IND Vs SA: ಟೀಮ್ ಇಂಡಿಯಾಗೆ ಎಚ್ಚರಿಕೆ ನೀಡಿದ ಸೌತ್ ಆಫ್ರಿಕಾ ನಾಯಕ..!

India vs South Africa 3rd Test: 2ನೇ ಟೆಸ್ಟ್ ಪಂದ್ಯದಲ್ಲಿ ನನ್ನ 96 ರನ್​ಗಳ ಹೊರತಾಗಿ, ರಸ್ಸಿ ವಂಡೆರ್ ಡುಸ್ಸೆನ್ ಮತ್ತು ಟೆಂಬಾ ಬವುಮಾ ಅವರು ಸಹ ಉತ್ತಮವಾಗಿ ಬ್ಯಾಟ್ ಮಾಡಿದ್ದಾರೆ. ಅಂದರೆ ನಮ್ಮ ಬ್ಯಾಟಿಂಗ್ ಮತ್ತು ಬೌಲಿಂಗ್​ ಉತ್ತಮ ಫಾರ್ಮ್​ನಲ್ಲಿದೆ.

IND Vs SA: ಟೀಮ್ ಇಂಡಿಯಾಗೆ ಎಚ್ಚರಿಕೆ ನೀಡಿದ ಸೌತ್ ಆಫ್ರಿಕಾ ನಾಯಕ..!
Dean Elgar
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 09, 2022 | 3:41 PM

ಭಾರತ-ದಕ್ಷಿಣ ಆಫ್ರಿಕಾ (India vs South Africa) ನಡುವಣ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಜನವರಿ 11 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದ್ದು, ಹೀಗಾಗಿ ಕೇಪ್​ ಟೌನ್​ನಲ್ಲಿ ನಡೆಯಲಿರುವ ಮೂರನೇ ಪಂದ್ಯವು ಸರಣಿಯ ಫಲಿತಾಂಶವನ್ನು ನಿರ್ಧರಿಸಲಿದೆ. ಆದರೆ ಈ ನಿರ್ಣಾಯಕ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ದಕ್ಷಿಣ ಆಫ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ಎಚ್ಚರಿಕೆ ರವಾನಿಸಿದ್ದಾರೆ. ಮೂರನೇ ಪಂದ್ಯದಲ್ಲೂ ನಾವು ಟೀಮ್ ಇಂಡಿಯಾಗೆ ಸೋಲುಣಿಸಿ ಸರಣಿ ವಶಪಡಿಸಿಕೊಳ್ಳಲಿದ್ದೇವೆ ಎಂದಿರುವ ಎಲ್ಗರ್, ಟೀಮ್ ಇಂಡಿಯಾ (Team India) ಆಟಗಾರರನ್ನು ಕಟ್ಟಿಹಾಕಬಲ್ಲ ಬೌಲರುಗಳು ನಮ್ಮಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಡೀನ್ ಎಲ್ಗರ್ ಹೀಗೆ ಹೇಳಲು ಮುಖ್ಯ ಕಾರಣ ದಕ್ಷಿಣ ಆಫ್ರಿಕಾ ವೇಗಿ ಕಗಿಸೊ ರಬಾಡ. ಕೇಪ್​ ಟೌನ್​ ಪಿಚ್​ನಲ್ಲಿ ರಬಾಡ ಅತ್ಯತ್ತಮ ದಾಖಲೆ ಹೊಂದಿದ್ದಾರೆ. ಈ ಮೈದಾನದಲ್ಲಿ 6 ಟೆಸ್ಟ್ ಪಂದ್ಯಗಳಲ್ಲಿ ರಬಾಡ 35 ವಿಕೆಟ್ ಪಡೆದಿದ್ದು, ಇದೀಗ ಈ ಸರಣಿಯಲ್ಲೂ ಇದುವರೆಗೆ 13 ವಿಕೆಟ್ ಕಬಳಿಸಿದ್ದಾರೆ. ಇನ್ನು ರಬಾಡ ಜೊತೆ ಲುಂಗಿ ಎನ್‌ಗಿಡಿ, ಮಾರ್ಕೊ ಯಾನ್ಸೆನ್ ಮತ್ತು ಡುವಾನ್ ಒಲಿವಿಯರ್ ಕೂಡ ಕೇಪ್​ ಟೌನ್​ನ ಬೌನ್ಸಿ ಪಿಚ್​ನಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳನ್ನು ಕಾಡುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿ ಟೀಮ್ ಇಂಡಿಯಾ ವಿರುದ್ದ ನಾವು ಗೆದ್ದೇ ಗೆಲುತ್ತೇವೆ ಎಂಬ ವಿಶ್ವಾಸದಲ್ಲಿದ್ದಾರೆ ಸೌತ್ ಆಫ್ರಿಕಾ ಕ್ಯಾಪ್ಟನ್ ಡೀನ್ ಎಲ್ಗರ್.

ಅಷ್ಟೇ ಅಲ್ಲದೆ 2ನೇ ಟೆಸ್ಟ್ ಪಂದ್ಯದಲ್ಲಿ ನನ್ನ 96 ರನ್​ಗಳ ಹೊರತಾಗಿ, ರಸ್ಸಿ ವಂಡೆರ್ ಡುಸ್ಸೆನ್ ಮತ್ತು ಟೆಂಬಾ ಬವುಮಾ ಅವರು ಸಹ ಉತ್ತಮವಾಗಿ ಬ್ಯಾಟ್ ಮಾಡಿದ್ದಾರೆ. ಅಂದರೆ ನಮ್ಮ ಬ್ಯಾಟಿಂಗ್ ಮತ್ತು ಬೌಲಿಂಗ್​ ಉತ್ತಮ ಫಾರ್ಮ್​ನಲ್ಲಿದೆ. ಹೀಗಾಗಿ ಅನನುಭವಿ ತಂಡವಾಗಿರುವ ನಾವು ಅಂತಿಮ ಟೆಸ್ಟ್‌ನಲ್ಲಿ ಉತ್ಸಾಹದಿಂದ ಕಣಕ್ಕಿಳಿಯಲಿದ್ದೇವೆ ಎಂದು ಎಲ್ಗರ್ ತಿಳಿಸಿದ್ದಾರೆ.

ನಾವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿರುವ ಕಾರಣ ಆಟಗಾರರ ಆತ್ಮವಿಶ್ವಾಸ ಕೂಡ ಹೆಚ್ಚಾಗಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸರಣಿಯ ನಿರ್ಣಾಯಕ ಮತ್ತು ಅಂತಿಮ ಟೆಸ್ಟ್ ಮಂಗಳವಾರದಿಂದ ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್‌ನಲ್ಲಿ ಆರಂಭವಾಗಲಿದ್ದು, ಅದಕ್ಕೂ ಮುನ್ನ ಸಣ್ಣ ಪುಟ್ಟ ಸುಧಾರಣೆಗೆ ಅವಕಾಶವಿದೆ. ನಮ್ಮ ಗಮನವು ಕೆಲವು ವಿಭಾಗಗಳ ಮೇಲಿದ್ದು, ಕೇಪ್ ಟೌನ್ ಟೆಸ್ಟ್‌ಗೆ ಮೊದಲು ನಾವು ಅವುಗಳ ಮೇಲೆ ಹೆಚ್ಚು ಗಮನ ಹರಿಸಲಿದ್ದೇವೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಜೋಹಾನ್ಸ್​ಬರ್ಗ್​ನಲ್ಲಿ ಆಡಿದ ಬಳಗವೇ ಕೇಪ್​ ಟೌನ್​ನಲ್ಲೂ ಕಣಕ್ಕಿಳಿಯಲಿದೆ ಎಂಬ ಸೂಚನೆಯನ್ನೂ ಸಹ ಡೀನ್ ಎಲ್ಗರ್ ನೀಡಿದ್ದಾರೆ.

ಟೀಮ್ ಇಂಡಿಯಾ ಪಾಲಿಗೆ ಕೇಪ್​ ಟೌನ್ ದೊಡ್ಡ ಸವಾಲು: ಭಾರತ ತಂಡ (ಟೀಮ್ ಇಂಡಿಯಾ) ಇದುವರೆಗೆ ಕೇಪ್ ಟೌನ್‌ನಲ್ಲಿ 5 ಪಂದ್ಯಗಳನ್ನು ಆಡಿದೆ. ಆದರೆ ಒಮ್ಮೆಯೂ ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ. ಇದಾಗ್ಯೂ ಈ ಮೈದಾನದಲ್ಲಿ ಭಾರತ ಎರಡು ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ. ಇನ್ನು ಮೂರರಲ್ಲಿ ಹೀನಾಯ ಸೋಲು ಕಂಡಿರುವುದು ವಿಶೇಷ. ಇನ್ನು ಕಳೆದ ಬಾರಿ ಅಂದರೆ 2018 ರಲ್ಲಿ ಈ ಮೈದಾನದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ದ 72 ರನ್‌ಗಳಿಂದ ಸೋಲನುಭವಿಸಿತ್ತು.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: Steve Smith: 11 ಶತಕ, 11 ಅರ್ಧಶತಕ: ವಿಶೇಷ ದಾಖಲೆ ಬರೆದ ಸ್ಟೀವ್ ಸ್ಮಿತ್

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(IND Vs SA: Dean Elgar Warns Team India Before Cape Town Test)

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ