IND vs SA: ಬೋಲ್ಯಾಂಡ್ ಪಾರ್ಕ್ ಪಿಚ್ ಯಾರಿಗೆ ಸಹಕಾರಿ? ಪಂದ್ಯಕ್ಕಿದೆಯಾ ಮಳೆಯ ಆತಂಕ?

India vs South Africa 3rd ODI: ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಪಾರ್ಲ್ ನಗರದ ಬೋಲ್ಯಾಂಡ್ ಪಾರ್ಕ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಬೋಲ್ಯಾಂಡ್ ಪಾರ್ಕ್ ಸ್ಟೇಡಿಯಂನ ಪಿಚ್ ಬಗ್ಗೆ ಮಾತನಾಡುವುದಾದರೆ, ಈ ಪಿಚ್ ವೇಗದ ಬೌಲರ್‌ಗಳಿಗೆ ಹೆಚ್ಚು ನೆರವಾಗಲಿದೆ.

IND vs SA: ಬೋಲ್ಯಾಂಡ್ ಪಾರ್ಕ್ ಪಿಚ್ ಯಾರಿಗೆ ಸಹಕಾರಿ? ಪಂದ್ಯಕ್ಕಿದೆಯಾ ಮಳೆಯ ಆತಂಕ?
ಬೋಲ್ಯಾಂಡ್ ಪಾರ್ಕ್ ಪಿಚ್ ವರದಿ
Follow us
ಪೃಥ್ವಿಶಂಕರ
|

Updated on: Dec 20, 2023 | 8:52 PM

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯ ಬೋಲ್ಯಾಂಡ್ ಪಾರ್ಕ್ (Boland Park), ಪಾರ್ಲ್‌ನಲ್ಲಿ ಡಿಸೆಂಬರ್ 21 ರಂದು ನಡೆಯಲ್ಲಿದೆ. ಎರಡೂ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿರುವುದರಿಂದ ಉಭಯ ತಂಡಗಳು ಗೆಲುವಿಗಾಗಿ ಹೋರಾಟ ನಡೆಸಲ್ಲಿವೆ. ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಸರಣಿಯಲ್ಲಿ ಮುನ್ನಡೆ ಸಾಧಿಸಿದರೆ, ಎರಡನೇ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಆಫ್ರಿಕಾ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ಹೀಗಾಗಿ ನಾಳಿನ ಪಂದ್ಯವನ್ನು ಗೆಲ್ಲುವ ತಂಡಕ್ಕೆ ಏಕದಿನ ಸರಣಿ ಹೋಗಲಿದೆ.

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2018 ರಲ್ಲಿ ನಡೆದ ಏಕದಿನ ಸರಣಿಯಲ್ಲಿ ಆಫ್ರಿಕಾ ತಂಡವನ್ನು ಅವರ ನೆಲದಲ್ಲೇ ಟೀಂ ಇಂಡಿಯಾ ಕೊನೆಯದಾಗಿ ಸೋಲಿಸಿತ್ತು. ಅದಕ್ಕೂ ಮೊದಲು 1992ರಲ್ಲಿ ನಡೆದಿದ್ದ ಏಕದಿನ ಸರಣಿಯನ್ನು ಜಯಿಸುವಲ್ಲಿ ಭಾರತ ಯಶಸ್ವಿಯಾಗಿತ್ತು. ಈ ಎರಡೂ ಸರಣಿಗಳನ್ನು ಹೊರತುಪಡಿಸಿದರೆ, ಉಳಿದ ಸರಣಿಗಳಲ್ಲಿ ಆಫ್ರಿಕಾವೇ ಮೇಲುಗೈ ಸಾಧಿಸಿದೆ. ಹೀಗಾಗಿ ಈ ಸರಣಿಯನ್ನು ಗೆಲ್ಲುವ ಇರಾದೆಯಲ್ಲಿ ಟೀಂ ಇಂಡಿಯಾ ಇದೆ.

ಬೋಲ್ಯಾಂಡ್ ಪಾರ್ಕ್ ಸ್ಟೇಡಿಯಂನ ಪಿಚ್ ವರದಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಪಾರ್ಲ್ ನಗರದ ಬೋಲ್ಯಾಂಡ್ ಪಾರ್ಕ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಬೋಲ್ಯಾಂಡ್ ಪಾರ್ಕ್ ಸ್ಟೇಡಿಯಂನ ಪಿಚ್ ಬಗ್ಗೆ ಮಾತನಾಡುವುದಾದರೆ, ಈ ಪಿಚ್ ವೇಗದ ಬೌಲರ್‌ಗಳಿಗೆ ಹೆಚ್ಚು ನೆರವಾಗಲಿದೆ. ಅಲ್ಲದೆ ವೇಗದ ಬೌಲರ್‌ಗಳ ಹೊರತಾಗಿ, ಬ್ಯಾಟ್ಸ್‌ಮನ್‌ಗಳಿಗೂ ಇಲ್ಲಿ ಕೊಂಚ ನೆರವು ಸಿಗಲಿದೆ. ಇನ್ನು ಈ ಕ್ರೀಡಾಂಗಣದಲ್ಲಿ ಇದುವರೆಗೆ ಒಟ್ಟು 20 ಏಕದಿನ ಪಂದ್ಯಗಳು ನಡೆದಿವೆ. ಇದರಲ್ಲಿ ಮೊದಲು ಬ್ಯಾಟ್ ಮಾಡಿದ ತಂಡಗಳು 9 ಬಾರಿ ಗೆದ್ದಿದ್ದರೆ, ನಂತರ ಬ್ಯಾಟಿಂಗ್ ಮಾಡಿದ ತಂಡಗಳು 10 ಬಾರಿ ಯಶಸ್ಸು ಕಂಡಿವೆ. ಇಂತಹ ಪರಿಸ್ಥಿತಿಯಲ್ಲಿ ಟಾಸ್​ನಿಂದ ಈ ಪಂದ್ಯಕ್ಕೆ ಹೆಚ್ಚಿನ ವ್ಯತ್ಯಾಸವಾಗುವುದಿಲ್ಲ.

IND vs SA: ಗೆದ್ದವರಿಗೆ ಏಕದಿನ ಸರಣಿ; ಪಂದ್ಯ ಎಷ್ಟು ಗಂಟೆಗೆ ಆರಂಭ? ನೇರ ಪ್ರಸಾರ ಯಾವ ಚಾನೆಲ್​ನಲ್ಲಿ? ಇಲ್ಲಿದೆ ವಿವರ

ಹವಾಮಾನ ವರದಿ ಇಲ್ಲಿದೆ

ಇನ್ನು ಪಂದ್ಯದ ವೇಳೆ ಹವಾಮಾನದ ಬಗ್ಗೆ ಹೇಳುವುದಾದರೆ ಗುರುವಾರದಂದು ವಾತಾವರಣ ತಿಳಿಯಾಗುವ ಸಾಧ್ಯತೆ ಇದೆ. ಹವಾಮಾನ ವರದಿಯ ಪ್ರಕಾರ ಗುರುವಾರ ಪಾರ್ಲ್‌ನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಇರಬಹುದೆಂದು ನಿರೀಕ್ಷಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮಳೆಯಾಗುವ ಸಾಧ್ಯತೆ ತೀರಾ ಕಡಿಮೆ. ಹಾಗಾಗಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯವನ್ನು ಯಾವುದೇ ಅಡೆತಡೆಯಿಲ್ಲದೆ ಕ್ರಿಕೆಟ್ ಅಭಿಮಾನಿಗಳು ವೀಕ್ಷಿಸಬಹುದಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ