Breaking: ಕ್ರಿಕೆಟ್ ಕಾಶಿಯಲ್ಲಿ ಭಾರತದ ಹುಲಿಗಳ ಅಬ್ಬರ; 243 ರನ್​ಗಳಿಂದ ಸೋತ ಆಫ್ರಿಕಾ..!

IND vs SA, ICC World Cup 2023: ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಹೈವೋಲ್ಟೇಜ್ ಕದನ ಏಕಪಕ್ಷೀಯವಾಗಿ ಅಂತ್ಯಗೊಂಡಿದೆ. ಭಾರತದ ಹುಲಿಗಳ ಅಬ್ಬರಕ್ಕೆ ನಡುಗಿದ ಹರಿಣಗಳು ಕೇವಲ 83 ರನ್​ಗಳಿಗೆ ಆಲೌಟ್ ಆಗುವ ಮೂಲಕ ಬರೋಬ್ಬರಿ 243 ರನ್​ಗಳಿಂದ ಸೋಲು ಕಂಡಿದೆ.

Breaking: ಕ್ರಿಕೆಟ್ ಕಾಶಿಯಲ್ಲಿ ಭಾರತದ ಹುಲಿಗಳ ಅಬ್ಬರ; 243 ರನ್​ಗಳಿಂದ ಸೋತ ಆಫ್ರಿಕಾ..!
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Nov 05, 2023 | 9:08 PM

ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಿನ ಹೈವೋಲ್ಟೇಜ್ ಕದನ ಏಕಪಕ್ಷೀಯವಾಗಿ ಅಂತ್ಯಗೊಂಡಿದೆ. ಭಾರತದ ಹುಲಿಗಳ ಅಬ್ಬರಕ್ಕೆ ನಡುಗಿದ ಹರಿಣಗಳು ಕೇವಲ 83 ರನ್​ಗಳಿಗೆ ಆಲೌಟ್ ಆಗುವ ಮೂಲಕ ಬರೋಬ್ಬರಿ 243 ರನ್​ಗಳಿಂದ ಸೋಲು ಕಂಡಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಅವರ ಅಜೇಯ 101 ಮತ್ತು ಶ್ರೇಯಸ್ ಅಯ್ಯರ್ (Shreyas Iyer) ಅವರ 77 ರನ್‌ಗಳ ಆಧಾರದ ಮೇಲೆ ಮೊದಲು ಬ್ಯಾಟ್ ಮಾಡಿದ ಭಾರತ ಐದು ವಿಕೆಟ್ ಕಳೆದುಕೊಂಡು 326 ರನ್ ಕಲೆಹಾಕಿತು. ಈ ಇಡೀ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಬಿರುಸಿನ ಆಟ ಪ್ರದರ್ಶಿಸಿದ್ದು, ಈ ಪಂದ್ಯ ರೋಚಕವಾಗಲಿದೆ ಎಂದು ಸಂಪೂರ್ಣವಾಗಿ ನಿರೀಕ್ಷಿಸಲಾಗಿತ್ತು. ಆದರೆ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾಕ್ಕೆ ಆರಂಭದಲ್ಲಿ ಆಘಾತ ನೀಡಿದರು. ಇದಾದ ಬಳಿಕ ರವೀಂದ್ರ ಜಡೇಜಾ ಅವರ ಸ್ಪಿನ್‌ಗೆ ದಕ್ಷಿಣ ಆಫ್ರಿಕಾ ಬ್ಯಾಟ್ಸ್‌ಮನ್‌ಗಳು ಒಬ್ಬೊಬ್ಬರಾಗಿ ಕುಸಿದು ಬಿದ್ದು ಇಡೀ ತಂಡ 27.1 ಓವರ್‌ಗಳಲ್ಲಿ ಕೇವಲ 87 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಟೀಂ ಇಂಡಿಯಾ ಲೀಗ್ ಹಂತವನ್ನು ಮೊದಲ ಸ್ಥಾನದಲ್ಲಿಯೇ ಕೊನೆಗೊಳಿಸುವುದು ಖಚಿತವಾಯಿತು.

ನಂ.1 ತಂಡವಾಗಿ ಭಾರತ ಸೆಮಿಸ್​ಗೆ ಎಂಟ್ರಿ

ದಕ್ಷಿಣ ಆಫ್ರಿಕಾವನ್ನು 243 ರನ್‌ಗಳಿಂದ ಸೋಲಿಸಿದ ಟೀಂ ಇಂಡಿಯಾ ಈ ಗೆಲುವಿನೊಂದಿಗೆ ವಿಶ್ವಕಪ್​ನಲ್ಲಿ ತನ್ನ  ಅಜೇಯ ಓಟವನ್ನು ಮುಂದುವರೆಸಿದೆ. ಭಾರತ ಸತತ ಎಂಟು ಗೆಲುವಿನೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದೆ. ಅಲ್ಲದೆ ಸೆಮಿಫೈನಲ್​ಗೂ ಭಾರತ ಅಗ್ರಸ್ಥಾನದಲ್ಲಿಯೇ ಮುಂದುವರೆಯುವುದು ಖಚಿತವಾಗಿದೆ. ಅದೇ ಸಮಯದಲ್ಲಿ, ದಕ್ಷಿಣ ಆಫ್ರಿಕಾ ಈ ಟೂರ್ನಿಯಲ್ಲಿ ತನ್ನ ಎರಡನೇ ಸೋಲನ್ನು ಎದುರಿಸಿದೆಯಾದರೂ, ಈ ತಂಡವು ಈಗಾಗಲೇ ಸೆಮಿಫೈನಲ್ ತಲುಪಿದೆ.

IND vs SA: ದಾಖಲೆಯ ಶತಕ ಸಿಡಿಸಿದ ವಿರಾಟ್; ಆಫ್ರಿಕಾ ಗೆಲುವಿಗೆ 327 ರನ್ ಟಾರ್ಗೆಟ್

ತತ್ತರಿಸಿದ ಆಫ್ರಿಕಾ

ಟೀಂ ಇಂಡಿಯಾದ ಮಾರಕ ಬೌಲಿಂಗ್ ಮುಂದೆ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್‌ಗಳು ಸಂಪೂರ್ಣ ವಿಫಲರಾದರು. ಆಫ್ರಿಕಾದ 6 ಬ್ಯಾಟ್ಸ್‌ಮನ್‌ಗಳು ಎರಡಂಕಿ ಕೂಡ ತಲುಪಲು ಸಾಧ್ಯವಾಗಲಿಲ್ಲ. ನಾಲ್ವರು ಆಟಗಾರರು 10 ಕ್ಕೂ ಹೆಚ್ಚು ರನ್ ಗಳಿಸಿದರೆ ಮಾರ್ಕೊ ಯಾನ್ಸೆನ್ 14 ರನ್ ಗಳಿಸಿದ್ದೆ ತಂಡದ ಪರ ಸಿಡಿದ ಅತ್ಯಧಿಕ ಸ್ಕೋರ್ ಆಯಿತು. ಯಾನ್ಸೆನ್ ಹೊರತುಪಡಿಸಿ ರಾಸ್ಸಿ ವ್ಯಾನ್ ಡೆರ್ ಡುಸೆನ್ 13 ರನ್ ಬಾರಿಸಿದರೆ, ನಾಯಕ ಟೆಂಬಾ ಬವುಮಾ ಮತ್ತು ಡೇವಿಡ್ ಮಿಲ್ಲರ್ ಇಬ್ಬರೂ ತಲಾ 11 ರನ್​ಗಳ ಕೊಡುಗೆ ನೀಡಿದರು. ಲುಂಗಿ ಎನ್‌ಗಿಡಿ ಶೂನ್ಯಕ್ಕೆ ಔಟಾದರೆ, ತರ್ಬೇಜ್ ಶಮ್ಸಿ 4 ರನ್ ಗಳಿಸಿ ಅಜೇಯರಾಗಿ ಮರಳಿದರು.

ಐದು ವಿಕೆಟ್ ಉರುಸಿದ ಜಡೇಜಾ

ಟೀಂ ಇಂಡಿಯಾ ಪರ ಮಾರಕ ದಾಳಿ ನಡೆಸಿದ ರವೀಂದ್ರ ಜಡೇಜಾ 5 ವಿಕೆಟ್ ಪಡೆದು ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪರ 5 ವಿಕೆಟ್ ಪಡೆದ ಎರಡನೇ ಸ್ಪಿನ್ನರ್ ಎನಿಸಿಕೊಂಡರು. ಜಡ್ಡು 9 ಓವರ್​ಗಳಲ್ಲಿ 33 ರನ್ ನೀಡಿ ಈ 5 ವಿಕೆಟ್ ಪಡೆದರು. ಮೊಹಮ್ಮದ್ ಶಮಿ ಮತ್ತು ಕುಲ್ದೀಪ್ ಯಾದವ್ ತಲಾ 2 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದು ಇತರರಿಗೆ ಉತ್ತಮ ಬೆಂಬಲ ನೀಡಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:37 pm, Sun, 5 November 23

ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಮಾತಿಗೆ ಅಡ್ಡಿಪಡಿಸುತ್ತಿದ್ದ ರಾಯರೆಡ್ಡಿಯವರಿಗೆ ಸುಮ್ಮನಿರಲು ಹೇಳಿದ ಯತ್ನಾಳ್
ಮಾತಿಗೆ ಅಡ್ಡಿಪಡಿಸುತ್ತಿದ್ದ ರಾಯರೆಡ್ಡಿಯವರಿಗೆ ಸುಮ್ಮನಿರಲು ಹೇಳಿದ ಯತ್ನಾಳ್
ಗೋಡೆ ಬಳಿ ಹೋಗಿ ಅಳುತ್ತಿರುವ ಹನುಮಂತ; ಬಿಗ್ ಬಾಸ್​ ಮನೆಯಲ್ಲಿ ಏನಾಯ್ತು?
ಗೋಡೆ ಬಳಿ ಹೋಗಿ ಅಳುತ್ತಿರುವ ಹನುಮಂತ; ಬಿಗ್ ಬಾಸ್​ ಮನೆಯಲ್ಲಿ ಏನಾಯ್ತು?
ಮಂತ್ರಿಗಳಿಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಶಾಸಕರು ನಿಲ್ಲೋದ್ಯಾಕೆ? ಯತ್ನಾ
ಮಂತ್ರಿಗಳಿಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಶಾಸಕರು ನಿಲ್ಲೋದ್ಯಾಕೆ? ಯತ್ನಾ
ವಿರೋಧಫಕ್ಷದವರು ಸಭಾತ್ಯಾಗ ಮಾಡೋದು ವಾಡಿಕೆ, ಆದರೆ ಇಲ್ಲಿ ಸಿಎಂ!
ವಿರೋಧಫಕ್ಷದವರು ಸಭಾತ್ಯಾಗ ಮಾಡೋದು ವಾಡಿಕೆ, ಆದರೆ ಇಲ್ಲಿ ಸಿಎಂ!
ಎಲ್ಲರ ಆಟಕ್ಕೆ ಅಡ್ಡಗಾಲು ಹಾಕಿದ ಮಂಜು, ಗೌತಮಿ ಫುಲ್ ಗರಂ
ಎಲ್ಲರ ಆಟಕ್ಕೆ ಅಡ್ಡಗಾಲು ಹಾಕಿದ ಮಂಜು, ಗೌತಮಿ ಫುಲ್ ಗರಂ
ಸಿಎಂ ಕರೆದಿರುವ ವಿಷಯ ಹೇಳಿದಾಗ ಸಿಸಿ ಪಾಟೀಲ್ ಕುಂಟುನೆಪ ಹೇಳಿದರು: ಸಚಿವೆ
ಸಿಎಂ ಕರೆದಿರುವ ವಿಷಯ ಹೇಳಿದಾಗ ಸಿಸಿ ಪಾಟೀಲ್ ಕುಂಟುನೆಪ ಹೇಳಿದರು: ಸಚಿವೆ
ಸ್ವಾಮೀಜಿ ಬಿಜೆಪಿಯವರಾ ಅಂತ ಕೇಳುತ್ತಿರೋದು ಹಾಸ್ಯಾಸ್ಪದ: ಅಶೋಕ
ಸ್ವಾಮೀಜಿ ಬಿಜೆಪಿಯವರಾ ಅಂತ ಕೇಳುತ್ತಿರೋದು ಹಾಸ್ಯಾಸ್ಪದ: ಅಶೋಕ
ಸಾಕಿದ ಮಾವುತ ಬಿಟ್ಟು ಹೊರಟಾಗ ಓಡೋಡಿ ಹೋಗಿ ಎಳೆದು ತಂದ ಆನೆ ಮರಿ
ಸಾಕಿದ ಮಾವುತ ಬಿಟ್ಟು ಹೊರಟಾಗ ಓಡೋಡಿ ಹೋಗಿ ಎಳೆದು ತಂದ ಆನೆ ಮರಿ
ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರ ನಡೆಸಿಕೊಟ್ಟ ರೀತಿ ಅಭಿನಂದನೀಯ: ವಿಶ್ವನಾಥ್
ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರ ನಡೆಸಿಕೊಟ್ಟ ರೀತಿ ಅಭಿನಂದನೀಯ: ವಿಶ್ವನಾಥ್