IND vs SA: ಇಂದು ಮೂರನೇ ಟಿ20: ಇಂದೋರ್ ಪಿಚ್ ಹೇಗಿದೆ?, ಯಾರಿಗೆ ಹೆಚ್ಚು ಸಹಕಾರಿ?

India vs South Africa: ಭಾರತ-ದಕ್ಷಿಣ ಆಫ್ರಿಕಾ ನಡುವೆ ಅಂತಿಮ ತೃತೀಯ ಟಿ20 ಪಂದ್ಯ ಇಂದು ನಡೆಯಲಿದೆ. ಈ ಪಂದ್ಯ ನಡೆಯಲಿರುವ ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂ ಪಿಚ್ ಹೇಗಿದೆ?, ಯಾರಿಗೆ ಹೆಚ್ಚು ಸಹಾಯ ಮಾಡುತ್ತದೆ ಎಂಬುದನ್ನು ನೋಡೋಣ.

IND vs SA: ಇಂದು ಮೂರನೇ ಟಿ20: ಇಂದೋರ್ ಪಿಚ್ ಹೇಗಿದೆ?, ಯಾರಿಗೆ ಹೆಚ್ಚು ಸಹಕಾರಿ?
IND vs SA 3rd T20I
Follow us
TV9 Web
| Updated By: Vinay Bhat

Updated on:Oct 04, 2022 | 9:27 AM

ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವೆ ಅಂತಿಮ ತೃತೀಯ ಟಿ20 ಪಂದ್ಯ ಆಯೋಜಿಸಲಾಗಿದೆ. ಈಗಾಗಲೇ ಸರಣಿ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾಕ್ಕೆ ಇದೊಂದು ಔಪಚಾರಿಕ ಪಂದ್ಯವಾಗಿದ್ದರೂ ಟಿ20 ವಿಶ್ವಕಪ್ ದೃಷ್ಟಿಯಿಂದ ಯೋಜನೆಯೊಂದಿಗೆ ಕಣಕ್ಕಿಳಿಯಲಿದೆ. ವಿರಾಟ್ ಕೊಹ್ಲಿ (Virat Kohli) ಹಾಗೂ ಕೆಎಲ್ ರಾಹುಲ್​ಗೆ ವಿಶ್ರಾಂತಿ ನೀಡುವ ಸಂಭವವಿದ್ದು ಶ್ರೇಯಸ್ ಅಯ್ಯರ್ (Shreyas Iyer) ಮತ್ತು ಮೊಹಮ್ಮದ್ ಸಿರಾಜ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು.

ಆಫ್ರಿಕಾ ವಿರುದ್ಧದ ಸರಣಿಯಲ್ಲಿ ರಿಷಬ್ ಪಂತ್ ಆಡುತ್ತಿದ್ದರೂ ಅವರಿಗೆ ಇದುವರೆಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಹೀಗಾಗಿ ರೋಹಿತ್ ಜೊತೆ ಇವರು ಓಪನರ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಹೀಗೆ ಮೂರನೇ ಟಿ20ಯಲ್ಲಿ ಅನೇಕ ಬದಲಾವಣೆ ನಿರೀಕ್ಷಿಸಲಾಗಿದೆ. ಹಾಗಾದರೆ ಈ ಪಂದ್ಯ ನಡೆಯಲಿರುವ ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂ ಪಿಚ್ ಹೇಗಿದೆ?, ಯಾರಿಗೆ ಹೆಚ್ಚು ಸಹಾಯ ಮಾಡುತ್ತದೆ ಎಂಬುದನ್ನು ನೋಡೋಣ.

ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂ ಪಿಚ್ ಗಟ್ಟಿಯಾಗಿ ಬೌನ್ಸಿಯಾಗಿದ್ದರೂ ಬ್ಯಾಟರ್‌ಗಳಿಗೆ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲು ಸಹಾಯ ಮಾಡುತ್ತಿದೆ. ಈ ಕ್ರೀಡಾಂಗಣದ ಬೌಂಡರಿ ಕೂಡ ಸನಿಹದಲ್ಲಿರುವ ಕಾರಣ ಬೌಲರ್‌ಗಳಿಗೆ ದೊಡ್ಡ ಸವಾಲಾಗಿರುತ್ತದೆ. ಈ ಹಿಂದೆ ಇಲ್ಲಿ ಆಯೋಜನೆಯಾಗಿರುವ ಪಂದ್ಯಗಳಲ್ಲಿ ದೊಡ್ಡ ಮೊತ್ತದ ರನ್ ಹರಿದು ಬಂದಿತ್ತು. ಇದು ಭಾರತದ ಚಿಕ್ಕ ಮೈದಾನಗಳಲ್ಲಿ ಒಂದಾಗಿದೆ, ಹೀಗಾಗಿ ಫೋರ್- ಸಿಕ್ಸರ್​ಗಳ ಮಳೆ ಸುರಿಯಲಿದೆ. ಈ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ತಿರುವು ನೀಡುವುದಿಲ್ಲ. ಹೀಗಾಗಿ ಇಂದು ನಡೆಯಲಿರುವ ಪಂದ್ಯ ಹೈಸ್ಕೋರಿಂಗ್ ಮ್ಯಾಚ್ ಆಗುವ ಸಾಧ್ಯತೆಯಿದೆ.

ಇದನ್ನೂ ಓದಿ
Image
IND vs SA 3rd T20: ಹಿರಿಯರಿಗೆ ವಿಶ್ರಾಂತಿ: ರೋಚಕತೆ ಸೃಷ್ಟಿಸಿದೆ ಭಾರತ- ಆಫ್ರಿಕಾ ತೃತೀಯ ಟಿ20 ಕದನ
Image
IND vs SA ODI Squad: ದೇಶೀ ಕ್ರಿಕೆಟ್​ನಲ್ಲಿ ಮಿಂಚಿದರು ಏಕದಿನ ತಂಡದಲ್ಲಿ ಸ್ಥಾನ ಪಡೆಯದ 4 ನತದೃಷ್ಟ ಕ್ರಿಕೆಟಿಗರಿವರು
Image
T20 World Cup: ಟಿ20 ವಿಶ್ವಕಪ್​ನಿಂದ ಬುಮ್ರಾ ಔಟ್..! ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ ಬಿಸಿಸಿಐ
Image
IND vs SA: ಆಫ್ರಿಕಾ ವಿರುದ್ಧದ ಕೊನೆಯ ಪಂದ್ಯದಿಂದ ಕೊಹ್ಲಿ- ರಾಹುಲ್ ಇಬ್ಬರೂ ಔಟ್..! ಯಾರಿಗೆ ಛಾನ್ಸ್?

ಈ ಮೈದಾನದಲ್ಲಿ ಭಾರತವು ಶ್ರೀಲಂಕಾ ವಿರುದ್ಧ 260 ರನ್ ಗಳಿಸಿತ್ತು. ಇದು ಟೀಮ್ ಇಂಡಿಯಾದ ದಾಖಲೆಯ ಟಿ20 ಸ್ಕೋರ್ ಆಗಿದೆ. ರೋಹಿತ್ ಶರ್ಮಾ ಅವರು ಕೇವಲ 43 ಎಸೆತಗಳಲ್ಲಿ 118 ರನ್ ಗಳಿಸುವ ಮೂಲಕ ಬೃಹತ್ ಸ್ಕೋರ್​ಗೆ ಕಾರಣರಾಗಿದ್ದರು. ಇನ್ನು ಈ ಮೈದಾನದಲ್ಲಿ ಕೇವಲ ಎರಡು ಟಿ20 ಪಂದ್ಯಗಳು ಮಾತ್ರ ನಡೆದಿವೆ. ಮೊದಲು ಬ್ಯಾಟ್ ಮಾಡಿದ ತಂಡ ಒಮ್ಮೆ ಪಂದ್ಯವನ್ನು ಗೆದ್ದುಕೊಂಡರೆ, ಇನ್ನೊಂದು ಬಾರಿ ಚೇಸಿಂಗ್ ಮಾಡಿದ ತಂಡ ಗೆದ್ದಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಪಂದ್ಯದ ಟಾಸ್ ಸಂಜೆ 6.30ಕ್ಕೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು. ಚಂದಾದಾರಿಕೆಯೊಂದಿಗೆ Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೋಡಬಹುದು. ಇದಲ್ಲದೆ, ಪಂದ್ಯದ ಲೈವ್ ನವೀಕರಣಗಳನ್ನು tv9kannada.com ನಲ್ಲಿಯೂ ಓದಬಹುದು.

ಭಾರತ ಸಂಭಾವ್ಯ ಪ್ಲೇಯಿಂಗ್ XI: ರೋಹಿತ್‌ ಶರ್ಮಾ (ನಾಯಕ), ರಿಷಭ್ ಪಂತ್ (ಉಪ ನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್‌ ಯಾದವ್, ದಿನೇಶ್‌ ಕಾರ್ತಿಕ್, ಅಕ್ಷರ್‌ ಪಟೇಲ್, ಹರ್ಷಲ್ ಪಟೇಲ್, ದೀಪಕ್‌ ಚಾಹರ್‌, ಯುಜ್ವೇಂದ್ರ ಚಹಲ್, ಆರ್ಷದೀಪ್‌ ಸಿಂಗ್, ಮೊಹಮ್ಮದ್‌ ಸಿರಾಜ್.

ದ. ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ XI: ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿಕಾಕ್, ಹೆನ್ರಿಕ್ ಕ್ಲಾಸೆನ್, ಆ್ಯಡಂ ಮರ್ಕ್ರನ್, ಡೇವಿಡ್ ಮಿಲ್ಲರ್, ಟ್ರಿಸ್ಟನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ ಮಹಾರಾಜ್, ಕಗಿಸೊ ರಬಾಡ, ಎನ್ರಿಚ್ ನಾಕಿಯಾ, ಲುಂಗಿ ಗಿಡಿ.

Published On - 9:27 am, Tue, 4 October 22

ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ