AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಕೊರೊನಾತಂಕ; ಭಾರತ- ಆಫ್ರಿಕಾ ಪಂದ್ಯಗಳಿಗೆ ಪ್ರೇಕ್ಷಕರಿಗಿಲ್ಲ ಅವಕಾಶ! ಮಂಡಳಿ ಅಧಿಕೃತ ಆದೇಶ

IND vs SA: ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ಆಫ್ರಿಕನ್ ಸರ್ಕಾರವು ಇತ್ತೀಚೆಗೆ 2000 ಜನರಿಗೆ ಕ್ರೀಡಾಂಗಣಕ್ಕೆ ಬರಲು ಅವಕಾಶ ನೀಡಿತ್ತು. ಆದರೆ ಈಗ ಆಟಗಾರರ ಸುರಕ್ಷತೆ ದೃಷ್ಟಿಯಿಂದ ಮಂಡಳಿ ಈ ನಿರ್ಧಾರ ಕೈಗೊಳ್ಳುತ್ತಿದೆ.

IND vs SA: ಕೊರೊನಾತಂಕ; ಭಾರತ- ಆಫ್ರಿಕಾ ಪಂದ್ಯಗಳಿಗೆ ಪ್ರೇಕ್ಷಕರಿಗಿಲ್ಲ ಅವಕಾಶ! ಮಂಡಳಿ ಅಧಿಕೃತ ಆದೇಶ
ಟೀಂ ಇಂಡಿಯಾ
TV9 Web
| Updated By: ಪೃಥ್ವಿಶಂಕರ|

Updated on: Dec 20, 2021 | 9:14 PM

Share

ಭಾರತದ ದಕ್ಷಿಣ ಆಫ್ರಿಕಾ ಪ್ರವಾಸದ ಎಲ್ಲಾ ಪಂದ್ಯಗಳು ಖಾಲಿ ಕ್ರೀಡಾಂಗಣಗಳಲ್ಲಿ ನಡೆಯಲಿವೆ. ದಕ್ಷಿಣ ಆಫ್ರಿಕಾದಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಆಟಗಾರರು ಎಲ್ಲಾ ರೀತಿಯಲ್ಲೂ ಸುರಕ್ಷಿತವಾಗಿರಲು ದಕ್ಷಿಣ ಆಫ್ರಿಕಾ ಕ್ರಿಕೆಟ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಪ್ರವಾಸದಲ್ಲಿ ಭಾರತ ತಂಡ ಮೂರು ಟೆಸ್ಟ್ ಪಂದ್ಯಗಳು ಮತ್ತು ಮೂರು ಏಕದಿನ ಪಂದ್ಯಗಳ ಸರಣಿಯನ್ನು ಆಡಬೇಕಿದೆ. ದಕ್ಷಿಣ ಆಫ್ರಿಕಾದಲ್ಲಿ ಓಮಿಕ್ರಾನ್ ಪ್ರಕರಣಗಳಲ್ಲಿ ತ್ವರಿತ ಹೆಚ್ಚಳದಿಂದಾಗಿ ಕ್ರಿಕೆಟ್ ದಕ್ಷಿಣ ಆಫ್ರಿಕಾ (CSA) ಯಾವುದೇ ಅಪಾಯವನ್ನು ತೆಗೆದುಕೊಳ್ಳಲು ಬಯಸುವುದಿಲ್ಲ. ಈ ಕಾರಣಕ್ಕಾಗಿ, ಪಂದ್ಯಗಳ ಸಮಯದಲ್ಲಿ ಪ್ರೇಕ್ಷಕರಿಗೆ ಮೈದಾನಕ್ಕೆ ಪ್ರವೇಶಿಸಲು ಅನುಮತಿ ನೀಡಲು ನಿರಾಕರಿಸಿದೆ.

ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ಆಫ್ರಿಕನ್ ಸರ್ಕಾರವು ಇತ್ತೀಚೆಗೆ 2000 ಜನರಿಗೆ ಕ್ರೀಡಾಂಗಣಕ್ಕೆ ಬರಲು ಅವಕಾಶ ನೀಡಿತ್ತು. ಆದರೆ ಈಗ ಆಟಗಾರರ ಸುರಕ್ಷತೆ ದೃಷ್ಟಿಯಿಂದ ಮಂಡಳಿ ಈ ನಿರ್ಧಾರ ಕೈಗೊಳ್ಳುತ್ತಿದೆ. ಟೀಮ್ ಇಂಡಿಯಾಕ್ಕೂ ಮುನ್ನ ಭಾರತ ಎ ತಂಡವೂ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿತ್ತು. ಅವರ ಸುರಕ್ಷಿತ ಪ್ರವಾಸದ ನಂತರವೇ ಬಿಸಿಸಿಐ ಟೀಂ ಇಂಡಿಯಾವನ್ನು ಅಲ್ಲಿಗೆ ಕಳುಹಿಸಲು ನಿರ್ಧರಿಸಿದೆ.

ಸರಣಿಗೆ ಟೀಂ ಇಂಡಿಯಾ ಸಿದ್ಧತೆ ಆರಂಭಿಸಿದೆ ಭಾರತೀಯ ತಂಡವು ತನ್ನ ಮೊದಲ ಅಭ್ಯಾಸವನ್ನು ಡಿಸೆಂಬರ್ 18 ರಂದು ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ನಡೆಸಿತು. ಸತತ ಮೂರು ದಿನಗಳ ಕಾಲ ಭಾರತ ತಂಡ ಮೊದಲ ಟೆಸ್ಟ್‌ಗೆ ಸಿದ್ಧತೆ ನಡೆಸುತ್ತಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಭಾರತೀಯ ಆಟಗಾರರು ಶ್ರಮಿಸುತ್ತಿದ್ದಾರೆ. ಕೊಹ್ಲಿ ಕೂಡ ಸಾಕಷ್ಟು ಬ್ಯಾಟಿಂಗ್ ಅಭ್ಯಾಸ ನಡೆಸಿದ್ದರೆ, ಹಿರಿಯ ಆಟಗಾರರಾದ ಚೇತೇಶ್ವರ ಪೂಜಾರ, ಇಶಾಂತ್ ಶರ್ಮಾ ಕೂಡ ಬೆವರಿಳಿಸಿದ್ದಾರೆ.