IND vs SA: ಭಾರತ-ದಕ್ಷಿಣ ಆಫ್ರಿಕಾ ಸರಣಿ ವೇಳಾಪಟ್ಟಿ ಬದಲಾವಣೆ

IND vs SA: ಭಾರತ ಈ ಹಿಂದೆ 2018ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿತ್ತು. ಆ ಪ್ರವಾಸದಲ್ಲಿ ಟೀಮ್ ಇಂಡಿಯಾ ಟೆಸ್ಟ್ ಸರಣಿಯಲ್ಲಿ 1-2 ಅಂತರದ ಸೋಲನ್ನು ಎದುರಿಸಬೇಕಾಯಿತು.

IND vs SA: ಭಾರತ-ದಕ್ಷಿಣ ಆಫ್ರಿಕಾ ಸರಣಿ ವೇಳಾಪಟ್ಟಿ ಬದಲಾವಣೆ
IND vs SA
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 04, 2021 | 10:48 PM

ದಕ್ಷಿಣ ಆಫ್ರಿಕಾದಲ್ಲಿ ಕೊರೋನಾ ವೈರಸ್ ಓಮಿಕ್ರಾನ್‌ನ ಹೊಸ ರೂಪಾಂತರದ ಭೀತಿ ಹಿನ್ನಲೆಯ ನಡುವೆ, ಭಾರತ ಕ್ರಿಕೆಟ್ ತಂಡವು ಟೆಸ್ಟ್ ಮತ್ತು ಏಕದಿನ ಸರಣಿಗಾಗಿ ಈ ತಿಂಗಳು ಪ್ರವಾಸ ಮಾಡಲಿದೆ. ಎಲ್ಲಾ ಆತಂಕಗಳು ಮತ್ತು ಊಹಾಪೋಹಗಳನ್ನು ಬದಿಗಿಟ್ಟು, ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಭಾರತ ತಂಡ ತೆರಳಲಿದೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ. ಆದಾಗ್ಯೂ, ಈ ಸರಣಿಯ ವೇಳಾಪಟ್ಟಿಯಲ್ಲೂ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಈ ಮೊದಲು ಡಿಸೆಂಬರ್ 17 ರಿಂದ ಟೆಸ್ಟ್ ಸರಣಿ ಆರಂಭವಾಗಬೇಕಿತ್ತು. ಆದರೆ ಇದೀಗ 9 ದಿನಗಳ ನಂತರ ಅಂದರೆ ಡಿಸೆಂಬರ್ 26 ರಿಂದ ಆರಂಭವಾಗಲಿದೆ. ಮೂರು ಪಂದ್ಯಗಳ ಸರಣಿಯು ‘ಬಾಕ್ಸಿಂಗ್ ಡೇ ಟೆಸ್ಟ್’ನೊಂದಿಗೆ ಪ್ರಾರಂಭವಾಗಲಿದೆ. ನಂತರ ಏಕದಿನ ಸರಣಿಯನ್ನು ಆಡಲಾಗುತ್ತದೆ. 4 ಪಂದ್ಯಗಳ ಟಿ20 ಸರಣಿಯನ್ನು ಮುಂದಿನ ವರ್ಷ ಹೊಸ ವೇಳಾಪಟ್ಟಿಯೊಂದಿಗೆ ಆಡಲಾಗುವುದು ಎಂದು ಎರಡೂ ಮಂಡಳಿಗಳು ಒಟ್ಟಾಗಿ ನಿರ್ಧರಿಸಿವೆ.

ಭಾರತ ತಂಡವು ತನ್ನ ಬದ್ಧತೆಯನ್ನು ಉಳಿಸಿಕೊಂಡು ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮುಂದುವರಿಸಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶನಿವಾರ ಖಚಿತಪಡಿಸಿದ್ದರು. ಆದಾಗ್ಯೂ, ಪ್ರವಾಸದಲ್ಲಿ ಮೂರು ಮಾದರಿಗಳ ಸರಣಿಯನ್ನು ಆಡುವುದಿಲ್ಲ ಎಂದು ಶಾ ಹೇಳಿದ್ದರು. ಟೆಸ್ಟ್ ಮತ್ತು ಏಕದಿನ ಸರಣಿ ಮಾತ್ರ ನಡೆಯಲಿದ್ದು, ಟಿ20 ಪಂದ್ಯದ ವೇಳಾಪಟ್ಟಿಯನ್ನು ನಂತರ ಸಿದ್ಧಪಡಿಸಲಾಗುವುದು ಎಂದು ಹೇಳಿದ್ದರು. ಭಾರತ ತಂಡದ ಪ್ರವಾಸವು ನಿಗದಿತ ವೇಳಾಪಟ್ಟಿಯ ಪ್ರಕಾರ ನಡೆಯಲಿದೆ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾ ಕೂಡ ಘೋಷಿಸಿತ್ತು. ಆದರೆ ನಂತರ ಅದನ್ನು ಕೆಲವು ದಿನಗಳವರೆಗೆ ಮುಂದೂಡಲು ನಿರ್ಧರಿಸಲಾಯಿತು.

ಶನಿವಾರ ಕೋಲ್ಕತ್ತಾದಲ್ಲಿ ನಡೆದ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾರತ ತಂಡದ ದಕ್ಷಿಣ ಆಫ್ರಿಕಾ ಪ್ರವಾಸದ ಕುರಿತು ಚರ್ಚಿಸಲಾಗಿದ್ದು, ಹಿಂದಿನ ವೇಳಾಪಟ್ಟಿಗಿಂತ ಭಿನ್ನವಾಗಿ ಡಿಸೆಂಬರ್ 17 ರ ಬದಲಿಗೆ ಡಿಸೆಂಬರ್ 26 ರಿಂದ ಪ್ರವಾಸವನ್ನು ಪ್ರಾರಂಭಿಸಲು ನಿರ್ಧರಿಸಲಾಯಿತು. ಭಾರತ ತಂಡ ಡಿಸೆಂಬರ್ 8 ರಂದು ದಕ್ಷಿಣ ಆಫ್ರಿಕಾಕ್ಕೆ ತೆರಳಬೇಕಿತ್ತು. ಇದೀಗ ಒಂದು ವಾರಗಳ ಬಳಿಕ ಸರಣಿಗಾಗಿ ಟೀಮ್ ಇಂಡಿಯಾವನ್ನು ಕಳುಹಿಸಲು ನಿರ್ಧರಿಸಲಾಗಿದೆ.

ಭಾರತ ಈ ಹಿಂದೆ 2018ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿತ್ತು. ಆ ಪ್ರವಾಸದಲ್ಲಿ ಟೀಮ್ ಇಂಡಿಯಾ ಟೆಸ್ಟ್ ಸರಣಿಯಲ್ಲಿ 1-2 ಅಂತರದ ಸೋಲನ್ನು ಎದುರಿಸಬೇಕಾಯಿತು. ಇದೀಗ ಭಾರತ ತಂಡ ಮತ್ತೊಮ್ಮೆ ಆಫ್ರಿಕಾ ಪ್ರವಾಸಕ್ಕೆ ಹೊರಟಿದೆ. ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ನೆಲದಲ್ಲಿ ಇಲ್ಲಿಯವರೆಗೆ ಯಾವುದೇ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಕೊಹ್ಲಿ-ರಾಹುಲ್ ದ್ರಾವಿಡ್ ನೇತೃತ್ವದ ತಂಡವು ಈ ಪ್ರವಾಸದಲ್ಲಿ ಈ ಕಾಯುವಿಕೆಯನ್ನು ಕೊನೆಗೊಳಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: IPL 20222: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

ಇದನ್ನೂ ಓದಿ: Aakash Chopra: ಚಹಲ್ ಬದಲಿಗೆ RCB ಇವರನ್ನು ಟಾರ್ಗೆಟ್ ಮಾಡಲಿದೆ..!

ಇದನ್ನೂ ಓದಿ: IPL 2022: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

(IND vs SA: Indian Team to tour South Africa with reschedule dates, Test series to start form 26th December)

Published On - 10:47 pm, Sat, 4 December 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್