ಟೀಮ್ ಇಂಡಿಯಾ ವಿರುದ್ಧ ಸ್ಪೋಟಕ ಸೆಂಚುರಿ ಸಿಡಿಸಿದ 19ರ ಹರೆಯದ ಬ್ಯಾಟರ್
India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಪಿಂಕ್ ಬಾಲ್ ಟೆಸ್ಟ್ ಎಂಬುದು ವಿಶೇಷ. ಅಂದರೆ ಹೊನಲು ಬೆಳಕಿನಲ್ಲಿ ಆಡಲಾಗುವ ಈ ಪಂದ್ಯದಲ್ಲಿ ಪಿಂಕ್ ಬಾಲ್ ಅನ್ನು ಬಳಸಲಾಗುತ್ತದೆ.
ಕ್ಯಾನ್ಬೆರಾದಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ 19ರ ಹರೆಯದ ಯುವ ಬ್ಯಾಟರ್ ಸ್ಯಾಮ್ ಕೊನ್‌ಸ್ಟಾಸ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಮನುಕಾ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಪ್ರೈ ಇನಿಂಗ್ಸ್ ಆರಂಭಿಸಿದ ಸ್ಯಾಮ್ ಕೊನ್‌ಸ್ಟಾಸ್ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ಗೆ ಸ್ಪೋಟಕ ಆರಂಭ ಒದಗಿಸಿದ್ದರು. ಟೀಮ್ ಇಂಡಿಯಾ ಬೌಲರ್ಗಳನ್ನು ನಿರಾಯಾಸವಾಗಿ ಎದುರಿಸಿದ ಸ್ಯಾಮ್ ಮೈದಾನದ ಮೂಲೆ ಮೂಲೆಗೆ ಫೋರ್ಗಳನ್ನು ಬಾರಿಸುವ ಮೂಲಕ ಗಮನ ಸೆಳೆದರು. ಅಲ್ಲದೆ ಕೇವಲ 90 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಮಿಂಚಿದರು.
ಅಂತಿಮವಾಗಿ 97 ಎಸೆತಗಳನ್ನು ಎದುರಿಸಿದ ಸ್ಯಾಮ್ ಕೊನ್‌ಸ್ಟಾಸ್ 14 ಫೋರ್ ಹಾಗೂ 1 ಸಿಕ್ಸ್ನೊಂದಿಗೆ 107 ರನ್ ಬಾರಿಸಿ ಆಕಾದ್ ದೀಪ್ಗೆ ವಿಕೆಟ್ ಒಪ್ಪಿಸಿದರು. ಸ್ಯಾಮ್ ಸಿಡಿಸಿದ ಈ ಸ್ಪೋಟಕ ಸೆಂಚುರಿ ನೆರವಿನಿಂದ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ತಂಡವು ಮೊದಲ ಇನಿಂಗ್ಸ್ನಲ್ಲಿ 240 ರನ್ಗಳಿಸಿ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ 6 ಓವರ್ಗಳಲ್ಲಿ 44 ರನ್ ನೀಡಿ ಹರ್ಷಿತ್ ರಾಣಾ 4 ವಿಕೆಟ್ ಪಡೆದರೆ, ಆಕಾಶ್ ದೀಪ್ 1 ವಿಕೆಟ್ ಪಡೆದರು.
ಪ್ರೈಮ್ ಮಿನಿಸ್ಟರ್ಸ್ ಇಲೆವೆನ್: ಜ್ಯಾಕ್ ಎಡ್ವರ್ಡ್ಸ್ (ನಾಯಕ) , ಮ್ಯಾಟ್ ರೆನ್‌ಶಾ , ಜ್ಯಾಕ್ ಕ್ಲೇಟನ್ , ಆಲಿವರ್ ಡೇವಿಸ್ , ಜೇಡನ್ ಗುಡ್‌ವಿನ್ , ಸ್ಯಾಮ್ ಹಾರ್ಪರ್ (ವಿಕೆಟ್ ಕೀಪರ್) , ಚಾರ್ಲಿ ಅ್ಯಂಡರ್ಸನ್ , ಸ್ಯಾಮ್ ಕೊನ್‌ಸ್ಟಾಸ್ , ಸ್ಕಾಟ್ ಬೋಲ್ಯಾಂಡ್ , ಲಾಯ್ಡ್ ಪೋಪ್ , ಹ್ಯಾನೋ ಜೇಕಬ್ಸ್ , ಮಹ್ಲಿ ಬಿಯರ್ಡ್‌ಮನ್ , ಏಡನ್ ಓನ್ ಕಾನರ್ , ಜೆಮ್ ರಯಾನ್, ಜಾಕ್ ನಿಸ್ಬೆಟ್.
ಇದನ್ನೂ ಓದಿ: IPL 2025: RCB ತಂಡಕ್ಕೆ 4 ತವರು ಮೈದಾನ..!