IND vs SA: ಟೀಮ್ ಇಂಡಿಯಾಗೆ ಹೊಸ ಆಟಗಾರ ಎಂಟ್ರಿ
IND vs SA: ಅಭಿಮನ್ಯು ಈಶ್ವರನ್ ಪಶ್ಚಿಮ ಬಂಗಾಳದ ಪ್ರತಿಭಾನ್ವಿತ ಆರಂಭಿಕ ಆಟಗಾರ. 2013 ರಲ್ಲಿ ಬಂಗಾಳ ತಂಡದ ಪರ ಪ್ರಥಮ ದರ್ಜೆ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ಅವರು ಸ್ಥಿರ ಪ್ರದರ್ಶನದಿಂದಾಗಿ ತ್ವರಿತವಾಗಿ ಪ್ರಭಾವಿತರಾಗಿದ್ದರು. ಅಲ್ಲದೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 47.24 ರ ಸರಾಸರಿಯಲ್ಲಿ 6,000 ಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ.
ಭಾರತ ಮತ್ತು ಸೌತ್ ಆಫ್ರಿಕಾ (India vs South Africa) ನಡುವಣ ಟೆಸ್ಟ್ ಸರಣಿಯು ಡಿಸೆಂಬರ್ 26 ರಿಂದ ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಯಿಂದ ಟೀಮ್ ಇಂಡಿಯಾದ ಯುವ ಬ್ಯಾಟರ್ ರುತುರಾಜ್ ಗಾಯಕ್ವಾಡ್ (Ruturaj Gaikwad) ಹೊರಗುಳಿದಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಕ್ಯಾಚ್ ಹಿಡಿಯುವ ಯತ್ನದಲ್ಲಿ ಅವರ ಬಲಗೈ ಬೆರಳಿಗೆ ಗಾಯವಾಗಿತ್ತು. ಈ ಗಾಯದಿಂದ ರುತುರಾಜ್ ಗಾಯಕ್ವಾಡ್ ಇನ್ನೂ ಕೂಡ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ.
ಇದೀಗ ಅವರ ಬದಲಿಗೆ ಪಶ್ಚಿಮ ಬಂಗಾಳದ ಬ್ಯಾಟರ್ ಅಭಿಮನ್ಯು ಈಶ್ವರನ್ಗೆ ಬುಲಾವ್ ನೀಡಲಾಗಿದೆ. ಪ್ರಸ್ತುತ ಭಾರತ ಎ ತಂಡದಲ್ಲಿರುವ ಅಭಿಮನ್ಯು ಸೌತ್ ಆಫ್ರಿಕಾದಲ್ಲೇ ಇದ್ದು, ಹೀಗಾಗಿ ರುತುರಾಜ್ ಬದಲಿಗೆ ಅವರನ್ನೇ ಬಿಸಿಸಿಐ ಆಯ್ಕೆ ಮಾಡಿದೆ.
ಭಾರತದ ಅಭ್ಯಾಸ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಎ ಪರ ಕಣಕ್ಕಿಳಿದಿರುವ ಈಶ್ವರನ್ 2ನೇ ದಿನದಾಟದಲ್ಲಿ ಅಜೇಯ 61 ರನ್ ಬಾರಿಸಿ ಮಿಂಚಿದ್ದರು. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ಮತ್ತೊಮ್ಮೆ ಬಂಗಾಳ ಬ್ಯಾಟರ್ಗೆ ಭಾರತ ತಂಡದ ಬಾಗಿಲು ತೆರೆದಿದೆ.
ಅಂದಹಾಗೆ ಅಭಿಮನ್ಯು ಈಶ್ವರನ್ ಈ ಹಿಂದೆಯೂ ಟೀಮ್ ಇಂಡಿಯಾ ಟೆಸ್ಟ್ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅವರಿಗೆ ಭಾರತ ತಂಡದ ಪಾದಾರ್ಪಣೆ ಮಾಡುವ ಅವಕಾಶ ದೊರೆತಿರಲಿಲ್ಲ. ಇದೀಗ ವರ್ಷಗಳ ಬಳಿಕ ಮತ್ತೆ ತಂಡದಲ್ಲಿ ಚಾನ್ಸ್ ಸಿಕ್ಕಿದ್ದು, ಈ ಬಾರಿ ಅದೃಷ್ಟ ಖುಲಾಯಿಸಲಿದೆಯಾ ಕಾದು ನೋಡಬೇಕಿದೆ.
ಪ್ರತಿಭಾನ್ವಿತ ಆರಂಭಿಕ ಆಟಗಾರ:
ಅಭಿಮನ್ಯು ಈಶ್ವರನ್ ಪಶ್ಚಿಮ ಬಂಗಾಳದ ಪ್ರತಿಭಾನ್ವಿತ ಆರಂಭಿಕ ಆಟಗಾರ. 2013 ರಲ್ಲಿ ಬಂಗಾಳ ತಂಡದ ಪರ ಪ್ರಥಮ ದರ್ಜೆ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ಅವರು ಸ್ಥಿರ ಪ್ರದರ್ಶನದಿಂದಾಗಿ ತ್ವರಿತವಾಗಿ ಪ್ರಭಾವಿತರಾಗಿದ್ದರು. ಅಲ್ಲದೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 47.24 ರ ಸರಾಸರಿಯಲ್ಲಿ 6,000 ಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ.
ಈ ಉತ್ತಮ ಪ್ರದರ್ಶನದ ಫಲವಾಗಿ ಇದೀಗ ಅಭಿಮನ್ಯುಗೆ ಮತ್ತೊಮ್ಮೆ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಕ್ಕಿದೆ. ಈ ಅವಕಾಶದೊಂದಿಗೆ ಅವರು ಭಾರತದ ಪರ ಚೊಚ್ಚಲ ಪಂದ್ಯವಾಡಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಅಭಿಮನ್ಯು ಈಶ್ವರನ್.
ಇದನ್ನೂ ಓದಿ: IPL 2024: ಬಲಿಷ್ಠ ಪಡೆ…RCB ತಂಡದ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ
ಭಾರತ-ಸೌತ್ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ:
- ಡಿಸೆಂಬರ್ 26 ರಿಂದ- ಮೊದಲ ಟೆಸ್ಟ್ ಪಂದ್ಯ (ಸೆಂಚುರಿಯನ್)
- ಜನವರಿ 3 ರಿಂದ- ಎರಡನೇ ಟೆಸ್ಟ್ ಪಂದ್ಯ (ಕೇಪ್ಟೌನ್).
Published On - 8:07 am, Sat, 23 December 23