AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಂ ಇಂಡಿಯಾದಲ್ಲಿ 2 ಬದಲಾವಣೆ; ಆರ್​ಸಿಬಿ ಆಟಗಾರರನಿಗೆ ಚೊಚ್ಚಲ ಅವಕಾಶ..!

IND vs SA: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಇಂದು ನಡೆಯುತ್ತಿದೆ. ಇದುವರೆಗೆ ನಡೆದಿರುವ ಪಂದ್ಯಗಳ ಪೈಕಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದು ಸರಣಿ ಸಮಬಲ ಸಾಧಿಸಿವೆ.

IND vs SA: ಟೀಂ ಇಂಡಿಯಾದಲ್ಲಿ 2 ಬದಲಾವಣೆ; ಆರ್​ಸಿಬಿ ಆಟಗಾರರನಿಗೆ ಚೊಚ್ಚಲ ಅವಕಾಶ..!
ಭಾರತ- ಆಫ್ರಿಕಾ
ಪೃಥ್ವಿಶಂಕರ
|

Updated on:Dec 21, 2023 | 4:19 PM

Share

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಇಂದು ನಡೆಯುತ್ತಿದೆ. ಇದುವರೆಗೆ ನಡೆದಿರುವ ಪಂದ್ಯಗಳ ಪೈಕಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದು ಸರಣಿ ಸಮಬಲ ಸಾಧಿಸಿವೆ. ಇನ್ನು ಇಂದಿನ ಪಂದ್ಯ ಯಾವ ತಂಡ ಸರಣಿಯಲ್ಲಿ ಚಾಂಪಿಯನ್ ಆಗಲಿದೆ ಎಂಬುದನ್ನು ನಿರ್ಧರಿಸಲಿದೆ. ಮೂರನೇ ಏಕದಿನ ಪಂದ್ಯವು ಪಾರ್ಲ್‌ನ ಬೋಲ್ಯಾಂಡ್ ಪಾರ್ಕ್ (Boland Park) ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾದ ನಾಯಕ ಏಡೆನ್ ಮಾರ್ಕ್ರಾಮ್ (A Markram) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ (Team India) ಮೊದಲು ಬ್ಯಾಟಿಂಗ್ ಮಾಡಲಿದೆ. ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್‌ಗಳ ಸೋಲು ಅನುಭವಿಸಬೇಕಾಯಿತು. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಮೂರನೇ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಆಸೆಯಲ್ಲಿದೆ.

ತಂಡದಲ್ಲಿ 2 ಬದಲಾವಣೆ

ನಿರೀಕ್ಷೆಯಂತೆ ಕೊನೆಯ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಎರಡು ಪ್ರಮುಖ ಬದಲಾವಣೆಗಳಾಗಿವೆ. ಈ ಪಂದ್ಯದಲ್ಲಿ ಓಪನರ್ ರುತುರಾಜ್ ಗಾಯಕ್ವಾಡ್ ಆರಂಭಿಕರಾಗಿ ಕಾಣಿಸಿಕೊಳ್ಳುವುದಿಲ್ಲ. ಬೆರಳಿನ ಗಾಯದಿಂದಾಗಿ ಅವರನ್ನು ಹೊರಗಿಡಲಾಗಿದೆ. ಗಾಯಕ್ವಾಡ್ ಬದಲಿಗೆ, ಆರ್​ಸಿಬಿ ಆಟಗಾರ ರಜತ್ ಪಾಟಿದಾರ್ ಅವರಿಗೆ ಚೊಚ್ಚಲ ಅಂತರರಾಷ್ಟ್ರೀಯ  ಪಂದ್ಯವನ್ನಾಡುವ ಅವಕಾಶ ಸಿಕ್ಕಿದೆ.

IND vs SA 3rd ODI Live Score: ಮತ್ತೆ ಟಾಸ್ ಸೋತ ಭಾರತ; ಮೊದಲು ಬ್ಯಾಟಿಂಗ್

ಕೊನೆಗೂ ಚಾಹಲ್​ಗೆ ಅವಕಾಶ ಸಿಗಲಿಲ್ಲ

ಇವರಲ್ಲದೇ ಭಾರತ ತಂಡ ಸ್ಪಿನ್ ಬೌಲರ್ ಕುಲ್ದೀಪ್ ಯಾದವ್ ಬದಲಿಗೆ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಮೈದಾನಕ್ಕಿಳಿಸಿದೆ. ಸ್ಪಿನ್ ಬೌಲಿಂಗ್ ಜೊತೆಗೆ, ಸುಂದರ್ ಭಾರತ ತಂಡಕ್ಕೆ ಬ್ಯಾಟ್ಸ್‌ಮನ್ ಆಯ್ಕೆಗಳನ್ನು ಸಹ ಒದಗಿಸುತ್ತಾರೆ. ಆದಾಗ್ಯೂ, ತಂಡವು ಕುಲ್ದೀಪ್ ಅವರನ್ನು ಬಿಟ್ಟು ಸ್ಪಿನ್ ಸ್ಪೆಷಲಿಸ್ಟ್ ಯುಜ್ವೇಂದ್ರ ಚಾಹಲ್ ಅವರನ್ನು ಹೊರಗಿಟ್ಟಿದ್ದು, ಎಲ್ಲರಲ್ಲೂ ಆಶ್ಚರ್ಯ ಹುಟ್ಟಿಸಿದೆ. ಏಕೆಂದರೆ ಬಹಳ ದಿನಗಳಿಂದ ತಂಡದಿಂದ ಹೊರಗುಳಿದಿದ್ದ ಚಾಹಲ್ ಮೊದಲ ಬಾರಿಗೆ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಅವರಿಗೆ ಸರಣಿಯ ಒಂದೇ ಒಂದು ಪಂದ್ಯದಲ್ಲೂ ಆಡುವ ಅವಕಾಶ ಸಿಗಲಿಲ್ಲ.

ಉಭಯ ತಂಡಗಳು

ದಕ್ಷಿಣ ಆಫ್ರಿಕಾ ತಂಡ: ರೀಜಾ ಹೆಂಡ್ರಿಕ್ಸ್, ಟೋನಿ ಡಿ ಜಾರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ನಾಂಡ್ರೆ ಬರ್ಜರ್, ಲಿಜಾಡ್ ವಿಲಿಯಮ್ಸ್, ಬ್ಯೂರಾನ್ ಹೆಂಡ್ರಿಕ್ಸ್.

ಭಾರತ ತಂಡ: ಸಾಯಿ ಸುದರ್ಶನ್, ಸಂಜು ಸ್ಯಾಮ್ಸನ್, ರಜತ್ ಪಾಟಿದಾರ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ವಿಕೆಟ್ ಕೀಪರ್/ನಾಯಕ), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:12 pm, Thu, 21 December 23

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ