IND vs SA 3rd T20I: ಭಾರತ-ದಕ್ಷಿಣ ಆಫ್ರಿಕಾ ನಿರ್ಣಾಯಕ ತೃತೀಯ ಟಿ20 ಪಂದ್ಯ ಯಾವಾಗ?, ಎಲ್ಲಿ?
South Africa vs India 3rd T20I Details: ಮಂಗಳವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್ಗಳ ಜಯ ಸಾಧಿಸಿ 1-0 ಮುನ್ನಡೆ ಪಡೆದುಕೊಂಡಿದೆ. ಇದೀಗ ತೃತೀಯ ಪಂದ್ಯದ ಎಲ್ಲರ ಕಣ್ಣಿದೆ. ಹಾಗಾದರೆ, ಇಂಡೋ-ಆಫ್ರಿಕಾ ಮೂರನೇ ಟಿ20 ಪಂದ್ಯ ಯಾವಾಗ?.
ದಕ್ಷಿಣ ಆಫ್ರಿಕಾ ನೆಲದಲ್ಲಿ ಗೆಲುವಿನ ಮೂಲಕ ಶುಭಾರಂಭ ಮಾಡಬೇಕು ಎಂಬ ಭಾರತ ತಂಡದ ಕನಸು ಈಡೇರಲಿಲ್ಲ. ಡರ್ಬನ್ನಲ್ಲಿ ನಡೆಯಬೇಕಿದ್ದ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾದರೆ, ಎರಡನೇ ಪಂದ್ಯದಲ್ಲಿ ಸೋಲುಂಡಿತು. ಗೆಬರ್ಹದ ಸ್ಯಾಂಟ್ ಜಾರ್ಜ್ ಪಾರ್ಕ್ನಲ್ಲಿ ಮಂಗಳವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್ಗಳ ಜಯ ಸಾಧಿಸಿತು. ಇದೀಗ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಫ್ರಿಕಾ 1-0 ಮುನ್ನಡೆ ಪಡೆದುಕೊಂಡಿದೆ. ಹೀಗಾಗಿ ತೃತೀಯ ಪಂದ್ಯದ ಎಲ್ಲರ ಕಣ್ಣಿದೆ. ಹಾಗಾದರೆ, ಇಂಡೋ-ಆಫ್ರಿಕಾ ಮೂರನೇ ಟಿ20 ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ?. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಭಾರತ- ದಕ್ಷಿಣ ಆಫ್ರಿಕಾ ಮೂರನೇ ಟಿ20 ಪಂದ್ಯ ಯಾವಾಗ?
ಡಿಸೆಂಬರ್ 14 ಗುರುವಾರದಂದು ಭಾರತ vs ದಕ್ಷಿಣ ಆಫ್ರಿಕಾ ಮೂರನೇ ಟಿ20 ಪಂದ್ಯ ನಡೆಯಲಿದೆ.
ಭಾರತ-ದಕ್ಷಿಣ ಆಫ್ರಿಕಾ ತೃತೀಯ ಟಿ20 ಪಂದ್ಯ ಎಲ್ಲಿ ಆಡಲಾಗುತ್ತದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ತೃತೀಯ ಟಿ20 ಪಂದ್ಯ ಜೊಹಾನ್ಸ್ಬರ್ಗ್ನ ನ್ಯೂ ವಂಡರರ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ-ದಕ್ಷಿಣ ಆಫ್ರಿಕಾ ಮೂರನೇ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ vs ದಕ್ಷಿಣ ಆಫ್ರಿಕಾ ತೃತೀಯ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಪಂದ್ಯಗಳನ್ನು ಆನ್‌ಲೈನ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮ್ ಮಾಡುತ್ತದೆ.
ಸೆಹ್ವಾಗ್-ದ್ರಾವಿಡ್ ಪುತ್ರರ ಮುಖಾಮುಖಿಯಲ್ಲಿ ಮಿಂಚಿದ್ದು ಯಾರು?
ಭಾರತ-ದಕ್ಷಿಣ ಆಫ್ರಿಕಾ ಮೂರನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ?
ಭಾರತ ಹಾಗೂ ದಕ್ಷಿಣ ಆಫ್ರಿಕಾ ಎರಡನೇ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8:30ಕ್ಕೆ ಆರಂಭವಾಗಲಿದೆ.
ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ಹಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್.
ದಕ್ಷಿಣ ಆಫ್ರಿಕಾ ಟಿ20 ತಂಡ: ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನೀಲ್ ಬಾರ್ಟ್‌ಮನ್, ಮ್ಯಾಥ್ಯೂ ಬ್ರಿಟ್ಜ್ಕೆ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಜಿ, ಡೊನೊವನ್ ಫೆರೀರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್,ಆಂಡಿಲೆ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್, ಲಿಜಾಡ್ ವಿಲಿಯಮ್ಸ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ