ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಡಿಸೆಂಬರ್ 26 ರಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯ ಡಿಸೆಂಬರ್ 26 ರಂದು ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ (Super Sport Park, Centurion) ನಡೆಯಲಿದೆ. ಕ್ರಿಸ್‌ಮಸ್ ನಂತರದ ಮರುದಿನ ಈ ಪಂದ್ಯ ಆರಂಭವಾಗುವುದರಿಂದ ಈ ಪಂದ್ಯವನ್ನು ಬಾಕ್ಸಿಂಗ್-ಡೇ ಟೆಸ್ಟ್ (Boxing Day Test) ಪಂದ್ಯ ಎಂದು ಕರೆಯಲಾಗುತ್ತದೆ. ಭಾರತ ಇಲ್ಲಿಯವರೆಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿಲ್ಲದಿರುವುದರಿಂದ ಈ ಸರಣಿ ಟೀಂ ಇಂಡಿಯಾಕ್ಕೆ ಬಹಳ ಮುಖ್ಯವಾಗಿದೆ. ಅಲ್ಲದೆ ಟಿ20 ಹಾಗೂ ಏಕದಿನ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ತಂಡದ ಪ್ರಮುಖ ಆಟಗಾರರು ಈ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಈ ಟೆಸ್ಟ್ ಸರಣಿಯನ್ನು ಗೆದ್ದ ಇತಿಹಾಸ ಸೃಷ್ಟಿಸುವ ಅವಕಾಶ ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗಿದೆ.
ಸೆಂಚುರಿಯನ್‌ನಲ್ಲಿರುವ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ಟೀಂ ಇಂಡಿಯಾ ಇದುವರೆಗೆ 3 ಟೆಸ್ಟ್ ಪಂದ್ಯಗಳನ್ನು ಆಡಿದೆ. ಅದರಲ್ಲಿ 1ರಲ್ಲಿ ಗೆದ್ದು 2ರಲ್ಲಿ ಸೋತಿದೆ. 2010-11ರ ಪ್ರವಾಸದಲ್ಲಿ ಭಾರತ ಮೊದಲ ಬಾರಿಗೆ ಇಲ್ಲಿ ಟೆಸ್ಟ್ ಪಂದ್ಯವನ್ನು ಆಡಿತ್ತು. ಆ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 25 ರನ್‌ಗಳ ಸೋಲು ಅನುಭವಿಸಿತ್ತು. ಇದಾದ ಬಳಿಕ 2017-18ರ ಪ್ರವಾಸದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 135 ರನ್‌ಗಳಿಂದ ಸೋಲು ಅನುಭವಿಸಬೇಕಾಯಿತು. ಆದರೆ 2021-22ರ ಪ್ರವಾಸದ ವೇಳೆ ಭಾರತ ಈ ಮೈದಾನದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಆಫ್ರಿಕಾವನ್ನು 113 ರನ್‌ಗಳಿಂದ ಸೋಲಿಸಿತ್ತು.
IND vs SA: ಬಾಕ್ಸಿಂಡ್ ಡೇ ಟೆಸ್ಟ್‌ನಲ್ಲಿ ಭಾರತದ ದಾಖಲೆ ಹೇಗಿದೆ ಗೊತ್ತಾ? ಆಡಿರುವ ಪಂದ್ಯಗಳೆಷ್ಟು?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ ಆರಂಭವಾಗಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಿ ರಾತ್ರಿ 9:30 ಕ್ಕೆ ದಿನದಾಟ ಮುಗಿಯಲ್ಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರವಾಗಿ ವೀಕ್ಷಿಸಬಹುದು.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ನೀವು Disney Plus Hotstar ನ ವೆಬ್‌ಸೈಟ್ ಅಥವಾ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದಾಗಿದೆ.
ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಭಿಮನ್ಯು ಈಶ್ವರನ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್-ಬುಮ್ರಾ, ಪ್ರಸಿದ್ಧ್ ಕೃಷ್ಣ ಮತ್ತು ಕೆ ಎಸ್ ಭರತ್ (ವಿಕೆಟ್ ಕೀಪರ್).
ದಕ್ಷಿಣ ಆಫ್ರಿಕಾ: ತೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್‌ಹ್ಯಾಮ್, ನಾಂದ್ರೆ ಬರ್ಗರ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರೆನ್ನೆ, ಜೆರಾಲ್ಡ್ ಕೊಯೆಟ್ಜಿ, ಟೋನಿ ಡಿ ಜಾರ್ಜಿ, ಡೀನ್ ಎಲ್ಗರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ಪೀಟರ್ಸನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ