IND vs SA: ಭಾರತ-ಸೌತ್ ಆಫ್ರಿಕಾ ಪಂದ್ಯಕ್ಕೆ ಮಳೆ ಭೀತಿ: ಮ್ಯಾಚ್ ನಡೆಯಲಿದೆಯಾ?

IND vs SA 2nd T20I: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಉಭಯ ತಂಡಗಳ ಬ್ಯಾಟ್ಸ್​ಮನ್​ಗಳು ಅಬ್ಬರಿಸಿದ್ದರು. ಮೊದಲು ಬ್ಯಾಟ್ ಮಾಡಿದ ಭಾರತ ತಂಡ 211 ರನ್​ಗಳ ಸ್ಕೋರ್​ಗಳಿಸಿದರೂ ದಕ್ಷಿಣ ಆಫ್ರಿಕಾ ತಂಡ ಭರ್ಜರಿಯಾಗಿ ಚೇಸ್​ ಮಾಡಿ 7 ವಿಕೆಟ್‌ಗಳಿಂದ ಜಯ ಸಾಧಿಸಿತು.

IND vs SA: ಭಾರತ-ಸೌತ್ ಆಫ್ರಿಕಾ ಪಂದ್ಯಕ್ಕೆ ಮಳೆ ಭೀತಿ: ಮ್ಯಾಚ್ ನಡೆಯಲಿದೆಯಾ?
IND vs SA 2nd T20
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jun 12, 2022 | 1:27 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ಪಂದ್ಯಗಳ ಸರಣಿಯ ಎರಡನೇ ಟಿ20 ಪಂದ್ಯ (IND vs SA 2nd T20) ಭಾನುವಾರ (ಜೂನ್ 12) ಕಟಕ್‌ನ ಬಾರ್ಬತಿ ಕ್ರೀಡಾಂಗಣದಲ್ಲಿ ನಡೆಯಲಿದೆ. ರಿಷಬ್ ಪಂತ್ ನಾಯಕತ್ವದ ತಂಡ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಸಮಬಲಗೊಳಿಸುವ ಇರಾದೆಯಲ್ಲಿದೆ. ಮತ್ತೊಂದೆಡೆ, ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಮುನ್ನಡೆ ಸಾಧಿಸುವತ್ತ ಕಣ್ಣಿಟ್ಟಿದೆ. ಹೀಗಾಗಿ ಈ ಪಂದ್ಯದಲ್ಲೂ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಉಭಯ ತಂಡಗಳ ಬ್ಯಾಟ್ಸ್​ಮನ್​ಗಳು ಅಬ್ಬರಿಸಿದ್ದರು. ಮೊದಲು ಬ್ಯಾಟ್ ಮಾಡಿದ ಭಾರತ ತಂಡ 211 ರನ್​ಗಳ ಸ್ಕೋರ್​ಗಳಿಸಿದರೂ ದಕ್ಷಿಣ ಆಫ್ರಿಕಾ ತಂಡ ಭರ್ಜರಿಯಾಗಿ ಚೇಸ್​ ಮಾಡಿ 7 ವಿಕೆಟ್‌ಗಳಿಂದ ಜಯ ಸಾಧಿಸಿತು. ಡೇವಿಡ್ ಮಿಲ್ಲರ್ ಮತ್ತು ರಾಸಿ ವ್ಯಾನ್ ಡೆರ್ ಡಸ್ಸೆನ್ ಗೆಲುವಿನ ರುವಾರಿ ಎನಿಸಿಕೊಂಡಿದ್ದರು. ಇದೀಗ ಮೊದಲ ಪಂದ್ಯದ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ ಟೀಮ್ ಇಂಡಿಯಾ. ಆದರೆ ಈ ಪಂದ್ಯಕ್ಕೆ ವರುಣ ಅಡ್ಡಿಪಡಿಸುವ ಸಾಧ್ಯತೆಯಿದೆ.

ಹವಾಮಾನ ಹೇಗಿದೆ? ಕಟಕ್ ಕಡಲತೀರದ ಪಟ್ಟಣ. ಭಾನುವಾರವೂ ಮೋಡ ಕವಿದ ವಾತಾವರಣ ಇರಲಿದೆ. ದಿನದ ತಾಪಮಾನವು 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಸಂಜೆ 7 ಗಂಟೆಯ ವೇಳೆತಾಪಮಾನ 30 ಡಿಗ್ರಿಗೆ ಇಳಿಯಬಹುದು. ಇನ್ನು ಸಂಜೆ 4 ಗಂಟೆಗೆ ಶೇ. 22ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ದಿನದ ಯಾವುದೇ ಸಮಯದಲ್ಲಿ ಗುಡುಗು ಸಹಿತ ಶೇಕಡಾ 10 ರಷ್ಟು ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ವರದಿ ಹೇಳಿದೆ. ಒಂದು ವೇಳೆ ಸಂಜೆಯ ಬಳಿಕ ಮಳೆಯಾದರೆ ಪಂದ್ಯ ಆರಂಭ ವಿಳಂಬವಾಗಬಹುದು. ಇದಾಗ್ಯೂ ಮ್ಯಾಚ್​ ನಡೆಯುವುದು ಖಚಿತ ಎಂದೇ ಹೇಳಬಹುದು.

ಪಿಚ್ ವರದಿ: ಕಟಕ್​ನ ಬಾರ್ಬತಿ ಕ್ರೀಡಾಂಗಣದ​ ಪಿಚ್ ಬೌಲರ್ ಸ್ನೇಹಿಯಾಗಿದ್ದು, ಹೀಗಾಗಿ ದೆಹಲಿ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಂತೆಯೇ ಹೆಚ್ಚಿನ ಸ್ಕೋರಿಂಗ್ ನಿರೀಕ್ಷಿಸುವಂತಿಲ್ಲ. ಹಾಗೆಯೇ ಪಂದ್ಯ ಮುಂದುವರೆದಂತೆ ಪಿಚ್ ಕೂಡ ನಿಧಾನವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಸ್ಪಿನ್ನರ್ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಇಲ್ಲಿ ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಳ್ಳಲು ಬಯಸುತ್ತದೆ.

ಇದನ್ನೂ ಓದಿ
Image
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Image
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಅಂಕಿ ಅಂಶ: ಬಾರ್ಬತಿ ಕ್ರೀಡಾಂಗಣದಲ್ಲಿ ಭಾರತ 2 ಟಿ20 ಪಂದ್ಯಗಳನ್ನು ಆಡಲಾಗಿದೆ. ವಿಶೇಷ ಎಂದರೆ ಇಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧವೇ ಟೀಮ್ ಇಂಡಿಯಾ ಸೋತಿದೆ. ಸೌತ್ ಆಫ್ರಿಕಾ ತಂಡ 2015 ರಲ್ಲಿ ಭಾರತವನ್ನು 6 ವಿಕೆಟ್‌ಗಳಿಂದ ಸೋಲಿಸಿದ್ದರೆ, 2017ರಲ್ಲಿ ಆತಿಥೇಯ ಭಾರತ 93 ರನ್‌ಗಳಿಂದ ಶ್ರೀಲಂಕಾವನ್ನು ಸೋಲಿಸಿತ್ತು. ಇದೀಗ ಮತ್ತೊಮ್ಮೆ ಇದೇ ಪಿಚ್​ನಲ್ಲಿ ಸೌತ್ ಆಫ್ರಿಕಾ-ಭಾರತ ಮುಖಾಮುಖಿಯಾಗುತ್ತಿರುವುದು ವಿಶೇಷ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:27 pm, Sun, 12 June 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ