AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: 642 ಎಸೆತಗಳಿಗೆ ಮುಕ್ತಾಯ; 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಹೊಸ ದಾಖಲೆ

IND vs SA: ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಸರಣಿಯ ಎರಡನೇ ಟೆಸ್ಟ್ ಪಂದ್ಯ ಎರಡನೇ ದಿನದ ಎರಡನೇ ಸೆಷನ್‌ನಲ್ಲಿ ಅಂತ್ಯಗೊಂಡಿದೆ. ಈ ಮೂಲಕ 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಬೇಗ ಮುಗಿದ ಟೆಸ್ಟ್ ಪಂದ್ಯ ಎನಿಸಿಕೊಂಡಿದೆ.

IND vs SA: 642 ಎಸೆತಗಳಿಗೆ ಮುಕ್ತಾಯ; 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಹೊಸ ದಾಖಲೆ
ಭಾರತ- ದಕ್ಷಿಣ ಆಫ್ರಿಕಾ
ಪೃಥ್ವಿಶಂಕರ
|

Updated on:Jan 04, 2024 | 9:12 PM

Share

ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವೆ ನಡೆದ ಸರಣಿಯ ಎರಡನೇ ಟೆಸ್ಟ್ ಪಂದ್ಯ ಎರಡನೇ ದಿನದ ಎರಡನೇ ಸೆಷನ್‌ನಲ್ಲಿ ಅಂತ್ಯಗೊಂಡಿದೆ. ಈ ಮೂಲಕ 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಬೇಗ ಮುಗಿದ (ಚೆಂಡುಗಳ ವಿಚಾರದಲ್ಲಿ) ಟೆಸ್ಟ್ ಪಂದ್ಯ ಎನಿಸಿಕೊಂಡಿದೆ. 1877 ರಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಆಡಲಾಯಿತು. ಅಲ್ಲಿಂದ 2024ರ ವರೆಗೆ ಟೆಸ್ಟ್ ಪಂದ್ಯವೊಂದು ಕೇವಲ 642 ಎಸೆತಗಳಲ್ಲಿ ಅಂತ್ಯಗೊಂಡಿದ್ದು ಇದೇ ಮೊದಲು. ಈ ಪಂದ್ಯದಲ್ಲಿ ಕೇವಲ 107 ಓವರ್‌ಗಳನ್ನು ಮಾತ್ರ ಬೌಲ್ ಮಾಡಲಾಯಿತು. ವಾಸ್ತವವಾಗಿ ಏಕದಿನ ಪಂದ್ಯದಲ್ಲಿ ಉಭಯ ತಂಡಗಳಿಂದ 100 ಓವರ್‌ಗಳನ್ನು ಬೌಲ್ ಮಾಡಲಾಗುತ್ತದೆ. ಇದರರ್ಥ ಈ ಪಂದ್ಯ ಕೂಡ ಬಹುತೇಕ ಏಕದಿನ ಪಂದ್ಯದಂತೆ ಇತ್ತು.

92 ವರ್ಷಗಳ ಹಳೆಯ ದಾಖಲೆ ಉಡೀಸ್

ಟೆಸ್ಟ್ ಪಂದ್ಯವೊಂದು ಅತಿ ಕಡಿಮೆ ಅವಧಿಗೆ ಅಂತ್ಯಗೊಂಡಿರುವುದು ಟೆಸ್ಟ್ ಇತಿಹಾಸದಲ್ಲಿ ಇದೇ ಮೊದಲು. ಇದಕ್ಕೂ ಮುನ್ನ 1932ರಲ್ಲಿ ಅಂದರೆ 92 ವರ್ಷಗಳ ಹಿಂದೆ ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಪಂದ್ಯ ಕೇವಲ 656 ಎಸೆತಗಳಲ್ಲಿ ಮುಕ್ತಾಯವಾಗಿತ್ತು. ಇದೀಗ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಕೇಪ್ ಟೌನ್ ಟೆಸ್ಟ್ ಕೇವಲ 642 ಎಸೆತಗಳಲ್ಲಿ ಪೂರ್ಣಗೊಂಡಿದೆ. ಇಷ್ಟು ಬೇಗ ಮುಗಿದ ಈ ಶತಮಾನದ ಮೊದಲ ಟೆಸ್ಟ್ ಪಂದ್ಯ ಇದಾಗಿದೆ.

IND vs SA: ಐತಿಹಾಸಿಕ ಗೆಲುವಿನೊಂದಿಗೆ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಭಾರತ..!

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ವೇಗವಾಗಿ ಮುಗಿದ ಪಂದ್ಯಗಳು

  • 642 ಚೆಂಡುಗಳು- ಭಾರತ vs ದಕ್ಷಿಣ ಆಫ್ರಿಕಾ, ಕೇಪ್ ಟೌನ್, 2024
  • 656 ಎಸೆತಗಳು- ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ, ಮೆಲ್ಬೋರ್ನ್, 1932
  • 672 ಎಸೆತಗಳು- ವೆಸ್ಟ್ ಇಂಡೀಸ್ vs ಇಂಗ್ಲೆಂಡ್, ಬ್ರಿಡ್ಜ್‌ಟೌನ್, 1935
  • 788 ಎಸೆತಗಳು- ಇಂಗ್ಲೆಂಡ್ vs ಆಸ್ಟ್ರೇಲಿಯಾ, ಮ್ಯಾಂಚೆಸ್ಟರ್, 1888
  • 792 ಎಸೆತಗಳು- ಇಂಗ್ಲೆಂಡ್ vs ಆಸ್ಟ್ರೇಲಿಯಾ, ಲಾರ್ಡ್ಸ್, 1888

ಕೇಪ್‌ಟೌನ್‌ನಲ್ಲಿ ಭಾರತಕ್ಕೆ ಮೊದಲ ಜಯ

ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್‌ನಲ್ಲಿ ನಡೆದ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಮೊದಲ ಬಾರಿಗೆ ಗೆದ್ದಿದೆ. 1993ರಲ್ಲಿ ಭಾರತ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಇಲ್ಲಿ ಆಡಿತ್ತು. ಇದೀಗ 31 ವರ್ಷಗಳ ಬಳಿಕ ಇಲ್ಲಿ ಏಳನೇ ಪಂದ್ಯ ಆಡುತ್ತಿರುವ ಟೀಂ ಇಂಡಿಯಾ ಮೊದಲ ಗೆಲುವು ಸಾಧಿಸಿದೆ. ಭಾರತ ಮಾತ್ರವಲ್ಲ, ನ್ಯೂಲ್ಯಾಂಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಷ್ಯಾದ ಯಾವುದೇ ತಂಡಕ್ಕೆ ಇದು ಮೊದಲ ಟೆಸ್ಟ್ ಗೆಲುವು. ಈ ಪಂದ್ಯವನ್ನು ಭಾರತ ತಂಡ 7 ವಿಕೆಟ್‌ಗಳಿಂದ ಗೆದ್ದುಕೊಂಡಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಕೇವಲ 55 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಭಾರತದ ಪರ ಮೊದಲ ಇನಿಂಗ್ಸ್‌ನಲ್ಲಿ ಸಿರಾಜ್ 6 ವಿಕೆಟ್ ಪಡೆದಿದ್ದರು. ನಂತರ ಎರಡನೇ ಇನ್ನಿಂಗ್ಸ್‌ನಲ್ಲಿ ಬುಮ್ರಾ 6 ವಿಕೆಟ್ ಪಡೆದರೆ, ಆಫ್ರಿಕಾ ಪರ ಏಡೆನ್ ಮಾರ್ಕ್ರಂ ಶತಕ ಬಾರಿಸಿ ಮಿಂಚಿದರು. ಆಫ್ರಿಕಾ ನೀಡಿದ 79 ರನ್​ಗಳ ಗುರಿಯನ್ನು ಭಾರತ 3 ವಿಕೆಟ್ ಕಳೆದುಕೊಂಡು ಸಾಧಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:11 pm, Thu, 4 January 24

ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು