AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: 11 ಎಸೆತ, 0 ರನ್, 6 ವಿಕೆಟ್ ಪತನ! 153 ರನ್​ಗಳಿಗೆ ಭಾರತ ಆಲೌಟ್

IND vs SA: 2ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 55 ರನ್​ಗಳಿಗೆ ಆಲೌಟ್ ಆಗಿತ್ತು. ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಕೂಡ 153 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ 98 ರನ್​ಗಳ ಮುನ್ನಡೆ ಕಾಯ್ದುಕೊಂಡಿದೆ.

IND vs SA: 11 ಎಸೆತ, 0 ರನ್, 6 ವಿಕೆಟ್ ಪತನ! 153 ರನ್​ಗಳಿಗೆ ಭಾರತ ಆಲೌಟ್
ಆಫ್ರಿಕಾ ತಂಡ
ಪೃಥ್ವಿಶಂಕರ
|

Updated on:Jan 03, 2024 | 7:46 PM

Share

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 55 ರನ್​ಗಳಿಗೆ ಆಲೌಟ್ ಆಗಿತ್ತು. ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಕೂಡ 153 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ 98 ರನ್​ಗಳ ಮುನ್ನಡೆ ಕಾಯ್ದುಕೊಂಡಿದೆ. ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ (Virat Kohli) ಅತ್ಯಧಿಕ 46 ರನ್​ಗಳ ಇನ್ನಿಂಗ್ಸ್ ಆಡಿದರೆ, ನಾಯಕ ರೋಹಿತ್ ಶರ್ಮಾ(Rohit Sharma) 39 ಹಾಗೂ ಶುಭ್​ಮನ್​ ಗಿಲ್ (Shubman Gill) 36 ರನ್​ಗಳ ಕೊಡುಗೆ ನೀಡಿದರು.

ಭಾರತಕ್ಕೂ ಕಳಪೆ ಆರಂಭ

ಆಫ್ರಿಕಾ ನೀಡಿದ 55 ರನ್​ಗಳ ಗುರಿ ಬೆನ್ನತ್ತಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಯಶಸ್ವಿ ಜೈಸ್ವಾಲ್ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಜೊತೆಯಾದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ತಂಡದ ಇನ್ನಿಂಗ್ಸ್​ಗೆ ಜೀವ ತುಂಬಿದರು. ಇಬ್ಬರು ಅರ್ಧಶತಕದ ಜೊತೆಯಾಟ ಕೂಡ ಹಂಚಿಕೊಂಡರು. ಈ ವೇಳೆ ರೋಹಿತ್ ಶರ್ಮಾ 39 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರೆ, ಶುಭ್​ಮನ್ ಗಿಲ್ ಕೂಡ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲದೆ 36 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು.

ಯಾವ ತಂಡಕ್ಕೂ ಸಾಧ್ಯವಾಗದ ವಿಶಿಷ್ಟ ದಾಖಲೆ ಬರೆದ ಟೀಂ ಇಂಡಿಯಾ ವೇಗಿಗಳು..!

11 ಎಸೆತಗಳಲ್ಲಿ 6 ವಿಕೆಟ್ ಪತನ

ಗಿಲ್ ವಿಕೆಟ್ ಬಳಿಕ ಬಂದ ಶ್ರೇಯಸ್ ಅಯ್ಯರ್ ಕೂಡ 2 ಎಸೆತಗಳಲ್ಲಿ ಸುಸ್ತಾಗಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ಆದರೆ ಒಂದು ತುದಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಮೊದಲ ಪಂದ್ಯದಲ್ಲಿ ಶತಕ ಬಾರಿಸಿದ್ದ ಕೆಎಲ್ ರಾಹುಲ್ 8 ರನ್​ಗಳಿಗೆ ಪೆವಿಲಿಯನ್ ಹಾದಿ ಹಿಡಿದರೆ, ಈ ವಿಕೆಟ್ ಬಳಿಕ ಬಂದ ಯಾವ ಬ್ಯಾಟರ್​ಗೂ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಕೊನೆಯ 6 ವಿಕೆಟ್​ಗಳು ಕೇವಲ 11 ಎಸೆತಗಳಲ್ಲಿ ಪತನವಾದವು.

2 ಓವರ್​ಗಳಲ್ಲಿ ತಲಾ 3 ವಿಕೆಟ್

ಅರ್ಧಶತಕದ ಅಂಚಿನಲ್ಲಿದ್ದ ವಿರಾಟ್ ಕೊಹ್ಲಿ ಕೂಡ 46 ರನ್​ಗಳಿಗೆ ಸ್ಲಿಪ್​ನಲ್ಲಿ ಕ್ಯಾಚಿತ್ತು ಔಟಾದರು. ಕೊನೆಯ 4 ಬ್ಯಾಟರ್​ಗಳು ಖಾತೆ ತೆರೆಯದೆ ಔಟಾಗಿದ್ದು, ಆಫ್ರಿಕಾ ಬೌಲರ್​ಗಳ ಮಾರಕ ದಾಳಿಗೆ ಕೈಗನ್ನಡಿಯಾಗಿತ್ತು. ಕೊನೆಯ ಎರಡು ಓವರ್​ಗಳಲ್ಲಿ ಲುಂಗಿ ಎನ್​ಗಿಡಿ ಯಾವುದೇ ರನ್ ನೀಡಿದೆ 3 ವಿಕೆಟ್ ಪಡೆದರೆ, ಕಗಿಸೋ ರಬಾಡ ಕೂಡ ಒಂದೇ ಓವರ್​ನಲ್ಲಿ 3 ವಿಕೆಟ್​ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Wed, 3 January 24

Follow Us
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!