IND vs SA: ಭಾರತ- ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ವೇಳಾಪಟ್ಟಿ ಪ್ರಕಟ; ಬೆಂಗಳೂರಿನಲ್ಲಿ ಕೊನೆಯ ಪಂದ್ಯ!

IND vs SA: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಶನಿವಾರ ತನ್ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಸರಣಿಯು ಜೂನ್ 9 ರಿಂದ ದೆಹಲಿಯಲ್ಲಿ ಪ್ರಾರಂಭವಾಗಲಿದ್ದು, ಜೂನ್ 19 ರಂದು ಬೆಂಗಳೂರಿನಲ್ಲಿ ಕೊನೆಗೊಳ್ಳಲಿದೆ.

IND vs SA: ಭಾರತ- ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ವೇಳಾಪಟ್ಟಿ ಪ್ರಕಟ; ಬೆಂಗಳೂರಿನಲ್ಲಿ ಕೊನೆಯ ಪಂದ್ಯ!
IND vs SA
Follow us
TV9 Web
| Updated By: ಪೃಥ್ವಿಶಂಕರ

Updated on:Apr 23, 2022 | 10:48 PM

ಅಂದಹಾಗೆ, ಎಲ್ಲರ ದೃಷ್ಟಿ ಐಪಿಎಲ್ 2022 (IPL 2022)ರ ಮೇಲಿದ್ದು, ಈ ಟೂರ್ನಿ ಇನ್ನೂ ಒಂದು ತಿಂಗಳು ನಡೆಯಲಿದೆ. ಅದೇನೇ ಇದ್ದರೂ, ಐಪಿಎಲ್ ನಂತರದ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಸಿದ್ಧತೆಗಳು ನಡೆಯುತ್ತಿವೆ. ಜೂನ್‌ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು (India vs South Africa) ಎದುರಿಸಲಿದ್ದು, ಇದಕ್ಕಾಗಿ ದಕ್ಷಿಣ ಆಫ್ರಿಕಾ ತಂಡ ಭಾರತಕ್ಕೆ ಭೇಟಿ ನೀಡಲಿದೆ. ಈ ಪ್ರವಾಸದಲ್ಲಿ ಉಭಯ ತಂಡಗಳ ನಡುವೆ 5 ಟಿ20 ಪಂದ್ಯಗಳು ನಡೆಯಲಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶನಿವಾರ ತನ್ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಸರಣಿಯು ಜೂನ್ 9 ರಿಂದ ದೆಹಲಿಯಲ್ಲಿ ಪ್ರಾರಂಭವಾಗಲಿದ್ದು, ಜೂನ್ 19 ರಂದು ಬೆಂಗಳೂರಿನಲ್ಲಿ ಕೊನೆಗೊಳ್ಳಲಿದೆ.

ಈ ವರ್ಷದ ಆರಂಭದಲ್ಲಿ, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೆಸ್ಟ್ ಮತ್ತು ಏಕದಿನ ಸರಣಿಗಳನ್ನು ಆಡಿದ ಭಾರತ ತಂಡವು ಕೊರೊನಾ ವೈರಸ್ ಸೋಂಕಿನಿಂದ ವೇಳಾಪಟ್ಟಿಯಲ್ಲಿ ಬದಲಾವಣೆಯಿಂದಾಗಿ ಟಿ 20 ಸರಣಿಯನ್ನು ಆಡಲು ಸಾಧ್ಯವಾಗಲಿಲ್ಲ. ಈ ಸರಣಿಯನ್ನು ಮತ್ತೆ ಆಯೋಜಿಸುವ ಯೋಜನೆ ಇತ್ತು, ಅದು ಈಗ ಜೂನ್ ತಿಂಗಳಲ್ಲಿ ನಡೆಯಲಿದೆ. ಐಪಿಎಲ್ ನಂತರ ಭಾರತ ತಂಡದ ಮೊದಲ ಅಂತಾರಾಷ್ಟ್ರೀಯ ಕಾರ್ಯಕ್ರಮ ಇದಾಗಿದೆ. ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡ ಹಲವು ಟಿ20 ಪಂದ್ಯಗಳನ್ನು ಆಡಲಿದ್ದು, ಈ ಸರಣಿಯೊಂದಿಗೆ ಆರಂಭವಾಗಲಿದೆ.

ಈ 5 ನಗರಗಳಲ್ಲಿ ಪಂದ್ಯಗಳು ನಡೆಯಲಿವೆ ಬಿಸಿಸಿಐ ಈ ಸರಣಿಯ ಪೂರ್ಣ ವೇಳಾಪಟ್ಟಿಯನ್ನು ಶನಿವಾರ ಏಪ್ರಿಲ್ 23 ರಂದು ಪ್ರಕಟಿಸಿದೆ. ವೇಳಾಪಟ್ಟಿಯ ಪ್ರಕಾರ, ಈ ಸರಣಿಯ ಪಂದ್ಯಗಳು ದೆಹಲಿ, ಕಟಕ್, ವಿಶಾಖಪಟ್ಟಣಂ, ರಾಜ್‌ಕೋಟ್ ಮತ್ತು ಬೆಂಗಳೂರಿನಲ್ಲಿ ನಡೆಯಲಿವೆ. ಜೂನ್ 9 ರಿಂದ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸರಣಿ ಆರಂಭವಾಗಲಿದೆ.

IND vs SA T20 ಸರಣಿಯ ಪೂರ್ಣ ವೇಳಾಪಟ್ಟಿ

ಜೂನ್ 9, 1ನೇ ಟಿ20 – ದೆಹಲಿ

ಜೂನ್ 12, 2 ನೇ ಟಿ20 – ಕಟಕ್

ಜೂನ್ 14, 3ನೇ ಟಿ20 – ವಿಶಾಖಪಟ್ಟಣ

ಜೂನ್ 17, 4 ನೇ ಟಿ20 – ರಾಜ್ಕೋಟ್

ಜೂನ್ 19, 5 ನೇ ಟಿ20 – ಬೆಂಗಳೂರು

ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸ ಈ ಸರಣಿಯ ನಂತರ ಭಾರತ ತಂಡ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಹೆಚ್ಚಿನ ಟಿ20 ಪಂದ್ಯಗಳನ್ನು ಆಡಲಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡ ಕಳೆದ ವರ್ಷದ ಟೆಸ್ಟ್ ಸರಣಿಯ ಕೊನೆಯ ಪಂದ್ಯವನ್ನು ಆಡಲಿದ್ದು, 3 ODI ಮತ್ತು 3 T20 ಪಂದ್ಯಗಳನ್ನು ಸಹ ಆಡಲಿದೆ. ಇದಾದ ಬಳಿಕ ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ 3 ಟಿ20 ಪಂದ್ಯಗಳನ್ನು ಆಡಲಿದೆ. ಈ ಪಂದ್ಯಗಳು ವಿಶ್ವಕಪ್‌ಗೆ ಸಿದ್ಧತೆಯ ದೃಷ್ಟಿಯಿಂದ ಬಹಳ ಮಹತ್ವದ್ದಾಗಿದೆ. ಭಾರತ ತಂಡ ಈ ವರ್ಷ ಅಕ್ಟೋಬರ್ 23 ರಂದು ಮೆಲ್ಬೋರ್ನ್‌ನಲ್ಲಿ ಪಾಕಿಸ್ತಾನದ ವಿರುದ್ಧ ತನ್ನ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ. ಕಳೆದ ವರ್ಷವೂ ಭಾರತ ಮತ್ತು ಪಾಕಿಸ್ತಾನದ ನಡುವೆ ಗುಂಪು ಹಂತದ ಮೊದಲ ಪಂದ್ಯ ನಡೆದಿತ್ತು, ಇದರಲ್ಲಿ ಪಾಕಿಸ್ತಾನವು ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿತ್ತು. ವಿಶ್ವಕಪ್ ಇತಿಹಾಸದಲ್ಲಿ ಭಾರತ ವಿರುದ್ಧ ಪಾಕಿಸ್ತಾನದ ಮೊದಲ ಜಯ ಇದಾಗಿದೆ.

ಇದನ್ನೂ ಓದಿ:IPL 2022: ಮೇ 29 ರಂದು ಅಹಮದಾಬಾದ್​ನಲ್ಲಿ ಫೈನಲ್! ಐಪಿಎಲ್ ಪ್ಲೇ ಆಫ್ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

Published On - 10:09 pm, Sat, 23 April 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ