೇಶ್ ಖಾನ್​ರಿಗೆ ಸ್ಥಾನ ನೀಡಲಾಗಿದೆ. ಈ ಮೂಲಕ 7 ಬ್ಯಾಟ್ಸ್​ಮನ್ ಹಾಗೂ 4 ಪರಿಪೂರ್ಣ ಬೌಲರ್​ಗಳನ್ನು ಕಣಕ್ಕಿಳಿಸಿದೆ. ಇದರಿಂದ ಟೀಮ್ ಇಂಡಿಯಾ 6 ಬೌಲರ್​ಗಳನ್ನು ಬಳಸಿಕೊಳ್ಳಬಹುದು.
ಅಂದರೆ ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್ ವೇಗಿಗಳಾಗಿ ತಂಡದಲ್ಲಿದ್ದರೆ, ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಾಲ್ ಸ್ಥಾನ ಪಡೆದಿದ್ದಾರೆ. ಇನ್ನು ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಅವಕಾಶ ಪಡೆದಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಪಡೆ ಹೆಚ್ಚುವರಿ ಓರ್ವ ಬೌಲರ್​ನ ಆಯ್ಕೆಯೊಂದಿಗೆ ಕಣಕ್ಕಿಳಿದಿದೆ.

ಇದನ್ನೂ ಓದಿ
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್,ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಹಾಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್

ಪಾಕಿಸ್ತಾನ್ ಪ್ಲೇಯಿಂಗ್ ಇಲೆವೆನ್: ಬಾಬರ್ ಆಜಮ್, ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾನವಾಜ್ ದಹಾನಿ