AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ನಲ್ಲಿ ಭಾರತ- ಪಾಕ್ ಮುಖಾಮುಖಿ ಯಾವಾಗ? ಎಷ್ಟು ಗಂಟೆಗೆ ಆರಂಭ?

ದುಬೈನಲ್ಲಿ ನಡೆಯುತ್ತಿರುವ ಮಹಿಳಾ T20 ಏಷ್ಯಾಕಪ್‌ನಲ್ಲಿ ಭಾರತ ಮಹಿಳಾ ತಂಡ ಸೆಮಿಫೈನಲ್ ತಲುಪಿದೆ. ಇದೀಗ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನದೊಂದಿಗೆ ಹೈವೋಲ್ಟೇಜ್ ಪಂದ್ಯಕ್ಕೆ ಸಜ್ಜಾಗಿದೆ. ಈ ಲೀಗ್ ಪಂದ್ಯ ಸೆಪ್ಟೆಂಬರ್ 5 ರಂದು ದುಬೈನಲ್ಲಿ ರಾತ್ರಿ 8 ಗಂಟೆಗೆ ನಡೆಯಲಿದ್ದು, ಸೋನಿ ಸ್ಪೋರ್ಟ್ಸ್ ಮತ್ತು ಸೋನಿಲಿವ್‌ನಲ್ಲಿ ನೇರ ಪ್ರಸಾರ ಲಭ್ಯವಿದೆ. ಉಭಯ ತಂಡಗಳ ವಿವರ ಇಲ್ಲಿದೆ.

ಏಷ್ಯಾಕಪ್​ನಲ್ಲಿ ಭಾರತ- ಪಾಕ್ ಮುಖಾಮುಖಿ ಯಾವಾಗ? ಎಷ್ಟು ಗಂಟೆಗೆ ಆರಂಭ?
ಭಾರತ Vs ಪಾಕಿಸ್ತಾನ
ಪೃಥ್ವಿಶಂಕರ
|

Updated on: Sep 04, 2026 | 10:07 PM

Share

ದುಬೈನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ಏಷ್ಯಾಕಪ್​ನಲ್ಲಿ ಭಾರತ ಮಹಿಳಾ ತಂಡ ಸತತ ಎರಡು ಪಂದ್ಯಗಳನ್ನು ಗೆದ್ದು ಪಾಯಿಂಟ್​ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಮೂಲಕ ಸೆಮಿಫೈನಲ್‌ ಸುತ್ತಿಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ತನ್ನ ಮೊದಲ ಪಂದ್ಯದಲ್ಲಿ ಥೈಲ್ಯಾಂಡ್ ತಂಡವನ್ನು ಮಣಿಸಿದ್ದ ಹರ್ಮನ್ ಪಡೆ, ಎರಡನೇ ಪಂದ್ಯದಲ್ಲಿ ಹಾಂಗ್ ಕಾಂಗ್ ಚೀನಾ ತಂಡವನ್ನು ಹೀನಾಯವಾಗಿ ಸೋಲಿಸಿತ್ತು. ಇದೀಗ ಲೀಗ್ ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸುತ್ತಿದೆ. ಇದು ಏಷ್ಯಾಕಪ್​ನ ಹೈವೋಲ್ಟೇಜ್ ಕದನವಾಗಿದ್ದು, ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಹಾಗಿದ್ದರೆ ಈ ಪಂದ್ಯ ಯಾವಾಗ ಎಲ್ಲಿ ನಡೆಯಲಿದೆ? ಉಚಿತವಾಗಿ ವೀಕ್ಷಿಸುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳ ನಡುವಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳ ನಡುವಿನ ಪಂದ್ಯ ಸೆಪ್ಟೆಂಬರ್ 5 ರ ಶನಿವಾರ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳ ನಡುವಿನ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳ ನಡುವಿನ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳ ನಡುವಿನ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8:00 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳ ನಡುವಿನ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ನೋಡಬಹುದು?

ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳ ನಡುವಿನ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು. ಹಾಗೆಯೇ ಸೋನಿಲಿವ್ ಅಪ್ಲಿಕೇಶನ್ ಬಳಸಿ ನಿಮ್ಮ ಮೊಬೈಲ್​ನಲ್ಲಿ ಪಂದ್ಯದ ನೇರಪ್ರಸಾರ ವೀಕ್ಷಿಸಬಹುದು.

ಏಷ್ಯಾಕಪ್ ಸೆಮಿಫೈನಲ್​ಗೆ ಭಾರತ ಮಹಿಳಾ ತಂಡ ಎಂಟ್ರಿ

ಉಭಯ ತಂಡಗಳು

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್, ಜಿ ಕಮಲಿನಿ, ಅರುಂಧತಿ ರೆಡ್ಡಿ, ಪ್ರೇಮಾ ರಾವತ್, ರಾಧಾ ಯಾದವ್, ಶ್ರೀ ಚರಣಿ, ರೇಣುಕಾ ಠಾಕೂರ್, ನಂದನಿ ಶರ್ಮಾ, ಕ್ರಾಂತಿ ಗೌಡ್, ಪ್ರತೀಕಾ ರಾವಲ್.

ಪಾಕಿಸ್ತಾನ ತಂಡ: ಫಾತಿಮಾ ಸನಾ (ನಾಯಕಿ), ಆಯೆಶಾ ಜಾಫರ್, ಇಮಾನ್ ನಾಸೀರ್, ಐಮಾನ್ ಫಾತಿಮಾ, ಗುಲ್ ಫಿರೋಜಾ, ಮೊಮಿನಾ ರಿಯಾಸತ್, ಮುನೀಬಾ ಅಲಿ, ನಶ್ರಾ ಸಂಧು, ಸದಾಫ್ ಶಮಾಸ್, ಸಾದಿಯಾ ಇಕ್ಬಾಲ್, ಸೈರಾ ಜಬೀನ್, ಶಾವಲ್ ಜುಲ್ಫಿಕರ್, ತುಬಾ ಹಸನ್, ಉಮ್-ಎ-ಹಖಾನಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More