ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ 2ನೇ ಟೆಸ್ಟ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಕೇಪ್ಟೌನ್ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಸರಣಿ ನಿರ್ಣಾಯ. ಎರಡು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವನ್ನು ಸೌತ್ ಆಫ್ರಿಕಾ ತಂಡ ಗೆದ್ದುಕೊಂಡಿದೆ. ಇದೀಗ 2ನೇ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಸರಣಿಯನ್ನು ಡ್ರಾನಲ್ಲಿ ಕೊನೆಗೊಳಿಸಲು ಟೀಮ್ ಇಂಡಿಯಾಗೆ ಉತ್ತಮ ಅವಕಾಶವಿದೆ.
ಈ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವ ಇರಾದೆಯಲ್ಲಿರುವ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಪಂದ್ಯದಲ್ಲಿ ಕಣಕ್ಕಿಳಿದ ರವಿಚಂದ್ರನ್ ಅಶ್ವಿನ್ ಕೇವಲ 1 ವಿಕೆಟ್ ಪಡೆಯಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಅವರನ್ನು 2ನೇ ಪಂದ್ಯದಿಂದ ಕೈ ಬಿಡುವ ಸಾಧ್ಯತೆ ಹೆಚ್ಚಿದೆ.
ಇನ್ನು ಬೆನ್ನು ನೋವಿನ ಕಾರಣ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯದ ರವೀಂದ್ರ ಜಡೇಜಾ ಅಶ್ವಿನ್ ಸ್ಥಾನದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು. ಮತ್ತೊಂದೆಡೆ ಶಾರ್ದೂಲ್ ಠಾಕೂರ್ ಅಭ್ಯಾಸದ ವೇಳೆ ಗಾಯಗೊಂಡಿದ್ದು, ಹೀಗಾಗಿ ಅವರ ಬದಲಿಗೆ ಮುಕೇಶ್ ಕುಮಾರ್ಗೆ ಚಾನ್ಸ್ ನೀಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ಅದರಂತೆ ಈ ಪಂದ್ಯದಲ್ಲೂ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಶುಭ್ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಕ್ರಮವಾಗಿ 3ನೇ ಮತ್ತು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಐದನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಿದರೆ, 6 ಮತ್ತು 7ನೇ ಕ್ರಮಾಂಕಗಳಲ್ಲಿ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಬ್ಯಾಟ್ ಬೀಸಬಹುದು.
ಇನ್ನು ಸೌತ್ ಆಫ್ರಿಕಾ ಪಿಚ್ಗಳು ವೇಗದ ಬೌಲಿಂಗ್ಗೆ ಸಹಕಾರಿಯಾಗಿರುವ ಕಾರಣ ಟೀಮ್ ಇಂಡಿಯಾ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಹಾಗೂ ಮುಕೇಶ್ ಕುಮಾರ್ನೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಅದರಂತೆ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…
ಇದನ್ನೂ ಓದಿ: IPL 2024: RCB ತಂಡದ ನಾಯಕತ್ವದಲ್ಲಿ ಮತ್ತೆ ಬದಲಾವಣೆ..?
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಅಭಿಮನ್ಯು ಈಶ್ವರನ್, ಅವೇಶ್ ಖಾನ್.