
ದಕ್ಷಿಣ ಆಫ್ರಿಕಾ ಹಾಗೂ ಟೀಂ ಇಂಡಿಯಾ (India vs South Africa) ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಕ್ತಾಯವಾಗಿದೆ. ಮೊದಲ ದಿನವೇ ಒಟ್ಟು 23 ವಿಕೆಟ್‌ಗಳು ಬಿದ್ದಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಉಭಯ ತಂಡಗಳು ತಮ್ಮ ತಮ್ಮ ಮೊದಲ ಇನ್ನಿಂಗ್ಸ್ ಆಡಿ ಮುಗಿಸಿದ್ದು, ಇದೀಗ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ದಕ್ಷಿಣ ಆಫ್ರಿಕಾ 36 ರನ್‌ಗಳ ಹಿನ್ನಡೆಯಲ್ಲಿದೆ. ಇನ್ನು ಮೊದಲ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 55 ರನ್‌ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ ಆ ಬಳಿಕ 153 ರನ್‌ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಇದರೊಂದಿಗೆ 98 ರನ್‌ಗಳ ಮುನ್ನಡೆ ಸಾಧಿಸಿತು. ಎರಡನೇ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ಮೊದಲ ದಿನದಾಟದ ಅಂತ್ಯಕ್ಕೆ 17 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 62 ರನ್ ಗಳಿಸಿದೆ.
ದಕ್ಷಿಣ ಆಫ್ರಿಕಾ ಪರ ಏಡನ್ ಮಾರ್ಕ್ರಾಮ್ 36 ಮತ್ತು ಡೇವಿಡ್ ಬೆಡಿಂಗ್ ಹ್ಯಾಮ್ 7 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ನಾಯಕ ಡೀನ್ ಎಲ್ಗರ್ ತಮ್ಮ ಕೊನೆಯ ಇನ್ನಿಂಗ್ಸ್‌ನಲ್ಲಿ 12 ರನ್ ಗಳಿಸಿದರೆ, ಟೋನಿ ಡಿ ಜೊರ್ಜಿ ಮತ್ತು ಟ್ರಿಸ್ಟಾನ್ ಸ್ಟಬ್ಸ್ ತಲಾ 1 ರನ್ಗಳಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಮುಖೇಶ್ ಕುಮಾರ್ ಟೀಂ ಇಂಡಿಯಾ ಪರ ಅತಿ ಹೆಚ್ಚು 2 ವಿಕೆಟ್ ಪಡೆದಿದ್ದರೆ, ಜಸ್ಪ್ರೀತ್ ಬುಮ್ರಾ 1 ವಿಕೆಟ್ ಪಡೆದಿದ್ದಾರೆ.
IND vs SA: ಭಾರತದ 7 ಬ್ಯಾಟರ್ಗಳಿಗೆ ಖಾತೆ ತೆರೆಯಲಾಗಲಿಲ್ಲ..!
ಇದಕ್ಕೂ ಮುನ್ನ ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾವನ್ನು 153 ರನ್‌ಗಳಿಗೆ ಆಲೌಟ್ ಮಾಡಿತ್ತು. ದಕ್ಷಿಣ ಆಫ್ರಿಕಾ ಒಂದೇ ಒಂದು ರನ್ ಬಿಟ್ಟುಕೊಡದೆ ಟೀಂ ಇಂಡಿಯಾದ ಕೊನೆಯ 6 ವಿಕೆಟ್ ಕಬಳಿಸಿತು. ವಿರಾಟ್ ಕೊಹ್ಲಿ ಟೀಂ ಇಂಡಿಯಾ ಪರ ಗರಿಷ್ಠ 46 ರನ್ ಗಳಿಸಿದರು. ದಕ್ಷಿಣ ಆಫ್ರಿಕಾ ಪರ ಕಗಿಸೊ ರಬಾಡ ಮತ್ತು ಲುಂಗಿ ಎನ್‌ಗಿಡಿ ತಲಾ 3 ವಿಕೆಟ್ ಪಡೆದರು.
ಅದಕ್ಕೂ ಮುನ್ನ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 55 ರನ್‌ಗಳಿಗೆ ಆಲೌಟ್ ಮಾಡಿತ್ತು. ದಕ್ಷಿಣ ಆಫ್ರಿಕಾದ ಇಬ್ಬರು ಬ್ಯಾಟರ್ಗಳು ಮಾತ್ರ ಎರಡಂಕಿ ಮೊತ್ತ ಕಲೆಹಾಕಿದ್ದರಯ. ಟೀಂ ಇಂಡಿಯಾ ಪರ ಮೊಹಮ್ಮದ್ ಸಿರಾಜ್ 6 ವಿಕೆಟ್ ಪಡೆದರೆ, ಮುಖೇಶ್ ಕುಮಾರ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದರು.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಮತ್ತು ಮುಖೇಶ್ ಕುಮಾರ್
ದಕ್ಷಿಣ ಆಫ್ರಿಕಾ: ಡೀನ್ ಎಲ್ಗರ್ (ನಾಯಕ), ಏಡನ್ ಮಾರ್ಕ್ರಾಮ್, ಟೋನಿ ಡಿ ಜೊರ್ಜಿ, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಬೆಡಿಂಗ್ಹ್ಯಾಮ್, ಕೈಲ್ ವೆರ್ರೆನ್ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಆಂಡ್ರೆ ಬರ್ಜರ್ ಮತ್ತು ಲುಂಗಿ ಎನ್ಗಿಡಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ