IND vs SA 1st ODI: ಭಾರತ-ಸೌತ್ ಆಫ್ರಿಕಾ ಮೊದಲ ಏಕದಿನ ಪಂದ್ಯ: ಇಲ್ಲಿದೆ ಪಿಚ್ ರಿಪೋರ್ಟ್​

IND vs SA 1st ODI: ಈ ಮೈದಾನದಲ್ಲಿ ಇದುವರೆಗೆ ಒಟ್ಟು 51 ಏಕದಿನ ಪಂದ್ಯಗಳು ನಡೆದಿವೆ. ಈ ಪೈಕಿ ಮೊದಲು ಬ್ಯಾಟ್ ಮಾಡಿದ ತಂಡ ಗೆದ್ದಿರುವುದು ಕೇವಲ 21 ಪಂದ್ಯಗಳಲ್ಲಿ ಮಾತ್ರ. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ ತಂಡ 28 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

IND vs SA 1st ODI: ಭಾರತ-ಸೌತ್ ಆಫ್ರಿಕಾ ಮೊದಲ ಏಕದಿನ ಪಂದ್ಯ: ಇಲ್ಲಿದೆ ಪಿಚ್ ರಿಪೋರ್ಟ್​
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 17, 2023 | 12:48 PM

ಭಾರತ ಮತ್ತು ಸೌತ್ ಆಫ್ರಿಕಾ (India vs South Africa) ನಡುವಿನ ಟಿ20 ಸರಣಿ ನಂತರ, ಇದೀಗ ಮೂರು ಪಂದ್ಯಗಳ ಏಕದಿನ ಸರಣಿಗೆ ವೇದಿಕೆ ಸಿದ್ಧವಾಗಿದೆ. ಮಳೆಯಿಂದಾಗಿ ಉಭಯ ತಂಡಗಳ ನಡುವಿನ ಟಿ20 ಸರಣಿ 1-1 ಅಂತರದಿಂದ ಡ್ರಾನಲ್ಲಿ ಅಂತ್ಯ ಕಂಡಿತ್ತು. ಇದೀಗ ಎರಡೂ ತಂಡಗಳು ಏಕದಿನದಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿವೆ. ವಿಶೇಷ ಎಂದರೆ ಏಕದಿನ ವಿಶ್ವಕಪ್​ ಬಳಿಕ ಇದು ಟೀಮ್ ಇಂಡಿಯಾಗೆ ಮೊದಲ ಸರಣಿಯಾಗಿದೆ.

ಈ ಸರಣಿಯ ಮೊದಲ ಪಂದ್ಯವು ಡಿಸೆಂಬರ್ 17 ರಂದು, ಭಾನುವಾರ ಜೋಹಾನ್ಸ್‌ಬರ್ಗ್‌ನ ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಲ್ಲಿನ ಪಿಚ್​​ಗೆ ಯಾರಿಗೆ ಸಹಕಾರಿ? ಟಾಸ್ ಗೆದ್ದ ತಂಡದ ನಾಯಕನ ನಿರ್ಧಾರ ಹೇಗಿರಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ವಾಂಡರರ್ಸ್ ಪಿಚ್ ರಿಪೋರ್ಟ್​:

ವಾಂಡರರ್ಸ್ ಪಿಚ್ ಬ್ಯಾಟಿಂಗ್‌ಗೆ ಸಹಕಾರಿ. ಅದರಲ್ಲೂ ಎರಡನೇ ಇನ್ನಿಂಗ್ಸ್‌ನಲ್ಲಿ ಚೆಂಡು ಸುಲಭವಾಗಿ ಬ್ಯಾಟ್‌ಗೆ ಬರುತ್ತದೆ. ಇದೇ ಕಾರಣಕ್ಕೆ ಗುರಿ ಬೆನ್ನಟ್ಟಿದ ತಂಡ ಈ ಮೈದಾನದಲ್ಲಿ ಹೆಚ್ಚು ಯಶಸ್ಸು ಕಂಡಿದೆ.

ಈ ಮೈದಾನದಲ್ಲಿ ಇದುವರೆಗೆ ಒಟ್ಟು 51 ಏಕದಿನ ಪಂದ್ಯಗಳು ನಡೆದಿವೆ. ಈ ಪೈಕಿ ಮೊದಲು ಬ್ಯಾಟ್ ಮಾಡಿದ ತಂಡ ಗೆದ್ದಿರುವುದು ಕೇವಲ 21 ಪಂದ್ಯಗಳಲ್ಲಿ ಮಾತ್ರ. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ ತಂಡ 28 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಅಂದರೆ ಇಲ್ಲಿ ಟಾಸ್ ಗೆಲ್ಲುವ ತಂಡದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚು. ಇದಾಗ್ಯೂ ಹವಾಮಾನ ಮತ್ತು ಪರಿಸ್ಥಿತಿಯನ್ನು ಅವಲಂಭಿಸಿ ಕೆಲ ತಂಡಗಳ ನಾಯಕರುಗಳು ಮೊದಲು ಬ್ಯಾಟ್ ಮಾಡಿದ ಉದಾಹರಣೆಗಳಿವೆ. ಹೀಗಾಗಿ ಇಂದಿನ ಪರಿಸ್ಥಿತಿಗೆ ತಕ್ಕಂತೆ ನಾಯಕನ ನಿರ್ಧಾರ ಬದಲಾಗಬಹುದು. ಇನ್ನು ಈ ಪಿಚ್‌ನ ಅಂಕಿಅಂಶಗಳ ಬಗ್ಗೆ ಹೇಳುವುದಾದರೆ, ಇಲ್ಲಿನ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 240 ರನ್​ಗಳು. ಹೀಗಾಗಿ ಇಂದಿನ ಪಂದ್ಯದಲ್ಲೂ ರನ್​ ಸುರಿಮಳೆಯನ್ನು ನಿರೀಕ್ಷಿಸಬಹುದು.

ಸೌತ್ ಆಫ್ರಿಕಾ ತಂಡ: ರೀಝ ಹೆಂಡ್ರಿಕ್ಸ್, ಟೋನಿ ಡಿ ಜೊರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್ , ನಾಂದ್ರೆ ಬರ್ಗರ್, ತಬ್ರೇಝ್ ಶಮ್ಸಿ, ಲಿಝಾಡ್ ವಿಲಿಯಮ್ಸ್, ವಿಯಾನ್ ಮುಲ್ಡರ್, ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮಿಹ್ಲಾಲಿ ಎಂಪೊಂಗ್ವಾನಾ, ಕೈಲ್ ವೆರ್ರೆನ್ನೆ.

ಇದನ್ನೂ ಓದಿ: Rohit Sharma: ರೋಹಿತ್ ಶರ್ಮಾಗೆ ಬಿಗ್ ಆಫರ್ ನೀಡಿದ್ದ ಡೆಲ್ಲಿ ಕ್ಯಾಪಿಟಲ್ಸ್​

ಭಾರತ ತಂಡ: ರಜತ್ ಪಾಟಿದಾರ್, ಸಾಯಿ ಸುದರ್ಶನ್, ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ರಿಂಕು ಸಿಂಗ್, ಅಕ್ಷರ್ ಪಟೇಲ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಮುಕೇಶ್ ಕುಮಾರ್, ಯುಜ್ವೇಂದ್ರ ಚಹಲ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಆಕಾಶ್ ದೀಪ್.

Published On - 9:10 am, Sun, 17 December 23