IND vs SA: ಚೊಚ್ಚಲ ಅಂತಾರಾಷ್ಟ್ರೀಯ ಶತಕ ಸಿಡಿಸಿದ ಸಂಜು ಸ್ಯಾಮ್ಸನ್..!

IND vs SA: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯವು ಪಾರ್ಲ್‌ನ ಬೋಲ್ಯಾಂಡ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ತಮ್ಮ ಏಕದಿನ ವೃತ್ತಿ ಜೀವನದ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ.

IND vs SA: ಚೊಚ್ಚಲ ಅಂತಾರಾಷ್ಟ್ರೀಯ ಶತಕ ಸಿಡಿಸಿದ ಸಂಜು ಸ್ಯಾಮ್ಸನ್..!
ಸಂಜು ಸ್ಯಾಮ್ಸನ್

Updated on: Dec 21, 2023 | 8:46 PM

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಮೂರನೇ ಏಕದಿನ ಪಂದ್ಯವು ಪಾರ್ಲ್‌ನ ಬೋಲ್ಯಾಂಡ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ (Sanju Samson) ತಮ್ಮ ಏಕದಿನ ವೃತ್ತಿ ಜೀವನದ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ. ಇನಿಂಗ್ಸ್‌ನ ಆರಂಭದಿಂದಲೂ ಸಂಜು ಸ್ಯಾಮ್ಸನ್ ಉತ್ತಮ ಬ್ಯಾಟಿಂಗ್ ಮುಂದುವರಿಸಿ 110 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ತಮ್ಮ ಇನ್ನಿಂಗ್ಸ್​ನಲ್ಲಿ 114 ಎಸೆತಗಳನ್ನು ಎದುರಿಸಿದ ಸಂಜು 6 ಬೌಂಡರಿ ಮತ್ತು 3 ಸಿಕ್ಸರ್ ಸಹಿತ 108 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಸಂಜು ಏಕದಿನದಲ್ಲಿ ಶತಕ ಸಿಡಿಸಿದ ಭಾರತದ ಐದನೇ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ. ಇದರೊಂದಿಗೆ ಮಹೇಂದ್ರ ಸಿಂಗ್ ಧೋನಿ (MS Dhoni) ಮತ್ತು ಕೆಎಲ್ ರಾಹುಲ್ (KL Rahul) ಅವರ ಪಟ್ಟಿಗೆ ಸೇರಿಕೊಂಡಿದ್ದಾರೆ.

ಈ ಸರಣಿಯ ಕೊನೆಯ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅದ್ಭುತ ಬ್ಯಾಟಿಂಗ್ ಮಾಡಿದರು. ಮೊದಲ ಏಕದಿನ ಪಂದ್ಯದಲ್ಲಿ ಸಂಜುಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಎರಡನೇ ಪಂದ್ಯದಲ್ಲಿ ಬ್ಯಾಟಿಂಗ್​ಗೆ ಅವಕಾಶ ಸಿಕ್ಕಿತ್ತಾದರೂ ಅವರು ಶೀಘ್ರದಲ್ಲೇ ಔಟಾದರು. ಆದರೆ ಮೂರನೇ ಪಂದ್ಯದಲ್ಲಿ ತಮ್ಮ ಸಂಯಮವನ್ನು ಕಾಪಾಡಿಕೊಂಡ ಸಂಜು ಸಂವೇದನಾಶೀಲ ಇನ್ನಿಂಗ್ಸ್ ಆಡಿದರು.ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ 44 ಓವರ್‌ಗಳ ಕೊನೆಯ ಎಸೆತದಲ್ಲಿ ಶತಕ ಗಳಿಸಿದರು ಕೇಶವ ಮಹಾರಾಜ್ ಓವರ್​ನಲ್ಲಿ ಸಿಂಗಲ್ ಕದಿಯುವ ಮೂಲಕ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಸಂಜು ತಮ್ಮ ತೋಳ್ಬಲವನ್ನು ಪ್ರದರ್ಶಿಸುವ ಮೂಲಕ ತಮ್ಮ ಶತಕವನ್ನು ಸಂಭ್ರಮಿಸಿದರು.

ಸಂಜು ಸ್ಯಾಮ್ಸನ್ ವೃತ್ತಿಜೀವನ ಹೇಗಿದೆ?

ಸಂಜು ಸ್ಯಾಮ್ಸನ್ ಇದುವರೆಗೆ ಭಾರತದ ಪರ 16 ಏಕದಿನ ಪಂದ್ಯಗಳಲ್ಲಿ 56.67 ಸರಾಸರಿಯಲ್ಲಿ 510 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 1 ಶತಕ ಹೊರತುಪಡಿಸಿ 3 ಅರ್ಧ ಶತಕಗಳನ್ನು ತಮ್ಮ ಹೆಸರಿನಲ್ಲಿ ದಾಖಲಿಸಿದ್ದಾರೆ. ಹಾಗೆಯೇ 24 ಟಿ20 ಪಂದ್ಯಗಳಲ್ಲಿ ಈ ಆಟಗಾರ 19.68 ಸರಾಸರಿಯೊಂದಿಗೆ 374 ರನ್ ಗಳಿಸಿದ್ದಾರೆ. ಅಲ್ಲದೆ ಟಿ20ಯಲ್ಲಿ 1 ಅರ್ಧಶತಕ ಸಹ ಸಿಡಿಸಿದ್ದಾರೆ.

Published On - 7:51 pm, Thu, 21 December 23