
ಭಾರತ ಮತ್ತು ದಕ್ಷಿಣ ಆಫ್ರಿಕಾ (India South Africa) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಡಿಸೆಂಬರ್ 3 ರಂದು ರಾಯ್‌ಪುರದ (Raipur) ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ರಾಂಚಿ ಪಂದ್ಯವನ್ನು ಗೆದ್ದ ನಂತರ 1-0 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಲು ಪ್ರಯತ್ನಿಸುತ್ತಿದೆ. ಸುಮಾರು ಮೂರು ವರ್ಷಗಳ ನಂತರ ರಾಯ್‌ಪುರ ಏಕದಿನ ಪಂದ್ಯವನ್ನು ಆಯೋಜಿಸುತ್ತಿದೆ, ಆದ್ದರಿಂದ ವಿಶೇಷ ಸಿದ್ಧತೆಗಳನ್ನು ಮಾಡಲಾಗಿದೆ. ಆದರೂ ರಾಯ್‌ಪುರ ಪಿಚ್ನಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ? ಪಂದ್ಯದ ದಿನ ರಾಯ್‌ಪುರದ ಹವಾಮಾನ ಹೇಗಿರಲಿದೆ ಎಂಬುದರ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಮಳೆಯ ಆತಂಕವಿಲ್ಲ ಎಂಬುದು ಸ್ಪಷ್ಟವಾಗಿದೆ. ರಾಯ್‌ಪುರದಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹೀಗಾಗಿ ಮಳೆ ಬೀಳುವ ಸಾಧ್ಯತೆ ಬಹಳ ಕಡಿಮೆ, ಅಂದರೆ ಪಂದ್ಯಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ. ಒಂದು ವೇಳೆ ಮಳೆಯಾದರೂ, ಪಂದ್ಯ ಶೀಘ್ರದಲ್ಲೇ ಪುನರಾರಂಭವಾಗುವ ಸಾಧ್ಯತೆ ಹೆಚ್ಚು. ಆದಾಗ್ಯೂ, ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ಸಂಜೆ ಹೆಚ್ಚಿನ ಇಬ್ಬನಿ ಬೀಳಬಹುದು, ಇದು ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಅನುಕೂಲಕರವಾಗಿರುತ್ತದೆ.
ಪಿಚ್ ವಿಷಯಕ್ಕೆ ಬರುವುದಾದರೆ.. ಈ ಮೈದಾನದ ಪಿಚ್ ವೇಗದ ಬೌಲರ್‌ಗಳಿಗೆ ಹೆಚ್ಚಿನ ನೆರವು ನೀಡುತ್ತದೆ. ಆದ್ದರಿಂದ ಬ್ಯಾಟ್ಸ್‌ಮನ್‌ಗಳು ಇಲ್ಲಿ ರನ್ ಗಳಿಸಲು ಸಾಕಷ್ಟು ಬೆವರು ಹರಿಸಬೇಕಾಗುತ್ತದೆ. ವೇಗದ ಬೌಲರ್‌ಗಳಿಗೆ ಇಲ್ಲಿ ನೆರವು ಸಿಗುವ ಸಾಧ್ಯತೆಯಿರುವುದರಿಂದ ಬಲಿಷ್ಠ ಬೌಲಿಂಗ್ ದಾಳಿಯನ್ನು ಹೊಂದಿರುವ ದಕ್ಷಿಣ ಆಫ್ರಿಕಾದ ಎದುರು ಭಾರತದ ಬ್ಯಾಟರ್‌ಗಳು ಜಾಗರೂಕರಾಗಿ ಬ್ಯಾಟ್ ಬೀಸಬೇಕು.
IND vs SA: ಸರಣಿ ನಿರ್ಧಾರಕ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಸಾಧ್ಯತೆ
ಈ ಮೈದಾನದಲ್ಲಿ ಇಲ್ಲಿಯವರೆಗೆ ಒಂದೇ ಒಂದು ಏಕದಿನ ಪಂದ್ಯ ನಡೆದಿದೆ. ಈ ಪಂದ್ಯವು ಜನವರಿ 21, 2023 ರಂದು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದಿದ್ದು , ಇದರಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು. ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 108 ರನ್‌ಗಳಿಗೆ ಆಲೌಟ್ ಆಯಿತು. ಭಾರತ 21 ನೇ ಓವರ್‌ನಲ್ಲಿ 8 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು . ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಅರ್ಧಶತಕ ಗಳಿಸಿದರೆ , ವಿರಾಟ್ ಕೊಹ್ಲಿ ಕೇವಲ 11 ರನ್ ಗಳಿಸಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ