AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಶ್ರೇಯಸ್ ಶತಕ.. ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್; 2ನೇ ಏಕದಿನ ಪಂದ್ಯ ಗೆದ್ದ ಟೀಂ ಇಂಡಿಯಾ

IND vs SA: ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರ ಬಲಿಷ್ಠ ಇನ್ನಿಂಗ್ಸ್‌ನಿಂದಾಗಿ ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ.

IND vs SA: ಶ್ರೇಯಸ್ ಶತಕ.. ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್; 2ನೇ ಏಕದಿನ ಪಂದ್ಯ ಗೆದ್ದ ಟೀಂ ಇಂಡಿಯಾ
ಶ್ರೇಯಸ್- ಸಂಜು
TV9 Web
| Edited By: |

Updated on:Oct 09, 2022 | 9:23 PM

Share

ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ (Shreyas Iyer and Ishan Kishan) ಅವರ ಬಲಿಷ್ಠ ಇನ್ನಿಂಗ್ಸ್‌ನಿಂದಾಗಿ ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಇದರೊಂದಿಗೆ ಧವನ್ ಪಡೆ 3 ಪಂದ್ಯಗಳ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ರಾಂಚಿಯಲ್ಲಿ ನಡೆದ ಈ ಪಂದ್ಯದಲ್ಲಿ ತಂಡದ ಗೆಲುವಿನ ಹೀರೋಗಳು ಅಯ್ಯರ್ ಮತ್ತು ಕಿಶನ್. ಇದೇ ವೇಳೆ ಅಯ್ಯರ್ ತಮ್ಮ ಏಕದಿನ ವೃತ್ತಿಜೀವನದ ಎರಡನೇ ಶತಕವನ್ನೂ ಗಳಿಸಿದರೆ, ಕೇವಲ 7 ರನ್​ಗಳಿಂದ ಕಿಶನ್ ಶತಕ ವಂಚಿತರಾದರು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಭಾರತಕ್ಕೆ 279 ರನ್‌ಗಳ ಟಾರ್ಗೆಟ್ ನೀಡಿತು. ಇದಕ್ಕೆ ಉತ್ತರವಾಗಿ ಭಾರತ ತಂಡ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

279 ರನ್‌ಗಳ ಗುರಿ ಬೆನ್ನಟ್ಟಿದ ಭಾರತ 48 ರನ್‌ಗಳ ಅಂತರದಲ್ಲಿ ತನ್ನ ಆರಂಭಿಕರಿಬ್ಬರನ್ನು ಕಳೆದುಕೊಂಡಿತು. ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಬೇಗನೇ ಪೆವಿಲಿಯನ್‌ಗೆ ಮರಳಿದರು. ಇದರ ನಂತರ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅದ್ಭುತ ಜೊತೆಯಾಟ ನಡೆಸಿ ಸ್ಕೋರ್ ಅನ್ನು 200 ರ ಗಡಿ ದಾಟಿಸಿದರು.

ಅಯ್ಯರ್ ಅಜೇಯ ಶತಕ

ಅಯ್ಯರ್ ಮತ್ತು ಕಿಶನ್ ಎರಡೂ ತುದಿಗಳಿಂದ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದರು. ಕಿಶನ್ ಔಟಾದ ಬಳಿಕ ಅಯ್ಯರ್‌ಗೆ ಜೊತೆಯಾದ ಸಂಜು ಸ್ಯಾಮ್ಸನ್ ತಂಡವನ್ನು ಗೆಲುವಿನ ದಡ ಸೇರಿಸಿದರು. 113 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದ ಅಯ್ಯರ್, 111 ಎಸೆತಗಳಲ್ಲಿ 15 ಬೌಂಡರಿಗಳನ್ನು ಬಾರಿಸಿದರು. ಕಿಶನ್ 84 ಎಸೆತಗಳಲ್ಲಿ 93 ರನ್ ಗಳಿಸಿದರೆ, ಸಂಜು ಸ್ಯಾಮ್ಸನ್ 30 ರನ್ ಗಳಿಸಿ ಅಜೇಯರಾಗಿ ಉಳಿದರು.

ಭಾರತದ ಉತ್ತಮ ಬೌಲಿಂಗ್‌ ಪ್ರದರ್ಶನ

ಇದಕ್ಕೂ ಮುನ್ನ ರೀಜಾ ಹೆಂಡ್ರಿಕ್ಸ್ ಮತ್ತು ಏಡನ್ ಮಾರ್ಕ್ರಾಮ್ ದಕ್ಷಿಣ ಆಫ್ರಿಕಾ ಪರ ಬ್ಯಾಟ್ ಬೀಸಿ ಸಂಚಲನ ಮೂಡಿಸಿದ್ದರು. ಇನ್ನಿಂಗ್ಸ್​ನ ಆರಂಭದಲ್ಲೇ ತಮ್ಮ ಕೈಚೆಳಕ ತೋರಿದ ಭಾರತದ ಬೌಲರ್‌ಗಳು ಕ್ವಿಂಟನ್ ಡಿ ಕಾಕ್ ಅವರನ್ನು 7 ರನ್​ಗಳಿಗೆ ವಜಾಗೊಳಿಸಿದರು. ಇದಾದ ನಂತರ ತಂಡದ ಸ್ಕೋರ್ 40 ರನ್ ಇದ್ದಾಗ ಮಲಾನ್ ಪೆವಿಲಿಯನ್​ಗೆ ಮರಳಿದರು.

ಹೆಂಡ್ರಿಕ್ಸ್ ಮತ್ತು ಮಾರ್ಕ್ರಾಮ್ ಜೊತೆಯಾಟ 2 ವಿಕೆಟ್ ಕಳೆದುಕೊಂಡ ನಂತರ ಜೊತೆಯಾದ ಹೆಂಡ್ರಿಕ್ಸ್ ಮತ್ತು ಮಾರ್ಕ್ರಾಮ್ ದಕ್ಷಿಣ ಆಫ್ರಿಕಾದ ಇನ್ನಿಂಗ್ಸ್ ಕಟ್ಟಿದರು. ಈ ಇಬ್ಬರೂ ಅರ್ಧಶತಕಗಳನ್ನು ಗಳಿಸಿದಲ್ಲದೆ ಉತ್ತಮ ಜೊತೆಯಾಟವನ್ನು ಹಂಚಿಕೊಂಡು ತಂಡದ ಮೊತ್ತವನ್ನು 169 ರನ್‌ಗಳಿಗೆ ಕೊಂಡೊಯ್ದರು. ಈ ಜೊತೆಯಾಟವನ್ನು ಮುರಿದ ಮೊಹಮ್ಮದ್ ಸಿರಾಜ್, 74 ರನ್‌ಗಳಿಸಿದ್ದ ಹೆಂಡ್ರಿಕ್ಸ್‌ರನ್ನು ಪೆವಿಲಿಯನ್‌ಗೆ ಕಳುಹಿಸಿದರು.

ಹೆನ್ರಿಕ್ಸ್ ಅವರ ವಿಕೆಟ್ ಪತನದ ನಂತರ, ಹೆನ್ರಿಚ್ ಕ್ಲಾಸೆನ್ ಅವರೊಂದಿಗೆ ಮಾರ್ಕ್ರಾಮ್ ತಂಡದ ಮೊತ್ತವನ್ನು 200 ರ ಗಡಿ ಮೀರಿಸಿದರು. ಆದರೆ ತಂಡದ ಮೊತ್ತ 215 ರನ್ ಇದ್ದಾಗ ದಕ್ಷಿಣ ಆಫ್ರಿಕಾಕ್ಕೆ ಕ್ಲಾಸೆನ್ ಮತ್ತು ಮಾರ್ಕ್ರಾಮ್ ವಿಕೆಟ್ ರೂಪದಲ್ಲಿ ಬ್ಯಾಕ್ ಟು ಬ್ಯಾಕ್ ಆಘಾತ ಎದುರಾಯಿತು. ಅಂತಿಮವಾಗಿ ಡೇವಿಡ್ ಮಿಲ್ಲರ್ 35 ರನ್​ಗಳ ನಿದಾನಗತಿಯ ಇನ್ನಿಂಗ್ಸ್ ಆಡಿ ಅಜೇಯರಾಗಿ ಉಳಿದರೆ, ವೇಯ್ನ್ ಪಾರ್ನೆಲ್ 16 ರನ್ ಗಳಿಸಿದರು. ಆದರೆ ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದ ದಕ್ಷಿಣ ಆಫ್ರಿಕಾದ ಬ್ಯಾಟರ್​ಗಳ ವೇಗಕ್ಕೆ ಬ್ರೇಕ್ ಹಾಕುವಲ್ಲಿ ಭಾರತೀಯ ಬೌಲರ್‌ಗಳು ಯಶಸ್ವಿಯಾದರು. ಸಿರಾಜ್ 3 ವಿಕೆಟ್ ಪಡೆದರೆ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಕುಲದೀಪ್ ಯಾದವ್ ಮತ್ತು ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.

Published On - 9:12 pm, Sun, 9 October 22

VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು