IND vs SA, 2nd T20I: ಎರಡನೇ ಟಿ20 ನಡೆಯಲಿರುವ ಬರ್ಸಾಪರಾ ಪಿಚ್ ಹೇಗಿದೆ?, ಯಾರಿಗೆ ಹೆಚ್ಚು ಸಹಕಾರಿ?

ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವೆ ಎರಡನೇ ಟಿ20 ಪಂದ್ಯ ನಡೆಯಲಿರುವ ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನ ಪಿಚ್ ಹೇಗಿದೆ?, ಇಲ್ಲಿ ಯಾರು ಯಶಸ್ಸು ಸಾಧಿಸುತ್ತಾರೆ ಎಂಬುದನ್ನು ನೋಡೋಣ.

IND vs SA, 2nd T20I: ಎರಡನೇ ಟಿ20 ನಡೆಯಲಿರುವ ಬರ್ಸಾಪರಾ ಪಿಚ್ ಹೇಗಿದೆ?, ಯಾರಿಗೆ ಹೆಚ್ಚು ಸಹಕಾರಿ?
IND vs SA 2nd T20I
Follow us
TV9 Web
| Updated By: Vinay Bhat

Updated on:Oct 02, 2022 | 10:20 AM

ಇಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವೆ ಎರಡನೇ ಟಿ20 ಪಂದ್ಯ ಏರ್ಪಡಿಸಲಾಗಿದೆ. ಮೊದಲ ಟಿ20 ಕದನದಲ್ಲಿ 8 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿ ವಿಶ್ವಾಸದಲ್ಲಿರುವ ಟೀಮ್ ಇಂಡಿಯಾ (Team India) ಇಂದಿನ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಇತ್ತ ಮೊದಲ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದ್ದ ಹರಿಣಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಈ ಮೈದಾನದಲ್ಲಿ ಭಾರತ ಎರಡು ಪಂದ್ಯಗಳಲ್ಲಷ್ಟೆ ಕಣಕ್ಕಿಳಿದಿತ್ತು. ಅವುಗಳಲ್ಲಿ ಒಂದು ಮಳೆಯಿಂದಾಗಿ ರದ್ದಾಗಿದ್ದರೆ, ಇನ್ನೊಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ಎಂಟು ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿದೆ. ಹೀಗಾಗಿ ಈ ಮೈದಾನ ಉಭಯ ತಂಡಗಳಿಗೆ ಹೊಸದು ಎನ್ನಬಹುದು. ಹಾಗಾದರೆ ಗುವಾಹಟಿಯ ಬರ್ಸಾಪರಾ (Barsapara) ಕ್ರಿಕೆಟ್ ಸ್ಟೇಡಿಯಂನ ಪಿಚ್ ಹೇಗಿದೆ?, ಇಲ್ಲಿ ಯಾರು ಯಶಸ್ಸು ಸಾಧಿಸುತ್ತಾರೆ ಎಂಬುದನ್ನು ನೋಡೋಣ.

ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿನ ಪಿಚ್ ಸಾಮಾನ್ಯವಾಗಿ ನಿಧಾನವಾಗಿರುತ್ತದೆ. ಚೆಂಡು ವೇಗವಾಗಿ ಬ್ಯಾಟ್‌ಗೆ ಬರುವುದಿಲ್ಲ. ಹೀಗಾಗಿ ಇಲ್ಲಿ ವೇಗಿಗಳು ಹೆಚ್ಚು ಯಶಸ್ಸು ಸಾಧಿಸುತ್ತಾರೆ, ಅಲ್ಲದೆ ಸ್ಪಿನ್ನರ್‌ಗಳಿಗೂ ಸಹಕಾರಿ ಆಗಿದ್ದು ಪಂದ್ಯ ಸಾಗಿದಂತೆ ಪಿಚ್​ನಲ್ಲಿ ತಿರುವು ಮತ್ತು ಹಿಡಿತವನ್ನು ಸಾಧಿಸಬಹುದು. ಈ ಪಿಚ್​ನಲ್ಲಿ ದೊಡ್ಡ ಸ್ಕೋರ್ ಮಾಡಲು ಸುಲಭವಿಲ್ಲ. ಇಲ್ಲಿ ಭಾರತ ಏಕೈಕ ಇನ್ನಿಂಗ್ಸ್‌ ಆಡಿದ್ದು, 122 ರನ್‌ಗಳಿಗೆ ಆಲೌಟ್ ಆಗಿತ್ತು. ಹೀಗಾಗಿ ಇಂದು ಟಾಸ್​ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಲ್ಳುವ ಸಾಧ್ಯತೆ ಇದೆ.

ತುಂತುರು ಮಳೆ ಸಾಧ್ಯತೆ:

ಇದನ್ನೂ ಓದಿ
Image
IND-L vs SL-L Final: ನಮನ್ ಓಜಾ ಸ್ಫೋಟಕ ಶತಕ: ಫೈನಲ್​ನಲ್ಲಿ ಶ್ರೀಲಂಕಾ ವಿರುದ್ಧ ಗೆದ್ದು ಚಾಂಪಿಯನ್ ಆದ ಭಾರತ ಲೆಜೆಂಡ್ಸ್
Image
IND vs SA 2nd T20I: ಇಂದು ಭಾರತ- ದಕ್ಷಿಣ ಆಫ್ರಿಕಾ ದ್ವಿತೀಯ ಟಿ20 ಪಂದ್ಯ: ರೋಹಿತ್ ಪಡೆ ಗೆದ್ದರೆ ಸರಣಿ ಕೈವಶ
Image
IND vs SA: 2ನೇ ಟಿ20 ಪಂದ್ಯಕ್ಕೆ ಮಳೆ ಕಾಟ..! ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದ ಮಂಡಳಿ
Image
Rahul Dravid: ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಬಗ್ಗೆ ಕೊನೆಗೂ ಮೌನ ಮುರಿದ ಕೋಚ್ ದ್ರಾವಿಡ್; ಹೇಳಿದ್ದೇನು?

ಗುವಾಹಟಿಯಲ್ಲಿ ಭಾನುವಾರ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಉಲ್ಲೇಖಿಸಿದೆ. ಅಷ್ಟೇ ಅಲ್ಲದೆ, ಸಂಜೆ ವೇಳೆಗೆ ಬಿರುಗಾಳಿ ಸಹಿತ ಕೆಲವೆಡೆ ಮಳೆಯಾಗುವ ಆತಂಕವೂ ಇದೆ. ಅದೇ ಸಮಯದಲ್ಲಿ, ಹವಾಮಾನ ಮಾಹಿತಿ ವೆಬ್‌ಸೈಟ್ ಅಕ್ಯುವೆದರ್ ಮುನ್ಸೂಚನೆಯಂತೆ ಸಂಜೆ 5 ಗಂಟೆಯ ಸುಮಾರಿಗೆ ಮಳೆಯಾಗಬಹುದು, ಉಳಿದ ಸಮಯದಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ ಎಂದು ವರದಿಯಾಗಿದೆ. ಇತ್ತ ಮಳೆಯಿಂದ ಸಮಯ ವ್ಯರ್ಥವಾಗುವುದನ್ನು ಕಡಿಮೆ ಮಾಡಲು ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದೇವೆ ಎಂದು ಸಂಘಟಕರು ತಿಳಿಸಿದ್ದಾರೆ. ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ ​​US ನಿಂದ ಎರಡು ಹಗುರವಾದ ಪಿಚ್ ಕವರ್‌ಗಳನ್ನು ಖರೀದಿಸಿದೆ. ಯೂನಿಯನ್ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಯಾರಿ ಬಗ್ಗೆ ಮಾತನಾಡಿದ್ದು, “ಈ ಎರಡು ಆಮದು ಮಾಡಿದ ಕವರ್‌ಗಳು ಪಿಚ್‌ಗೆ ನೀರು ಅಥವಾ ತೇವಾಂಶವನ್ನು ಪ್ರವೇಶಿಸದಂತೆ ನೋಡಿಕೊಳ್ಳುತ್ತದೆ ಎಂದಿದ್ದಾರೆ.

ಟೀಮ್ ಇಂಡಿಯಾ ಎರಡೂ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ಒಬ್ಬ ಬ್ಯಾಟರ್ ಜವಾಬ್ದಾರಿ ವಹಿಸಿ ಪಂದ್ಯವನ್ನು ಗೆಲ್ಲಿಸಿಕೊಡುತ್ತಿರುವುದು ತಂಡದ ಪ್ಲಸ್ ಪಾಯಿಂಟ್. ಆದರೆ, ನಾಯಕ ರೋಹಿತ್ ಶರ್ಮಾ ಬ್ಯಾಟ್​ನಿಂದ ಇನ್ನಷ್ಟು ಉತ್ತಮ ಇನ್ನಿಂಗ್ಸ್​ ನಿರೀಕ್ಷಿಸಲಾಗಿದೆ. ಉಪ ನಾಯಕ ಕೆಎಲ್ ರಾಹುಲ್ ಕೂಡ ನಿಧಾನಗತಿಯ ಆಟಕ್ಕೆ ಬ್ರೇಕ್ ಹಾಕಿ ವೇಗದ ಆಟದ ಮೊರೆ ಹೋಗಬೇಕಿದೆ. ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್​ ಸಿಕ್ಕ ಅವಕಾಶವನ್ನು ಬಳಸಬೇಕಿದೆ.

ಭಾರತದ ಬೌಲಿಂಗ್ ಆಫ್ರಿಕಾ ಸರಣಿಯಲ್ಲಿ ಮಾರಕವಾಗಿದೆ. ತಿರುವನಂತಪುರದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಆರ್ಷದೀಪ್ ಸಿಂಗ್ ಒಂದೇ ಓವರ್‌ನಲ್ಲಿ ಮೂರು ವಿಕೆಟ್ ಗಳಿಸಿ ದಕ್ಷಿಣ ಆಫ್ರಿಕಾ ಬಳಗಕ್ಕೆ ಬಲವಾದ ಪೆಟ್ಟುಕೊಟ್ಟಿದ್ದರು. ಇವರ ಜೊತೆಗೆ ಹರ್ಷಲ್ ಪಟೇಲ್, ದೀಪಕ್ ಚಹರ್ ಅವರ ಮೇಲೂ ಕಣ್ಣಿದೆ. ಈ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಕಣಕ್ಕಿಳಿಯುವುದು ಬಹುತೇಕ ಖಚಿತ. ಉಮೇಶ್ ಯಾದವ್ ಅವರಿಗೆ ಅವಕಾಶ ಸಿಗುವುದು ಅನುಮಾನ. ಸಿರಾಜ್ ಉತ್ತಮ ಪ್ರದರ್ಶನ ನೀಡಿದರೆ ಟಿ20 ವಿಶ್ವಕಪ್​ಗೂ ಆಯ್ಕೆ ಆಗಬಹುದು.

ಭಾರತ-ಆಫ್ರಿಕಾ ಕದನ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಟಾಸ್ 6.30ಕ್ಕೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು. ಚಂದಾದಾರಿಕೆಯೊಂದಿಗೆ Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೋಡಬಹುದು. ಇದಲ್ಲದೆ, ಪಂದ್ಯದ ಲೈವ್ ನವೀಕರಣಗಳನ್ನು tv9kannada.com ನಲ್ಲಿಯೂ ಓದಬಹುದು.

Published On - 10:20 am, Sun, 2 October 22

ಯೋಗೇಶ್ವರ್ ಮಾತಿಗೆ ವಿಪರೀತ ಅರ್ಥ ಕಲ್ಪಿಸುವುದು ಬೇಡ: ಪರಮೇಶ್ವರ್
ಯೋಗೇಶ್ವರ್ ಮಾತಿಗೆ ವಿಪರೀತ ಅರ್ಥ ಕಲ್ಪಿಸುವುದು ಬೇಡ: ಪರಮೇಶ್ವರ್
ಬಿಜೆಪಿಗೆ ಹಣದ ಕೊರತೆಯಿಲ್ಲ, ಹಣ ಚೆಲ್ಲಿ ಶಾಸಕರನ್ನು ಖರೀದಿಸುತ್ತಾರೆ: ಗಾಣಿಗ
ಬಿಜೆಪಿಗೆ ಹಣದ ಕೊರತೆಯಿಲ್ಲ, ಹಣ ಚೆಲ್ಲಿ ಶಾಸಕರನ್ನು ಖರೀದಿಸುತ್ತಾರೆ: ಗಾಣಿಗ
ಬ್ರೆಜಿಲ್​ನಲ್ಲಿ ಮಂತ್ರ-ಘೋಷಗಳೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ
ಬ್ರೆಜಿಲ್​ನಲ್ಲಿ ಮಂತ್ರ-ಘೋಷಗಳೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ
ಡಬಲ್ ವೈಲ್ಡ್ ಕಾರ್ಡ್​ ಎಂಟ್ರಿಗೆ ಬಿಗ್ ಬಾಸ್ ಮನೆ ಶೇಕ್; ಪ್ರಬಲರೇ ಟಾರ್ಗೆಟ್
ಡಬಲ್ ವೈಲ್ಡ್ ಕಾರ್ಡ್​ ಎಂಟ್ರಿಗೆ ಬಿಗ್ ಬಾಸ್ ಮನೆ ಶೇಕ್; ಪ್ರಬಲರೇ ಟಾರ್ಗೆಟ್
ಬಿಜೆಪಿಯಿಂದ 50 ಅಲ್ಲ, 100 ಕೋಟಿ ರೂ. ಆಫರ್: ರವಿಕುಮಾರ್​ ಗಣಿಗ ಮತ್ತೆ ಆರೋಪ
ಬಿಜೆಪಿಯಿಂದ 50 ಅಲ್ಲ, 100 ಕೋಟಿ ರೂ. ಆಫರ್: ರವಿಕುಮಾರ್​ ಗಣಿಗ ಮತ್ತೆ ಆರೋಪ
Video: ಆಂಬ್ಯುಲೆನ್ಸ್​ಗೆ ದಾರಿ ಬಿಡದ ಕಾರು ಚಾಲಕನಿಗೆ 2.5 ಲಕ್ಷ ರೂ. ದಂಡ
Video: ಆಂಬ್ಯುಲೆನ್ಸ್​ಗೆ ದಾರಿ ಬಿಡದ ಕಾರು ಚಾಲಕನಿಗೆ 2.5 ಲಕ್ಷ ರೂ. ದಂಡ
Daily Devotional: ಪುಣ್ಯ ಕ್ಷೇತ್ರಗಳಿಗೆ ಹೋದಾಗ ಆಹಾರ ಪದ್ಧತಿ ಹೇಗಿರಬೇಕು
Daily Devotional: ಪುಣ್ಯ ಕ್ಷೇತ್ರಗಳಿಗೆ ಹೋದಾಗ ಆಹಾರ ಪದ್ಧತಿ ಹೇಗಿರಬೇಕು
ಕಾರ್ತಿಕ ಸೋಮವಾರದಂದು ಯಾವೆಲ್ಲಾ ರಾಶಿಗಳ ಭವಿಷ್ಯ ಹೇಗಿದೆ ತಿಳಿಯಿರಿ
ಕಾರ್ತಿಕ ಸೋಮವಾರದಂದು ಯಾವೆಲ್ಲಾ ರಾಶಿಗಳ ಭವಿಷ್ಯ ಹೇಗಿದೆ ತಿಳಿಯಿರಿ
ಪಾಸ್ ತೋರಿಸಿ ಎಂದಿದ್ದಕ್ಕೆ ಬಿಎಂಟಿಸಿ ಸಿಬ್ಬಂದಿಗೆ ಆವಾಜ್ ಹಾಕಿದ ಪ್ರಯಾಣಿಕ
ಪಾಸ್ ತೋರಿಸಿ ಎಂದಿದ್ದಕ್ಕೆ ಬಿಎಂಟಿಸಿ ಸಿಬ್ಬಂದಿಗೆ ಆವಾಜ್ ಹಾಕಿದ ಪ್ರಯಾಣಿಕ
‘ಪುಷ್ಪ 2’ ಟ್ರೇಲರ್​ ಲಾಂಚ್​ನಲ್ಲಿ ಜನಸಾಗರ; ಅಲ್ಲು ಅರ್ಜುನ್ ಕ್ರೇಜ್ ನೋಡಿ
‘ಪುಷ್ಪ 2’ ಟ್ರೇಲರ್​ ಲಾಂಚ್​ನಲ್ಲಿ ಜನಸಾಗರ; ಅಲ್ಲು ಅರ್ಜುನ್ ಕ್ರೇಜ್ ನೋಡಿ