IND vs SA: ಕೊಹ್ಲಿಗೆ ವಿಶ್ರಾಂತಿ.. ಯಾರಿಗೆ ಸಿಗುತ್ತೆ ಅವಕಾಶ? 3ನೇ ಟಿ20 ಪಂದ್ಯಕ್ಕೆ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ

| Updated By: ಪೃಥ್ವಿಶಂಕರ

Updated on: Oct 03, 2022 | 5:30 PM

IND vs SA: ಮಂಗಳವಾರ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಮತ್ತು ಮೊಹಮ್ಮದ್ ಸಿರಾಜ್ ಆಡುವ ಅವಕಾಶ ಪಡೆಯಬಹುದು. ಅಲ್ಲದೆ ಮೂರನೇ ಟಿ20ಯಲ್ಲಿ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಇನ್ಸೈಡ್ ಸ್ಪೋರ್ಟ್ ವರದಿ ಮಾಡಿದೆ.

IND vs SA: ಕೊಹ್ಲಿಗೆ ವಿಶ್ರಾಂತಿ.. ಯಾರಿಗೆ ಸಿಗುತ್ತೆ ಅವಕಾಶ? 3ನೇ ಟಿ20 ಪಂದ್ಯಕ್ಕೆ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ
Team India
Follow us on

ಆಸ್ಟ್ರೇಲಿಯಾ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನೂ (T20 series against South Africa ) ಟೀಂ ಇಂಡಿಯಾ ಗೆದ್ದುಕೊಂಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕೇವಲ ಒಂದು ಪಂದ್ಯ ಮಾತ್ರ ಬಾಕಿ ಉಳಿದಿದ್ದು, ಟೀಂ ಇಂಡಿಯಾ 2-0 ಅಂತರದ ಗೆಲುವಿನ ಮುನ್ನಡೆ ಸಾಧಿಸಿದೆ. ನಾಳೆ ಅಂದರೆ ಮಂಗಳವಾರ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದೆ. ನಾಳಿನ ಪಂದ್ಯ ವಿಶ್ವಕಪ್‌ಗೂ ಮುನ್ನ ನಾಯಕ ರೋಹಿತ್ ಶರ್ಮಾಗೆ (Rohit Sharma) ಪ್ರಯೋಗ ಮಾಡಲು ಕೊನೆಯ ಅವಕಾಶವಾಗಿದೆ. ಹೀಗಾಗಿ ಭಾರತದ ಪಾಲಿನ ಔಪಚಾರಿಕ ಪಂದ್ಯಕ್ಕೆ ತಂಡದ ಹಿರಿಯ ಆಟಗಾರರು ವಿಶ್ರಾಂತಿ ಪಡೆಯುವ ನಿರೀಕ್ಷೆ ಇದೆ. ಆದ್ದರಿಂದ 3ನೇ ಟಿ20 ಪಂದ್ಯದಲ್ಲಿ ಬೆಂಚ್ ಕಾಯುತ್ತಿದ ಆಟಗಾರರಿಗೆ ಅವಕಾಶ ನೀಡಲು ಬಿಸಿಸಿಐ ಮುಂದಾಗಿದೆ. ಈಗಾಗಲೇ ಅಂತಿಮ ಪಂದ್ಯದಲ್ಲಿ ಕೊಹ್ಲಿ ಆಡುತ್ತಿಲ್ಲ ಎಂಬ ಸುದ್ದಿ ಹೊರಬಿದ್ದಿದ್ದು, ಅವರ ಸ್ಥಾನದಲ್ಲಿ ಯಾರು ಆಡುತ್ತಾರೆ ಎಂಬುದು ಕುತೂಹಲ ಹೆಚ್ಚಿಸಿದೆ.

ಇಬ್ಬರು ಹೊಸ ಆಟಗಾರರಿಗೆ ಅವಕಾಶ?

ಮಂಗಳವಾರ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಮತ್ತು ಮೊಹಮ್ಮದ್ ಸಿರಾಜ್ ಆಡುವ ಅವಕಾಶ ಪಡೆಯಬಹುದು. ಅಲ್ಲದೆ ಮೂರನೇ ಟಿ20ಯಲ್ಲಿ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಇನ್ಸೈಡ್ ಸ್ಪೋರ್ಟ್ ವರದಿ ಮಾಡಿದೆ.

ರಿಷಬ್ ಪಂತ್​ಗೆ ಅವಕಾಶ?

ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಈ ಸರಣಿಯಲ್ಲಿ ಸ್ಕೋರ್ ಮಾಡಿದ್ದಾರೆ. ಅಗ್ರ ಕ್ರಮಾಂಕವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ರಿಷಬ್ ಪಂತ್​ಗೆ ತಂಡದಲ್ಲಿ ಸ್ಥಾನ ಪಡೆದರೂ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿಲ್ಲ. ದಿನೇಶ್ ಕಾರ್ತಿಕ್ 5ನೇ ಸ್ಥಾನಕ್ಕೆ ಬಡ್ತಿ ಪಡೆದರಿವುದು ಕೂಡ ಪಂತ್​ಗೆ ಆತಂಕ ತಂದೊಡ್ಡಿದೆ. ಹೀಗಾಗಿ ಕೊನೆಯ ಪಂದ್ಯದಲ್ಲಿ ಪಂತ್ ಅಬ್ಬರಿಸುವ ಮೂಲಕ ಟಿ20 ವಿಶ್ವಕಪ್​ಗೆ ತಂಡದಲ್ಲಿ ಸ್ಥಾನ ಪಡೆಯುವ ತವಕದಲ್ಲಿದ್ದಾರೆ.

ಟಿ20 ವಿಶ್ವಕಪ್​ನಲ್ಲಿ ಸ್ಟ್ಯಾಂಡ್‌ಬೈ ಆಟಗಾರರಲ್ಲಿ ಶ್ರೇಯಸ್ ಅಯ್ಯರ್ ಕೂಡ ಇರುವುದರಿಂದ ವಿರಾಟ್ ಕೊಹ್ಲಿ ಬದಲಿಗೆ ಅವರು ಕೊನಯ ಪಂದ್ಯದಲ್ಲಿ ಆಡುವ ಸಾಧ್ಯತೆಗಳು ಹೆಚ್ಚಿವೆ.

ಬೌಲಿಂಗ್ ಇನ್ನೂ ಕಳವಳಕಾರಿಯಾಗಿದೆ

ಬೌಲಿಂಗ್ ವಿಭಾಗದಲ್ಲಿ ಟೀಂ ಇಂಡಿಯಾ ಇನ್ನೂ ಸಮಸ್ಯೆಯಿಂದ ಹೊರಬಂದಿಲ್ಲ. ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲರ್‌ಗಳು ಕೊನೆಯ ನಾಲ್ಕು ಓವರ್‌ಗಳಲ್ಲಿ 65 ರನ್‌ಗಳನ್ನು ಬಿಟ್ಟುಕೊಟ್ಟರು. ಇದು ಕಳೆದ 5-6 ಪಂದ್ಯಗಳಲ್ಲಿ ಕಂಡುಬಂದಿದೆ. ಹೀಗಾಗಿ ಪಂದ್ಯ ಮುಗಿದ ಬಳಿಕ ಈ ಸಮಸ್ಯೆಯನ್ನು ಬಗೆಹರಿಸುವುದು ಅಗತ್ಯ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. ಹಾಗಾಗಿ ಈ ಪಂದ್ಯದಲ್ಲಿ ಬೌಲಿಂಗ್ ಸುದಾರಣೆಯ ಮೇಲೆ ತಂಡದ ಗಮನ ಹೆಚ್ಚಿರಲಿದೆ.

ಮೂರನೇ ಟಿ20ಗೆ ಭಾರತದ ಸಂಭಾವ್ಯ 11 – ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್/ಮೊಹಮ್ಮದ್ ಸಿರಾಜ್