Sign In

By signing in or creating an account, you agree with Associated Broadcasting Company's Terms & Conditions and Privacy Policy.

INDW vs PAKW: ನಾಳೆ ಭಾರತ vs ಪಾಕಿಸ್ತಾನ್ ಮುಖಾಮುಖಿ

India vs Pakistan: ಮಹಿಳಾ ಏಷ್ಯಾಕಪ್ 2024ರ 2ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. 2022ರ ಏಷ್ಯಾಕಪ್​​ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ತಂಡದ ಜಯ ಸಾಧಿಸಿತ್ತು. ಬಾಂಗ್ಲಾದೇಶ್​​ನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಪಾಕ್ ತಂಡ 137 ರನ್​ ಗಳಿಸಿದರೆ, ಭಾರತ ತಂಡವು 124 ರನ್​ಗಳಿಗೆ ಆಲೌಟ್ ಆಗಿ 13 ರನ್​ಗಳಿಂದ ಸೋಲೊಪ್ಪಿಕೊಂಡಿತ್ತು.

INDW vs PAKW: ನಾಳೆ ಭಾರತ vs ಪಾಕಿಸ್ತಾನ್ ಮುಖಾಮುಖಿ
IND vs PAK
Follow us
ಝಾಹಿರ್ ಯೂಸುಫ್
|

Updated on:Jul 18, 2024 | 12:55 PM

ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಗೆ ನಾಳೆ (ಜುಲೈ.19) ಚಾಲನೆ ದೊರೆಯಲಿದೆ. ಶ್ರೀಲಂಕಾದಲ್ಲಿ ನಡೆಯಲಿರುವ ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಯುಎಇ ಮತ್ತು ನೇಪಾಳ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಇದೇ ದಿನ ನಡೆಯಲಿರುವ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ.

ಟಿ20 ಕ್ರಿಕೆಟ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮಹಿಳಾ ತಂಡಗಳು ಈವರೆಗೆ 11 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡವು 10 ಬಾರಿ ಜಯ ಸಾಧಿಸಿದರೆ, ಪಾಕಿಸ್ತಾನ್ 3 ಬಾರಿ ಗೆಲುವು ದಾಖಲಿಸಿದೆ. ಈ ಅಂಕಿ ಅಂಶಗಳ ಪ್ರಕಾರ, ಪಾಕ್ ವಿರುದ್ಧ ಭಾರತ ಮೇಲುಗೈ ಹೊಂದಿರುವುದು ಸ್ಪಷ್ಟ. ಹೀಗಾಗಿ ಏಷ್ಯಾಕಪ್​ನಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ.

ಈ ಪಂದ್ಯದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ:

ಎಷ್ಟು ಗಂಟೆಗೆ ಪಂದ್ಯ ಶುರು?

ಭಾರತ ಮತ್ತು ಪಾಕಿಸ್ತಾನ್ ಮಹಿಳಾ ತಂಡಗಳ ನಡುವಣ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಶುರುವಾಗಲಿದೆ.

ಪಂದ್ಯ ನಡೆಯುವುದು ಎಲ್ಲಿ?

ಇಂಡೊ ಮತ್ತು ಪಾಕ್ ನಡುವಣ ಪಂದ್ಯಕ್ಕೆ ಶ್ರೀಲಂಕಾದ ದಂಬುಲ್ಲಾದ ರಂಗಿರಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಪಂದ್ಯದ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್​ ನೆಟ್​ವರ್ಕ್​ನ ಚಾನೆಲ್​ಗಳಲ್ಲಿ ಇರಲಿದೆ. ಹಾಗೆಯೇ ಡಿಸ್ನಿ ಹಾಟ್ ಸ್ಟಾರ್ ಆ್ಯಪ್​ ಮೂಲಕ ಕೂಡ ಈ ಪಂದ್ಯವನ್ನು ಲೈವ್ ವೀಕ್ಷಿಸಬಹುದು.

ಉಭಯ ತಂಡಗಳು ಹೀಗಿವೆ:

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ರೇಣುಕಾ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.

ಪಾಕಿಸ್ತಾನ್ ತಂಡ: ನಿದಾ ದಾರ್ (ನಾಯಕಿ), ಇರಾಮ್ ಜಾವೇದ್, ಸಾದಿಯಾ ಇಕ್ಬಾಲ್, ಅಲಿಯಾ ರಿಯಾಜ್, ಡಯಾನಾ ಬೇಗ್, ಫಾತಿಮಾ ಸನಾ, ಗುಲ್ ಫಿರೋಜಾ, ಮುನೀಬಾ ಅಲಿ, ಸಿದ್ರಾ ಅಮೀನ್, ನಜಿಹಾ ಅಲ್ವಿ, ಸೈಯದಾ ಅರೂಬ್ ಶಾ, ನಶ್ರಾ ಸುಂಧು, ತಸ್ಮಿಯಾ ರುಬಾಬ್, ಒಮೈಮಾ ಸೊಹೈಲ್, ತುಬಾ ಹಸನ್ .

ಏಷ್ಯಾ ಕಪ್ ಗುಂಪುಗಳು:

ಗುಂಪು 1: ಭಾರತ, ನೇಪಾಳ, ಪಾಕಿಸ್ತಾನ್ ಮತ್ತು ಯುಎಇ.

ಗುಂಪು 2: ಶ್ರೀಲಂಕಾ, ಬಾಂಗ್ಲಾದೇಶ್, ಮಲೇಷ್ಯಾ ಮತ್ತು ಥೈಲ್ಯಾಂಡ್.

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

ಭಾರತದ ಪಂದ್ಯಗಳ ವೇಳಾಪಟ್ಟಿ:

  • ಜುಲೈ 19: ಭಾರತ vs ಪಾಕಿಸ್ತಾನ (7 PM IST)
  • ಜುಲೈ 21: ಭಾರತ vs ಯುಎಇ (2 PM IST)
  • ಜುಲೈ 23: ಭಾರತ vs ನೇಪಾಳ (7 PM IST)

ಮಹಿಳಾ ಏಷ್ಯಾ ಕಪ್ ಪಂದ್ಯಗಳ ಸಂಪೂರ್ಣ ಪಟ್ಟಿ ಇಲ್ಲಿದೆ:

ದಿನಾಂಕ ಮುಖಾಮುಖಿ ಸಮಯ (IST)
ಜುಲೈ 19 ನೇಪಾಳ vs ಯುಎಇ; ಭಾರತ vs ಪಾಕಿಸ್ತಾನ್ 2PM, 7PM
ಜುಲೈ 20 ಮಲೇಷ್ಯಾ vs ಥೈಲ್ಯಾಂಡ್; ಶ್ರೀಲಂಕಾ vs ಬಾಂಗ್ಲಾದೇಶ್ 2PM, 7PM
ಜುಲೈ 21 ಭಾರತ vs ಯುಎಇ; ಪಾಕಿಸ್ತಾನ್ vs ನೇಪಾಳ 2PM, 7PM
ಜುಲೈ 22 ಶ್ರೀಲಂಕಾ vs ಮಲೇಷ್ಯಾ; ಬಾಂಗ್ಲಾದೇಶ್ vs ಥೈಲ್ಯಾಂಡ್ 2PM, 7PM
ಜುಲೈ 23 ಪಾಕಿಸ್ತಾನ್ vs ಯುಎಇ; ಭಾರತ vs ನೇಪಾಳ 2PM, 7PM
ಜುಲೈ 24 ಬಾಂಗ್ಲಾದೇಶ್ vs ಮಲೇಷ್ಯಾ; ಶ್ರೀಲಂಕಾ vs ಥೈಲ್ಯಾಂಡ್ 2PM, 7PM
ಜುಲೈ 26 ಸೆಮಿಫೈನಲ್1 ; ಸೆಮಿಫೈನಲ್2 2PM, 7PM
ಜುಲೈ 28 ಫೈನಲ್​ 7PM

Published On - 12:53 pm, Thu, 18 July 24