IND vs SA: 5 ಬೌಲರ್ಸ್​, ರಹಾನೆಗೆ ಅವಕಾಶ; ಬಾಕ್ಸಿಂಗ್ ಡೇ ಟೆಸ್ಟ್​ಗೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

IND vs SA: 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಭಾರತ ತಂಡವು ರಹಾನೆ ಮೇಲೆ ನಂಬಿಕೆ ಇರಿಸಿದೆ ಮತ್ತು ಅವರ ಅನುಭವಕ್ಕೆ ಬೆಲೆ ನೀಡಿದೆ ಎಂಬುದು ಒಳ್ಳೆಯ ವಿಚಾರ. 5 ಬೌಲರ್‌ಗಳೊಂದಿಗೆ ಭಾರತ ಕಣಕ್ಕಿಳಿಯುತ್ತಿದೆ.

IND vs SA: 5 ಬೌಲರ್ಸ್​, ರಹಾನೆಗೆ ಅವಕಾಶ; ಬಾಕ್ಸಿಂಗ್ ಡೇ ಟೆಸ್ಟ್​ಗೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಟೀಂ ಇಂಡಿಯಾ
Follow us
TV9 Web
| Updated By: ಪೃಥ್ವಿಶಂಕರ

Updated on: Dec 26, 2021 | 1:28 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3-ಟೆಸ್ಟ್ ಸರಣಿಯ ಮೊದಲ ಪಂದ್ಯ ಅಥವಾ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಸೆಂಚುರಿಯನ್ ಮೈದಾನದಲ್ಲಿ ಈಗ ಸ್ವಲ್ಪ ತಡವಾಗಿ ನಡೆಯಲಿದೆ. ಈ ಪಂದ್ಯದ ಟಾಸ್ ಮುಗಿದಿದ್ದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಟಾಸ್ ಗೆದ್ದ ನಂತರ, ಸ್ಕೋರ್ ಬೋರ್ಡ್‌ನಲ್ಲಿ ರನ್ ಗಳಿಸುವುದು ಲಾಭದಾಯಕ ವ್ಯವಹಾರವಾಗಿದೆ ಎಂದು ಕೊಹ್ಲಿ ಹೇಳಿದರು. ಟಾಸ್ ನಂತರ, ಎರಡೂ ತಂಡಗಳು ತಮ್ಮ ಪ್ಲೇಯಿಂಗ್ XI ಅನ್ನು ಘೋಷಿಸಿಕೊಂಡಿವೆ.

ಸೆಂಚುರಿಯನ್‌ನ ಸೂಪರ್ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಭಾರತ ತಂಡದ ಇತಿಹಾಸ ಉತ್ತಮವಾಗಿರಲಿಲ್ಲ. ಇಲ್ಲಿ ಆಡಿದ ಕೊನೆಯ ಎರಡು ಟೆಸ್ಟ್‌ಗಳಲ್ಲಿ ಭಾರತ ಸೋಲನ್ನು ಎದುರಿಸಬೇಕಾಯಿತು. ಆದರೆ, ಈ ಬಾರಿಯ ಉದ್ದೇಶವೇ ಬೇರೆ. ವಿರಾಟ್ ಕೊಹ್ಲಿ ಆಯ್ಕೆ ಮಾಡಿರುವ ಪ್ಲೇಯಿಂಗ್ ಇಲೆವೆನ್ ಇತಿಹಾಸ ಬದಲಿಸುವ ಉದ್ದೇಶದಿಂದ ಮೈದಾನಕ್ಕೆ ಬರಲಿದೆ. 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಭಾರತ ತಂಡವು ರಹಾನೆ ಮೇಲೆ ನಂಬಿಕೆ ಇರಿಸಿದೆ ಮತ್ತು ಅವರ ಅನುಭವಕ್ಕೆ ಬೆಲೆ ನೀಡಿದೆ ಎಂಬುದು ಒಳ್ಳೆಯ ವಿಚಾರ. 5 ಬೌಲರ್‌ಗಳೊಂದಿಗೆ ಭಾರತ ಕಣಕ್ಕಿಳಿಯುತ್ತಿದೆ.

ಭಾರತದ ಬೌಲಿಂಗ್‌ ವಿಭಾಗ ಹೀಗಿದೆ ಅಶ್ವಿನ್, ಬುಮ್ರಾ, ಶಮಿ, ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಸೇರಿದಂತೆ 5 ಬೌಲರ್‌ಗಳನ್ನು ಭಾರತವು ಬೌಲಿಂಗ್ ವಿಭಾಗದಲ್ಲಿ ಸೇರಿಸಿದೆ. ಇದರರ್ಥ ಅನುಭವಿ ವೇಗದ ಬೌಲರ್ ಇಶಾಂತ್ ಶರ್ಮಾ ಅವಕಾಶಕ್ಕಾಗಿ ಕಾಯಬೇಕಾಗಿದೆ.

ಸೆಂಚುರಿಯನ್ ಟೆಸ್ಟ್‌ಗಾಗಿ ಎರಡೂ ತಂಡಗಳ ಆಡುವ XI ಭಾರತದ ಪ್ಲೇಯಿಂಗ್ XI ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್, ಆರ್. ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್

ದಕ್ಷಿಣ ಆಫ್ರಿಕಾದ ಪ್ಲೇಯಿಂಗ್ XI ಡೀನ್ ಎಲ್ಗರ್ (ನಾಯಕ), ಏಡನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರೋಸಿ ವ್ಯಾನ್ ಡೆರ್ ದುಸಾಯ್, ಟೆಂಬಾ ಬೌಮಾ, ಕ್ವಿಂಟನ್ ಡಿ ಕಾಕ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ, ಮಾರ್ಕೊ ಯಾನ್ಸನ್

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್