2024 ರ ಟಿ20 ವಿಶ್ವಕಪ್‌ನ ಫೈನಲ್‌ಗೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಜೂನ್ 29 ರಂದು ಶನಿವಾರ ನಡೆಯಲಿರುವ ಬ್ಲಾಕ್‌ಬಸ್ಟರ್ ಪ್ರಶಸ್ತಿ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಲಿವೆ. ಕೆನ್ಸಿಂಗ್ಟನ್ ಓವಲ್ ಮೈದಾನವು ಎರಡು ಅಜೇಯ ತಂಡಗಳ ನಡುವಿನ ಮುಖಾಮುಖಿಗೆ ಸಾಕ್ಷಿಯಾಗಲಿದೆ. ದಕ್ಷಿಣ ಆಫ್ರಿಕಾ ತಂಡ ಟಿ20 ವಿಶ್ವಕಪ್ ಪ್ರಶಸ್ತಿ ಗೆಲ್ಲಲು ಮೊದಲ ಬಾರಿಗೆ ಮೈದಾನಕ್ಕಿಳಿಯಲಿದ್ದರೆ, 11 ವರ್ಷಗಳಿಂದ ಕಾಡುತ್ತಿರುವ ಐಸಿಸಿ ಟ್ರೋಫಿ ಬರ ನೀಗಿಸಲು ಟೀಂ ಇಂಡಿಯಾ ಕಣ್ಣಿಟ್ಟಿದೆ. ಇನ್ನು ಈ ಪ್ರಶಸ್ತಿ ಪಂದ್ಯಕ್ಕೆ ಐಸಿಸಿ ಪಂದ್ಯ ದ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಐಸಿಸಿ ಅಧಿಕಾರಿಗಳನ್ನು ನೇಮಿಸಿದೆ. ಅದರಂತೆ ನ್ಯೂಜಿಲೆಂಡ್‌ನ ಕ್ರಿಸ್ ಗಫ್ನಿ ಮತ್ತು ಇಂಗ್ಲೆಂಡ್‌ನ ರಿಚರ್ಡ್ ಇಲ್ಲಿಂಗ್‌ವರ್ತ್ ಫೈನಲ್ ಪಂದ್ಯದಲ್ಲಿ ಆನ್-ಫೀಲ್ಡ್ ಅಂಪೈರ್‌ಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಅಂಪೈರ್ ರಿಚರ್ಡ್ ಕೆಟಲ್‌ಬರೋ ಅವರನ್ನು ಮೂರನೇ ಅಂಪೈರ್ ಆಗಿ ನೇಮಿಸಲಾಗಿದೆ. ಆಸ್ಟ್ರೇಲಿಯಾದ ರಾಡ್ ಟಕರ್ ನಾಲ್ಕನೇ ಅಂಪೈರ್ ಆಗಿ ಆಯ್ಕೆಯಾಗಿದ್ದಾರೆ.
LOCKED IN 🔒 🏆
Details confirmed ahead of the #T20WorldCup Final 👇https://t.co/5h1FaifcIZ
— ICC (@ICC) June 28, 2024
ರಿಚರ್ಡ್ ಕೆಟಲ್‌ಬರೋ ಮತ್ತು ರಿಚರ್ಡ್ ಇಲ್ಲಿಂಗ್‌ವರ್ತ್, ಆ ಇಬ್ಬರೂ ಫೈನಲ್ ಪಂದ್ಯಕ್ಕೆ ಅಂಪೈರ್ಗಳಾಗಿರುವುದು ಅಭಿಮಾನಿಗಳಿಗೆ ಹಾಗೂ ತಂಡಕ್ಕೆ ಆತಂಕವನ್ನುಂಟು ಮಾಡಿದೆ. ಇದಕ್ಕೆ ಕಾರಣವೂ ಇದ್ದು, ರಿಚರ್ಡ್ ಕೆಟಲ್‌ಬರೋ ಅಂಪೈರಿಂಗ್ ಮಾಡಿದ ಎಲ್ಲಾ 6 ನಾಕೌಟ್ ಪಂದ್ಯಗಳಲ್ಲಿ ಟೀಂ ಇಂಡಿಯಾ ಸೋಲನ್ನು ಎದುರಿಸಿದೆ. ಇದರಲ್ಲಿ 2014ರ ಟಿ20 ವಿಶ್ವಕಪ್ ಫೈನಲ್, 2016ರ ಟಿ20 ವಿಶ್ವಕಪ್ ಸೆಮಿಫೈನಲ್, 2015ರ ವಿಶ್ವಕಪ್ ಸೆಮಿಫೈನಲ್, 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್, 2019ರ ವಿಶ್ವಕಪ್ ಸೆಮಿಫೈನಲ್ ಮತ್ತು 2023ರ ವಿಶ್ವಕಪ್ ಫೈನಲ್ ಸೇರಿವೆ.
ಇನ್ನು ರಿಚರ್ಡ್ ಇಲ್ಲಿಂಗ್‌ವರ್ತ್ ಬಗ್ಗೆ ಹೇಳಬೆಕೆಂದರೆ ಈ ಬಾರಿಯ ಟಿ20 ವಿಶ್ವಕಪ್ಗೂ ಮೊದಲು, ಇಲ್ಲಿಂಗ್‌ವರ್ತ್ ಅಂಪೈರ್ ಆಗಿದ್ದ ಪ್ರಮುಖ ಪಂದ್ಯಗಳಲ್ಲಿ ಭಾರತ ಸೋತಿದೆ. ಅದರಲ್ಲಿ 2019 ರ ವಿಶ್ವಕಪ್ ಸೆಮಿಫೈನಲ್, 2021 ರ ವಿಶ್ವ ಟೆಸ್ಟ್ ಚಾಂಪಿಯನ್ಶಿಫ್ ಫೈನಲ್ ಹಾಗೂ 2023 ರ ವಿಶ್ವ ಟೆಸ್ಟ್ ಚಾಂಪಿಯನ್ಶಿಫ್ ಫೈನಲ್ ಪಂದ್ಯಗಳು ಸೇರಿವೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:52 pm, Fri, 28 June 24