ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಇಂದು ನಡೆಯುತ್ತಿದೆ. ಇದುವರೆಗೆ ನಡೆದಿರುವ ಪಂದ್ಯಗಳ ಪೈಕಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದು ಸರಣಿ ಸಮಬಲ ಸಾಧಿಸಿವೆ. ಇನ್ನು ಇಂದಿನ ಪಂದ್ಯ ಯಾವ ತಂಡ ಸರಣಿಯಲ್ಲಿ ಚಾಂಪಿಯನ್ ಆಗಲಿದೆ ಎಂಬುದನ್ನು ನಿರ್ಧರಿಸಲಿದೆ. ಮೂರನೇ ಏಕದಿನ ಪಂದ್ಯವು ಪಾರ್ಲ್‌ನ ಬೋಲ್ಯಾಂಡ್ ಪಾರ್ಕ್ (Boland Park) ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾದ ನಾಯಕ ಏಡೆನ್ ಮಾರ್ಕ್ರಾಮ್ (A Markram) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ (Team India) ಮೊದಲು ಬ್ಯಾಟಿಂಗ್ ಮಾಡಲಿದೆ. ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್‌ಗಳ ಸೋಲು ಅನುಭವಿಸಬೇಕಾಯಿತು. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಮೂರನೇ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಆಸೆಯಲ್ಲಿದೆ.
ನಿರೀಕ್ಷೆಯಂತೆ ಕೊನೆಯ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಎರಡು ಪ್ರಮುಖ ಬದಲಾವಣೆಗಳಾಗಿವೆ. ಈ ಪಂದ್ಯದಲ್ಲಿ ಓಪನರ್ ರುತುರಾಜ್ ಗಾಯಕ್ವಾಡ್ ಆರಂಭಿಕರಾಗಿ ಕಾಣಿಸಿಕೊಳ್ಳುವುದಿಲ್ಲ. ಬೆರಳಿನ ಗಾಯದಿಂದಾಗಿ ಅವರನ್ನು ಹೊರಗಿಡಲಾಗಿದೆ. ಗಾಯಕ್ವಾಡ್ ಬದಲಿಗೆ, ಆರ್ಸಿಬಿ ಆಟಗಾರ ರಜತ್ ಪಾಟಿದಾರ್ ಅವರಿಗೆ ಚೊಚ್ಚಲ ಅಂತರರಾಷ್ಟ್ರೀಯ ಪಂದ್ಯವನ್ನಾಡುವ ಅವಕಾಶ ಸಿಕ್ಕಿದೆ.
IND vs SA 3rd ODI Live Score: ಮತ್ತೆ ಟಾಸ್ ಸೋತ ಭಾರತ; ಮೊದಲು ಬ್ಯಾಟಿಂಗ್
ಇವರಲ್ಲದೇ ಭಾರತ ತಂಡ ಸ್ಪಿನ್ ಬೌಲರ್ ಕುಲ್ದೀಪ್ ಯಾದವ್ ಬದಲಿಗೆ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಮೈದಾನಕ್ಕಿಳಿಸಿದೆ. ಸ್ಪಿನ್ ಬೌಲಿಂಗ್ ಜೊತೆಗೆ, ಸುಂದರ್ ಭಾರತ ತಂಡಕ್ಕೆ ಬ್ಯಾಟ್ಸ್‌ಮನ್ ಆಯ್ಕೆಗಳನ್ನು ಸಹ ಒದಗಿಸುತ್ತಾರೆ. ಆದಾಗ್ಯೂ, ತಂಡವು ಕುಲ್ದೀಪ್ ಅವರನ್ನು ಬಿಟ್ಟು ಸ್ಪಿನ್ ಸ್ಪೆಷಲಿಸ್ಟ್ ಯುಜ್ವೇಂದ್ರ ಚಾಹಲ್ ಅವರನ್ನು ಹೊರಗಿಟ್ಟಿದ್ದು, ಎಲ್ಲರಲ್ಲೂ ಆಶ್ಚರ್ಯ ಹುಟ್ಟಿಸಿದೆ. ಏಕೆಂದರೆ ಬಹಳ ದಿನಗಳಿಂದ ತಂಡದಿಂದ ಹೊರಗುಳಿದಿದ್ದ ಚಾಹಲ್ ಮೊದಲ ಬಾರಿಗೆ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಅವರಿಗೆ ಸರಣಿಯ ಒಂದೇ ಒಂದು ಪಂದ್ಯದಲ್ಲೂ ಆಡುವ ಅವಕಾಶ ಸಿಗಲಿಲ್ಲ.
ದಕ್ಷಿಣ ಆಫ್ರಿಕಾ ತಂಡ: ರೀಜಾ ಹೆಂಡ್ರಿಕ್ಸ್, ಟೋನಿ ಡಿ ಜಾರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ನಾಂಡ್ರೆ ಬರ್ಜರ್, ಲಿಜಾಡ್ ವಿಲಿಯಮ್ಸ್, ಬ್ಯೂರಾನ್ ಹೆಂಡ್ರಿಕ್ಸ್.
ಭಾರತ ತಂಡ: ಸಾಯಿ ಸುದರ್ಶನ್, ಸಂಜು ಸ್ಯಾಮ್ಸನ್, ರಜತ್ ಪಾಟಿದಾರ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ವಿಕೆಟ್ ಕೀಪರ್/ನಾಯಕ), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:12 pm, Thu, 21 December 23