IND vs SA: ಟೀಮ್ ಇಂಡಿಯಾದ ಆರಂಭಿಕರು ಯಾರು?

India vs South Africa: ಟೀಮ್ ಇಂಡಿಯಾದಲ್ಲಿ ಮೂವರು ಆರಂಭಿಕ ಆಟಗಾರರಿದ್ದಾರೆ. ಈ ಮೂವರು ಕೂಡ ಈಗಾಗಲೇ ಟೆಸ್ಟ್ ಕ್ರಿಕೆಟ್​ನಲ್ಲಿ ಓಪನರ್​ಗಳಾಗಿ ಇನಿಂಗ್ಸ್ ಆರಂಭಿಸಿದ್ದಾರೆ. ಇವರಲ್ಲಿ ಇಬ್ಬರನ್ನು ಆಯ್ಕೆ ಮಾಡಿಬೇಕಾದ ಸವಾಲು ಇದೀಗ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಮುಂದಿದೆ.

IND vs SA: ಟೀಮ್ ಇಂಡಿಯಾದ ಆರಂಭಿಕರು ಯಾರು?
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 26, 2023 | 10:38 AM

ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಟೆಸ್ಟ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ಸೆಂಚುರಿಯನ್​ನಲ್ಲಿನ ಸೂಪರ್​​ಸ್ಪೋರ್ಟ್​ ಪಾರ್ಕ್​ ಮೈದಾನದಲ್ಲಿ ಇಂದಿನಿಂದ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯುವವರು ಯಾರು ಎಂಬುದೇ ಪ್ರಶ್ನೆ.

ಏಕೆಂದರೆ ಟೀಮ್ ಇಂಡಿಯಾದಲ್ಲಿ ಮೂವರು ಆರಂಭಿಕ ಆಟಗಾರರಿದ್ದಾರೆ. ಈ ಮೂವರು ಕೂಡ ಈಗಾಗಲೇ ಟೆಸ್ಟ್ ಕ್ರಿಕೆಟ್​ನಲ್ಲಿ ಓಪನರ್​ಗಳಾಗಿ ಇನಿಂಗ್ಸ್ ಆರಂಭಿಸಿದ್ದಾರೆ. ಇವರಲ್ಲಿ ಇಬ್ಬರನ್ನು ಆಯ್ಕೆ ಮಾಡಿಬೇಕಾದ ಸವಾಲು ಇದೀಗ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಮುಂದಿದೆ.

ಇಲ್ಲಿ ಒಂದೆಡೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿಯುವುದು ಖಚಿತ. ಆದರೆ ಮತ್ತೊಂದೆಡೆ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಹಾಗೂ ಬಲಗೈ ಬ್ಯಾಟರ್ ಶುಭ್​ಮನ್ ಗಿಲ್ ನಡುವೆ ನೇರ ಪೈಪೋಟಿ ಇದೆ. ಇಲ್ಲಿ ಯಶಸ್ವಿ ಜೈಸ್ವಾಲ್ ಎಡಗೈ ಬ್ಯಾಟರ್ ಆಗಿರುವುದು ಪ್ಲಸ್ ಪಾಯಿಂಟ್.

ಇದೇ ಕಾರಣದಿಂದಾಗಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜೈಸ್ವಾಲ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಲಾಗಿತ್ತು. ಇದೀಗ ಸೌತ್ ಆಫ್ರಿಕಾ ವಿರುದ್ಧ ರೋಹಿತ್ ಶರ್ಮಾ ಜೊತೆ ಜೈಸ್ವಾಲ್ ಓಪನರ್​ ಆಗಿ ಕಣಕ್ಕಿಳಿದರೆ ಮೂರನೇ ಕ್ರಮಾಂಕದಲ್ಲಿ ಬದಲಾವಣೆ ಕಂಡು ಬರಲಿದೆ.

ಏಕೆಂದರೆ ಈ ಹಿಂದೆ ವಿಂಡೀಸ್ ವಿರುದ್ಧದ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್ ಆರಂಭಿಕನಾಗಿ ಕಣಕ್ಕಿಳಿದಿದ್ದ ಕಾರಣ ಶುಭ್​ಮನ್ ಗಿಲ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಆಡಿಸಲಾಗಿತ್ತು. ಅಲ್ಲದೆ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು.

ಇದೀಗ ಸೌತ್ ಆಫ್ರಿಕಾ ವಿರುದ್ಧ ಕೂಡ ಇದೇ ಕ್ರಮಾಂಕಗಳೊಂದಿಗೆ ಟಾಪ್-4 ಬ್ಯಾಟರ್​ಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಅದರಂತೆ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…

ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: IPL 2024: ಹಾರ್ದಿಕ್ ಪಾಂಡ್ಯಗಾಗಿ 100 ಕೋಟಿ ರೂ. ನೀಡಿದ ಮುಂಬೈ ಇಂಡಿಯನ್ಸ್..!

ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್,  ಕೆಎಸ್ ಭರತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್​ಪ್ರೀತ್  ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಅಭಿಮನ್ಯು ಈಶ್ವರನ್.

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ