IND vs SA, ICC World Cup: ವಿಶ್ವಕಪ್ನಲ್ಲಿ ಸೆಮಿ ಫೈನಲ್ಗೆ ಲಗ್ಗೆಯಿಟ್ಟ ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?
Team India Next Match in ICC World Cup 2023: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಕ್ರಿಕೆಟ್ ತಂಡ ಆಡಿದ ಏಳು ಪಂದ್ಯಗಳ ಪೈಕಿ ಏಳರಲ್ಲೂ ಗೆದ್ದು ಸೆಮಿ ಫೈನಲ್ಗೆ ಪ್ರವೇಶ ಪಡೆದಿದೆ. ಆದರೆ, ರೋಹಿತ್ ಪಡೆಗೆ ಇನ್ನೂ ಎರಡು ಪಂದ್ಯಗಳು ಬಾಕಿಯಿದೆ. ಹಾಗಾದರೆ ವಿಶ್ವಕಪ್ನಲ್ಲಿ ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ ಆಡಲಿದೆ?.
ಭಾರತ ಕ್ರಿಕೆಟ್ ತಂಡ (Indian Cricket Team) ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಸೆಮಿ ಫೈನಲ್ಗೆ ಪ್ರವೇಶ ಪಡೆದಿದೆ. ಗುರುವಾರ ವಾಂಖೆಡೆಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ದಾಖಲೆಯ 302 ರನ್‌ಗಳ ಗೆಲುವು ಸಾಧಿಸಿ ಸೆಮೀಸ್ಗೆ ಲಗ್ಗೆಯಿಟ್ಟ ಮೊದಲ ತಂಡವಾಯಿತು. ಟೀಮ್ ಇಂಡಿಯಾ ಈ ಬಾರಿಯ ವಿಶ್ವಕಪ್ನಲ್ಲಿ ಆಡಿದ ಏಳು ಪಂದ್ಯಗಳ ಪೈಕಿ ಏಳರಲ್ಲೂ ಗೆದ್ದು ತನ್ನ ಅಜೇಯ ಗೆಲುವಿನ ಓಟವನ್ನು ಮುಂದುವರೆಸಿದೆ. ಸೆಮಿ ಫೈನಲ್ ಪ್ರವೇಶಿಸಿದ್ದರೂ ರೋಹಿತ್ ಪಡೆಗೆ ಇನ್ನೂ ಎರಡು ಪಂದ್ಯಗಳು ಬಾಕಿಯಿದೆ. ಹಾಗಾದರೆ ವಿಶ್ವಕಪ್ನಲ್ಲಿ ಭಾರತದ 8ನೇ ಪಂದ್ಯ ಯಾವಾಗ?, ಯಾರ ವಿರುದ್ಧ ಆಡಲಿದೆ? ಎಂಬುದನ್ನು ನೋಡೋಣ.
ವಿಶ್ವಕಪ್ನಲ್ಲಿ ಭಾರತದ ಮುಂದಿನ ಎದುರಾಳಿ ಯಾರು?
ವಿಶ್ವಕಪ್ನಲ್ಲಿ ಭಾರತ ಮುಂದಿನ ಪಂದ್ಯವನ್ನು ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ನವೆಂಬರ್ 5 ರಂದು (ಭಾನುವಾರ) ನಡೆಯಲಿದೆ.
Virat Kohli: ಶತಕ ಜಸ್ಟ್ ಮಿಸ್..ಆದ್ರೂ 6 ದಾಖಲೆ ಬರೆದ ಕಿಂಗ್ ಕೊಹ್ಲಿ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡರ್ನ್ಸ್ ಮೈದಾನದಲ್ಲಿ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ನೀವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡುಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ ಕಗಿಸೊ ರಬಾಡ, ಲಿಜಾಡ್ ವಿಲಿಯಮ್ಸ್ ಹೆಂಡ್ರಿಕ್ಸ್, ಆಂಡಿಲೆ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ